ಮಂಗಳೂರು: ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪುದುವೆಟ್ಟುವಿನಲ್ಲಿ ನಡೆದಿದೆ.
ಸೌತಡ್ಕದಿಂದ ಶಿರ್ಲಾಲು ಕಡೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಕ್ರಾಸ್ ಬಳಿ ಮರಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಚಾಲಕ ರಮೇಶ್ ಅವರ ಕಾಲಿಗೆ ಗಾಯವಾಗಿದ್ದು, ಸಹ ಪ್ರಯಾಣಿಕರಾದ ಮನೋಜ್, ನಳಿನಿ ಎಂಬುವವರಿಗೆ ಸಣ್ಣಪುಟ್ಟ ಗಾಯದೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.
ಗಾಯಾಳುಗಳನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಬೆಳ್ತಂಗಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.