ಮಂಗಳೂರು: ಜಮ್ಮು-ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಹಾಗೂ ಉಗ್ರರ ನಡುವೆ ಬುಧವಾರ ನಡೆದ ಗುಂಡಿನ ಚಕಮಕಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ನಿವಾಸಿಯಾಗಿರುವ ಕ್ಯಾಪ್ಟನ್ ಎಂ.ವಿ.ಪ್ರಾಂಜಲ್ ಸೇರಿ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ.
63ನೇ ರಾಷ್ಟ್ರೀಯ ರೈಫಲ್ಸ್ ಕ್ಯಾಪ್ಟನ್ ಎಂ.ವಿ.ಪ್ರಾಂಜಲ್(28) ಮಂಗಳೂರಿನಲ್ಲಿಯೇ ಹುಟ್ಟಿ ಬಾಲ್ಯ ಕಳೆದು ಬಳಿಕ ಭಾರತೀಯ ಸೇನಾಪಡೆ ಸೇರಿ ಕರ್ತವ್ಯ ನಿರ್ವಹಿಸುತ್ತಿದ್ದರು. ಪ್ರಾಂಜಲ್ ಮಂಗಳೂರಿನ ಎಂಆರ್ ಪಿಎಲ್ ನಿವೃತ್ತ ಎಂಡಿ ವೆಂಕಟೇಶ್ ಹಾಗೂ ಅನುರಾಧ ದಂಪತಿಯ ಏಕೈಕ ಪುತ್ರ. ಎಂಆರ್ ಪಿಎಲ್ ಡೆಲ್ಲಿ ಸ್ಕೂಲ್‌ನಲ್ಲಿ ಎಲ್‌ಕೆಜಿಯಿಂದ 10ನೇ ತರಗತಿಯವರೆಗೆ ವಿದ್ಯಾಭ್ಯಾಸ ಪಡೆದ ಇವರು, ನಗರದ ಖಾಸಗಿ ಕಾಲೇಜಿನಲ್ಲಿ ಪಿಯುಸಿ ಶಿಕ್ಷಣ ಪಡೆದಿದ್ದರು. ಬಳಿಕ ಮಧ್ಯಪ್ರದೇಶದ ಮಿಲಿಟರಿ ಕಾಲೇಜ್ ಆಫ್ ಟೆಲಿಕಮ್ಯುನಿಕೇಷನ್‌ನಲ್ಲಿ ಇಂಜಿನಿಯರಿಂಗ್ ಪದವಿ ಪಡೆದು ಮಿಲಿಟರಿಗೆ ಸೇರಿದ್ದರು.
ಬುಧವಾರ ಬೆಳಗ್ಗೆ ಜಮ್ಮು-ಕಾಶ್ಮೀರದ ರಜೌರಿಯಲ್ಲಿ ನಡೆದ ಭಾರತೀಯ ಸೇನೆ ಹಾಗೂ ಉಗ್ರರ ನಡುವೆ ನಡೆದ ಎನ್ಕೌಂಟರ್ನಲ್ಲಿ ಪ್ರಾಂಜಲ್ ಹುತಾತ್ಮರಾಗಿದ್ದಾರೆ. ಇವರೊಂದಿಗೆ 9ಪಿಎಆರ್‌ಎ ಕ್ಯಾಪ್ಟನ್ ಶುಭಂ ಮತ್ತು ಹವಾಲ್ದಾರ್ ಮಜೀದ್ ಮೃತಪಟ್ಟಿದ್ದಾರೆ. ಐದರಿಂದ ಆರು ಮಂದಿಯಿದ್ದ ಉಗ್ರರ ಗುಂಪು ಇವರ ಮೇಲೆ ದಾಳಿ ಮಾಡಿತ್ತು.
ಪ್ರಾಂಜಲ್ ಸಾವಿನ ಹಿನ್ನೆಲೆಯಲ್ಲಿ ಎಂಆರ್‌ಪಿಎಲ್ ಡೆಲ್ಲಿ ಶಾಲೆಗೆ ಗುರುವಾರ ರಜೆ ಘೋಷಿಸಲಾಗಿದೆ. ತಂದೆ ವೆಂಕಟೇಶ್ ಮೇ.31ರಂದು ಎಂಆರ್‌ಪಿಎಲ್‌ನ ಎಂಡಿ ಪದವಿಯಿಂದ ನಿವೃತ್ತರಾಗಿದ್ದರು. ಇವರ ನಿವೃತ್ತಿ ಸಮಾರಂಭಕ್ಕೆ ಪ್ರಾಂಜಲ್ ಆಗಮಿಸಿದ್ದರು. ಸದ್ಯ ವೆಂಕಟೇಶ್ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಎರಡು ವರ್ಷಗಳ ಹಿಂದಷ್ಟೇ ವಿವಾಹವಾಗಿದ್ದ ಪ್ರಾಂಜಲ್ ಪತ್ನಿ ಚೆನ್ನೈ ಐಐಟಿಯಲ್ಲಿ ಎಂಟೆಕ್ ಮಾಡುತ್ತಿದ್ದಾರೆ.
ಶಾಲೆಯಲ್ಲಿದ್ದಾಗಲೇ ಪ್ರಾಂಜಲ್ ಪರ್ಫೆಕ್ಟ್ ಸ್ಟೂಡೆಂಟ್ ಆಗಿದ್ದ. ಮೊದಲು ಈ ವಿಚಾರ ಕಿವಿಗೆ ಬಿದ್ದಾಗ ಈ ಘಟನೆಯನ್ನು ಅರಗಿಸಲು ಸಾಧ್ಯವಾಗಿಲ್ಲ. ನಮಗೆ ಈ ದುಃಖದಿಂದ ಹೊರಬರಲು ಸಾಧ್ಯವಾಗುತ್ತಿಲ್ಲ. ದೇಶಕ್ಕಾಗಿ ಅವನು ಮಾಡಿರುವ ತ್ಯಾಗಕ್ಕೆ ನಾವು ಸೆಲ್ಯೂಟ್ ಹೇಳುತ್ತೇವೆ ಎಂದು ಪ್ರಾಂಜಲ್ ಅವರ ಒಡನಾಟ ನೆನೆದು ಶಿಕ್ಷಕಿ ಕೃಪಾ ಸಂಜೀವ್ ಗದ್ಗದಿತರಾದರು.
-
ಜಮ್ಮು ಕಾಶ್ಮೀರದ ರಜೌರಿಯಲ್ಲಿ ಭಯೋತ್ಪಾದಕರ ವಿರುದ್ಧ ನಡೆದ ಸೇನಾ ಕಾರ್ಯಾಚರಣೆಯ ವೇಳೆ ಹುತಾತ್ಮರಾದ ಹೆಮ್ಮೆಯ ಕನ್ನಡಿಗ, ವೀರಯೋಧ ಕ್ಯಾಪ್ಟನ್ ಎಂ.ವಿ.ಪ್ರಾಂಜಲ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ.
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) November 23, 2023 " class="align-text-top noRightClick twitterSection" data="
ಪ್ರಾಂಜಲ್ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.… pic.twitter.com/bcHz1Jv3va
">ಜಮ್ಮು ಕಾಶ್ಮೀರದ ರಜೌರಿಯಲ್ಲಿ ಭಯೋತ್ಪಾದಕರ ವಿರುದ್ಧ ನಡೆದ ಸೇನಾ ಕಾರ್ಯಾಚರಣೆಯ ವೇಳೆ ಹುತಾತ್ಮರಾದ ಹೆಮ್ಮೆಯ ಕನ್ನಡಿಗ, ವೀರಯೋಧ ಕ್ಯಾಪ್ಟನ್ ಎಂ.ವಿ.ಪ್ರಾಂಜಲ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ.
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) November 23, 2023
ಪ್ರಾಂಜಲ್ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.… pic.twitter.com/bcHz1Jv3vaಜಮ್ಮು ಕಾಶ್ಮೀರದ ರಜೌರಿಯಲ್ಲಿ ಭಯೋತ್ಪಾದಕರ ವಿರುದ್ಧ ನಡೆದ ಸೇನಾ ಕಾರ್ಯಾಚರಣೆಯ ವೇಳೆ ಹುತಾತ್ಮರಾದ ಹೆಮ್ಮೆಯ ಕನ್ನಡಿಗ, ವೀರಯೋಧ ಕ್ಯಾಪ್ಟನ್ ಎಂ.ವಿ.ಪ್ರಾಂಜಲ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ.
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) November 23, 2023
ಪ್ರಾಂಜಲ್ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.… pic.twitter.com/bcHz1Jv3va
ಮಾಜಿ ಸಿಎಂ ಹೆಚ್ಡಿಕೆ ಸಂತಾಪ: ಕ್ಯಾಪ್ಟನ್ ಪ್ರಾಂಜಲ್ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಅವರು ಸಂತಾಪ ಸೂಚಿಸಿದ್ದಾರೆ. ಜಮ್ಮು ಕಾಶ್ಮೀರದ ರಜೌರಿಯಲ್ಲಿ ಭಯೋತ್ಪಾದಕರ ವಿರುದ್ಧ ನಡೆದ ಸೇನಾ ಕಾರ್ಯಾಚರಣೆಯ ವೇಳೆ ಹುತಾತ್ಮರಾದ ಹೆಮ್ಮೆಯ ಕನ್ನಡಿಗ, ವೀರಯೋಧ ಕ್ಯಾಪ್ಟನ್ ಎಂ.ವಿ.ಪ್ರಾಂಜಲ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ. ಪ್ರಾಂಜಲ್ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸಿ ಸಾಮಾಜಿಕ ಜಾಲತಾಣ ಎಕ್ಸ್ (ಟ್ವಿಟರ್)ನಲ್ಲಿ ಬರೆದುಕೊಂಡಿದ್ದಾರೆ.
ಇದನ್ನೂ ಓದಿ: ರಜೌರಿಯಲ್ಲಿ ಉಗ್ರರು-ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ: ಸೇನಾ ಕ್ಯಾಪ್ಟನ್ ಸೇರಿ ನಾಲ್ವರು ಯೋಧರು ಹುತಾತ್ಮ