ಮಂಗಳೂರು: ಕೇರಳ ರಾಜ್ಯದ ಮಂಜೇಶ್ವರದಲ್ಲಿ ಉಪಚುನಾವಣೆ ನಡೆಯುತ್ತಿದೆ. ಹಾಗಾಗಿ ಕೇರಳ ಕರ್ನಾಟಕ ಗಡಿ ಭಾಗದ ಮಂಜೇಶ್ವರದ ಹತ್ತಿರದ ಜಿಲ್ಲೆಯಾಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದಲ್ಲಿ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಮದ್ಯಮಾರಾಟ ನಿಷೇಧ ಮಾಡಿ ಆದೇಶ ಹೊರಡಿಸಿದ್ದಾರೆ.
ದ.ಕ ಜಿಲ್ಲೆಯ ಮಂಗಳೂರು, ಬಂಟ್ವಾಳ ಮತ್ತು ಪುತ್ತೂರು ತಾಲೂಕು ಪ್ರದೇಶಗಳ 5 ಕಿ.ಮೀ ವ್ಯಾಪ್ತಿಯಲ್ಲಿರುವ ಎಲ್ಲಾ ಮದ್ಯದಂಗಡಿ, ಬಾರ್ಗಳನ್ನು ಅಕ್ಟೋಬರ್ 19 ರಂದು ಸಂಜೆ 6 ಗಂಟೆಯಿಂದ ಅಕ್ಟೋಬರ್ 21 ರಂದು ಮಧ್ಯರಾತ್ರಿ 12 ಗಂಟೆಯವರೆಗೆ ಹಾಗೂ ಅಕ್ಟೋಬರ್ 24 ರಂದು ನಡೆಯಲಿರುವ ಮತಎಣಿಕೆಯ ದಿನದಂದು ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಮದ್ಯ ಮುಕ್ತ ದಿನಗಳೆಂದು (ಡ್ರೈಡೇಸ್) ಘೋಷಿಸಲಾಗಿದೆ.

ಈ ದಿನಗಳಲ್ಲಿ ಎಲ್ಲಾ ವಿಧದ ಮದ್ಯದಂಗಡಿಗಳನ್ನು ಮತ್ತು ಇನ್ನುಳಿದ ಯಾವುದೇ ವಿಧದ ಮದ್ಯ ಮಾರಾಟದ ಪರವಾನಿಗೆ ಇರುವಂತಹ ಅಂಗಡಿಗಳಿಗೆ ಮದ್ಯ ಮಾರಾಟ ಮಾಡದಂತೆ ನಿಷೇಧ ಹೇರಲಾಗಿದೆ. ಮಾರಾಟ ಕೇಂದ್ರಗಳನ್ನು ಮುಚ್ಚಲು ಹಾಗೂ ಈ ದಿನಗಳಂದು ನಿಷೇಧಿಸಿರುವ ಪ್ರದೇಶಗಳಲ್ಲಿ ಯಾವುದೇ ಹೋಟೆಲ್ಗಳಲ್ಲಾಗಲೀ, ನಾನ್ ಪ್ರೊಪ್ರೈಟರ್‍ಗಳಲ್ಲಿ, ಸ್ಟಾರ್ ಹೋಟೆಲ್‍ಗಳಲ್ಲಿ ಮದ್ಯ ಮಾರಾಟ ಅಥವಾ ಸರಬರಾಜು ಮಾಡುವುದನ್ನು ನಿಷೇಧಿಸಿ ದ.ಕ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಆದೇಶಿಸಿದ್ದಾರೆ.