ಬಂಟ್ವಾಳ: ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದ ಸಾಧಕ, ಉದ್ಯಮಿ ಬಿ.ಅಹ್ಮದ್ ಹಾಜಿ ಮುಹಿಯುದ್ದೀನ್ ತುಂಬೆ ಅವರು ಇಂದು ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅಹ್ಮದ್ ಹಾಜಿ (89), ಇತ್ತೀಚೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.
ಟಿಂಬರ್ ಉದ್ಯಮದಲ್ಲಿ ಖ್ಯಾತಿ ಗಳಿಸಿದ್ದ ಅಹ್ಮದ್ ಹಾಜಿ ಅವರು, ಶಿಕ್ಷಣ ಪ್ರೇಮಿಯಾಗಿದ್ದು ಶೈಕ್ಷಣಿಕ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆ ಮಾಡಿದ್ದಾರೆ. ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲೂ ಅವರು ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ವಿವಿಧ ಸಂಘ ಸಂಸ್ಥೆಗಳು, ಮಸೀದಿಗಳ ಅಧ್ಯಕ್ಷರಾಗಿ, ಗೌರವಾಧ್ಯಕ್ಷರಾಗಿ, ಪದಾಧಿಕಾರಿಗಳಾಗಿ ಸೇವೆ ಸಲ್ಲಿಸಿದ್ದಾರೆ.
ಮೃತರು ಪತ್ನಿ, ಮೂವರು ಪುತ್ರರು ಮತ್ತು ಒಬ್ಬ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.