ETV Bharat / state

ಕಡಬದಲ್ಲಿ ಭೀಕರ ರಸ್ತೆ ಅಪಘಾತ: ಓರ್ವ ಸಾವು, ನಾಲ್ವರಿಗೆ ಗಂಭೀರ ಗಾಯ - A horrific road accident in kadaba

ಉಪ್ಪಿನಂಗಡಿ - ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪದವು ಎಂಬಲ್ಲಿ ಕಾರು ಹಾಗೂ ಮಹೀಂದ್ರ ಬೊಲೆರೋ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಓರ್ವ ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

car-bolero-accident-in-uppinangadi-subramanya-state-highway
ಕಡಬದ ಪದವಿನಲ್ಲಿ ಭೀಕರ ರಸ್ತೆ ಅಪಘಾತ
author img

By

Published : Jan 24, 2021, 10:54 PM IST

ಕಡಬ: ಕಾರು ಹಾಗೂ ಮಹೀಂದ್ರ ಬೊಲೆರೋ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಓರ್ವ ಮೃತಪಟ್ಟು, ನಾಲ್ವರು ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ - ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪದವು ಎಂಬಲ್ಲಿ ನಡೆದಿದೆ.

ಕಡಬದ ಪದವಿನಲ್ಲಿ ಭೀಕರ ರಸ್ತೆ ಅಪಘಾತ

ಉಪ್ಪಿನಂಗಡಿ ಕಡೆಯಿಂದ ಕಡಬ ಕಡೆಗೆ ಬರುತ್ತಿದ್ದಾಗ ಪದವು - ಬಲ್ಯ ನಡುವೆ ತಿರುವಿನಲ್ಲಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಹೊಸ್ಮಠ ಹಲ್ಲಂಗೇರಿ ನಿವಾಸಿ ನಿಕೋಲಸ್ ಮಾರ್ಟಿಸ್ ಎಂಬುವರ ಪುತ್ರ ನವೀನ್ ಮಾರ್ಟಿಸ್ (30) ಮೃತರೆಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಮೃತರ ತಂದೆ ನಿಕೋಲಸ್ ಮಾರ್ಟಿಸ್, ತಾಯಿ ಸಿಸಿಲಿಯಾ ಲಸ್ರಾದೋ, ಸಹೋದರಿ ಸುಶ್ಮಾ ಮಾರ್ಟಿಸ್ ಹಾಗೂ ಪತ್ನಿ ಗಂಭೀರ ಗಾಯಗೊಂಡಿದ್ದು, ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಓದಿ: ಹೊಟೇಲ್ ಬಿಲ್ ನೀಡದೆ ಎಸ್ಕೇಪ್ ಆಗಿದ್ದವ ಗೋವಾದಲ್ಲಿ ಪತ್ತೆ .. ಅಸಾಮಿಯ ನವರಂಗಿ ಆಟ ಒಂದಾ ಎರಡಾ..!

ಉಪ್ಪಿನಂಗಡಿ ವೃತ್ತ ನಿರೀಕ್ಷಕ ಉಮೇಶ್ ಉಪ್ಪಳಿಕೆ ಗಾಯಾಳುಗಳನ್ನು ತಮ್ಮ ಇಲಾಖಾ ವಾಹನದಲ್ಲಿ ಆಸ್ಪತ್ರೆಗೆ ಸಾಗಿಸಲು ನೆರವಾದರು. ಕಡಬ ಠಾಣಾಧಿಕಾರಿ ರುಕ್ಮ ನಾಯ್ಕ್ ನೇತೃತ್ವದ ಪೊಲೀಸರ ತಂಡ ಘಟನಾ ಸ್ಥಳಕ್ಕೆ ಆಗಮಿಸಿ ರಸ್ತೆಯನ್ನು ಸುಗಮ ಸಂಚಾರಕ್ಕೆ ಅನುವು ಮಾಡಿ ಕೊಟ್ಟಿದ್ದಾರೆ. ಈ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.