ETV Bharat / state

ಮಂಗಳೂರು: ವೈದ್ಯೆಯೊಂದಿಗೆ ಅಸಭ್ಯ ವರ್ತನೆ ತೋರಿದ ಬಸ್ ಕ್ಲೀನರ್ ಬಂಧನ - ಉಳ್ಳಾಲದ ಕ್ರೈಂ ಸುದ್ದಿ

ಬೆಂಗಳೂರಿನಿಂದ ಮಂಗಳೂರಿಗೆ ಬರುವ ಬಸ್​ ಉಳ್ಳಾಲ ತಲುಪಿದಾಗ ಪ್ರಯಾಣಿಕರಾಗಿದ್ದ ವೈದ್ಯೆಯೊಬ್ಬರಿಗೆ ಬಸ್​ ಕ್ಲೀನರ್​ ಅಸಭ್ಯ ವರ್ತನೆ ತೋರಿಸಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

Accused Mohammed Imran
ಆರೋಪಿ ಮಹಮ್ಮದ್ ಇಮ್ರಾನ್
author img

By

Published : Nov 10, 2022, 1:32 PM IST

ಉಳ್ಳಾಲ(ದಕ್ಷಿಣ ಕನ್ನಡ): ಬೆಂಗಳೂರಿನಿಂದ ಮಂಗಳೂರಿಗೆ ಖಾಸಗಿ ಬಸ್​ನಲ್ಲಿ ಪ್ರಯಾಣಿಸುತ್ತಿದ್ದ ವೈದ್ಯೆಯೊಂದಿಗೆ ಬಸ್ ಕ್ಲೀನರ್ ಪ್ಯಾಂಟ್​ನ ಜಿಪ್ ಓಪನ್ ಮಾಡಿ ಅಸಭ್ಯವಾಗಿ ವರ್ತಿಸಿದ ಆರೋಪ ಪ್ರಕರಣ ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ಮುಂಜಾನೆ ನಡೆದಿದೆ.

ಘಟನೆ ವಿವರ: ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಆಗಿ ಕರ್ತವ್ಯದಲ್ಲಿರುವ ಮಹಿಳಾ ವೈದ್ಯೆಯೊಬ್ಬರು ಬೆಂಗಳೂರಿನಿಂದ ಮಂಗಳೂರಿಗೆ ಐಡಿಯಲ್ (KA51 AB 3649) ಬಸ್‌ನಲ್ಲಿ ಪ್ರಯಾಣ ಮಾಡುತ್ತಿದ್ದ‌ರು.

ಬಸ್ ಗುರುವಾರ ಮುಂಜಾನೆ ಉಳ್ಳಾಲ ಠಾಣಾ ವ್ಯಾಪ್ತಿಗೆ ತಲುಪಿದಾಗ ಬಸ್​ನಲ್ಲಿ ಕ್ಲೀನರ್ ಆಗಿ ಕೆಲಸ ಮಾಡುತ್ತಿದ್ಧ ಮಹಮ್ಮದ್ ಇಮ್ರಾನ್(26) ಎಂಬಾತ ಪ್ಯಾಂಟ್​ನ ಜಿಪ್ ತೆಗೆದು ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಮಹಿಳಾ ವೈದ್ಯೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿದ ಉಳ್ಳಾಲ ಪೊಲೀಸರು ಆರೋಪಿ ಬಜ್ಪೆ ಕೆಂಜೂರು ನಿವಾಸಿ ಮಹಮ್ಮದ್ ಇಮ್ರಾನ್ ಎಂಬಾತನನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ವಾಮಮಾರ್ಗದಲ್ಲಿ ವಿದೇಶಿಯರು ಸೇರಿ ಆರೋಪಿಗಳಿಗೂ ಪಾಸ್ ಪೋರ್ಟ್: ಅಕ್ರಮ ಜಾಲ ಪತ್ತೆ ಹಚ್ಚಿದ ಖಾಕಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.