ETV Bharat / state

ಸುರತ್ಕಲ್ ಫಾಜಿಲ್ ಹತ್ಯೆ ಕೇಸ್: ಹಣದಾಸೆಗೆ ಆರೋಪಿಗಳಿಗೆ ಕಾರು ನೀಡಿದ್ದ ಮಾಲೀಕ ಅರೆಸ್ಟ್​ - ಈಟಿವಿ ಭಾರತ ಕನ್ನಡ

ಸುರತ್ಕಲ್​ ಯುವಕನ ಕೊಲೆ ಪ್ರಕರಣದಲ್ಲಿ ಆರೋಪಿ ಕಾರು ಮಾಲೀಕನನ್ನು ಬಂಧಿಸಲಾಗಿದೆ. ಈತನಿಂದ ಆರೋಪಿಗಳು ಬಹಳ ಮುಖ್ಯ ಕೆಲಸಕ್ಕೆ ಕಾರು ಬೇಕೆಂದು ತೆಗೆದುಕೊಂಡು ಹೋಗಿದ್ದರು. ಇದರಲ್ಲಿ ಓರ್ವ ಆರೋಪಿ ಬಂಧಿತ ಮಾಲೀಕನಿಗೆ ಆಪ್ತನಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

car-owner-arrested-in-surathkal-youth-murder-case
ಸುರತ್ಕಲ್ ಫಾಜಿಲ್ ಹತ್ಯೆ ಪ್ರಕರಣ: ಆರೋಪಿ ಕಾರು ಮಾಲೀಕನ ಬಂಧನ
author img

By

Published : Jul 31, 2022, 9:48 AM IST

Updated : Jul 31, 2022, 2:12 PM IST

ಮಂಗಳೂರು: ಸುರತ್ಕಲ್​ನಲ್ಲಿ ಗುರುವಾರ ಸಂಜೆ ನಡೆದ ಯುವಕ ಫಾಜಿಲ್ ಹತ್ಯೆ ಪ್ರಕರಣ ಸಂಬಂಧ ಮಂಗಳೂರು ಸಿಸಿಬಿ ಪೊಲೀಸರು ಕೃತ್ಯಕ್ಕೆ ಬಳಸಿದ ಕಾರಿನ ಮಾಲೀಕ ಅಜಿತ್ ಕ್ರಾಸ್ತ ಎಂಬಾತನನ್ನು ಬಂಧಿಸಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ.

ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಆಯುಕ್ತರು, ಫಾಜಿಲ್ ಹತ್ಯೆಗೆ ಬಳಸಿದ ಕಾರಿನ ಪತ್ತೆಗೆ ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಈ ವೇಳೆ ಕಾರಿನ ಮಾಹಿತಿ ಸಿಕ್ಕಿದ್ದು, ಮಾಲೀಕನನ್ನು ಬಂಧಿಸಲಾಗಿದೆ. ಈತನಿಂದ ಆರೋಪಿಗಳು ಬಹಳ ಮುಖ್ಯ ಕೆಲಸಕ್ಕೆ ಕಾರು ಬೇಕೆಂದು ತೆಗೆದುಕೊಂಡು ಹೋಗಿದ್ದರು. ಇದರಲ್ಲಿ ಓರ್ವ ಆರೋಪಿ ಬಂಧಿತ ಮಾಲೀಕನಿಗೆ ಆಪ್ತನಾಗಿದ್ದ ಎಂದರು.

ಕಾರು ಮಾಲೀಕ ಅಜಿತ್ ಹೆಚ್ಚಿನ ಹಣ ಸಿಗುವುದೆಂದು ಕಾರನ್ನು ಬಾಡಿಗೆಗೆ ನೀಡಿದ್ದ. ಸದ್ಯ ಕೃತ್ಯದಲ್ಲಿ ಭಾಗಿಯಾಗಿರುವ ಆರೋಪಿಗಳ ಶೋಧ ಕಾರ್ಯ ಮುಂದುವರೆದಿದೆ. ಆರೋಪಿಗಳು ಬಳಸಿದ ಕಾರು ಇನ್ನೂ ಪತ್ತೆಯಾಗಿಲ್ಲ. ತನಿಖೆ ವೇಳೆ ಹಲವು ಮಂದಿಯ ವಿಚಾರಣೆ ನಡೆಸಲಾಗಿದೆ. ಕೆಲವರು ಉನ್ನತ ಸಂಸ್ಥೆಗಳಲ್ಲಿ ಕೆಲಸ ಮಾಡುವವರು, ವಿದ್ಯಾರ್ಥಿಗಳು ಮೊದಲಾದವರನ್ನು ವಿಚಾರಣೆ ನಡೆಸಿ ಬಿಡಲಾಗಿದೆ ಎಂದು ತಿಳಿಸಿದರು.

ಸುರತ್ಕಲ್ ಫಾಜಿಲ್ ಹತ್ಯೆ ಕೇಸ್: ಹಣದಾಸೆಗೆ ಆರೋಪಿಗಳಿಗೆ ಕಾರು ನೀಡಿದ್ದ ಮಾಲೀಕ ಅರೆಸ್ಟ್​

ಫಾಜಿಲ್ ಪೋಷಕರು ಹಿರಿಯ ಪೊಲೀಸ್ ಅಧಿಕಾರಿಗಳಿಂದ ಪ್ರಕರಣದ ತನಿಖೆ ನಡೆಸುವಂತೆ ಅಭಿಪ್ರಾಯಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಪ್ರಕರಣದ ತನಿಖಾಧಿಕಾರಿಯಾಗಿ ಮಂಗಳೂರು ಉತ್ತರವಲಯ ಎಸಿಪಿ​ ಮಹೇಶ್ ಕುಮಾರ್ ಅವರನ್ನು ನೇಮಿಸಲಾಗಿದೆ ಎಂದರು.

ಸುಳ್ಳು ಸುದ್ದಿ ಹಬ್ಬಿಸಬೇಡಿ: ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡುವುದನ್ನು ನಿಲ್ಲಿಸಬೇಕು. ಆರೋಪಿಗಳ ಬಂಧನವಾದಾಗ ಅಧಿಕೃತವಾಗಿ ಮಾಹಿತಿ ನೀಡಲಾಗುತ್ತದೆ. ಕೆಲವರನ್ನು ಬಂಧಿಸಲಾಗಿದೆ ಎಂದು ಅವರ ಹೆಸರನ್ನು ಪ್ರಚುರಪಡಿಸಿದರೆ ತನಿಖೆಗೆ ತೊಂದರೆಯಾಗಲಿದೆ. ಸಾಮಾಜಿಕ ಜಾಲತಾಣಗಳಲ್ಲಿ ಉದ್ರೇಕಕಾರಿ ಪೋಸ್ಟ್, ಕಮೆಂಟ್ ಮಾಡುವವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು. ಈಗಾಗಲೇ ಈ ಬಗ್ಗೆ 5 ಪ್ರತ್ಯೇಕ ಪ್ರಕರಣ ದಾಖಲಾಗಿದೆ ಎಂದು ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಸುರತ್ಕಲ್​ ಯುವಕ ಫಾಜಿಲ್​ ಹತ್ಯೆ ಪ್ರಕರಣ: 21 ಮಂದಿ ಪೊಲೀಸರ​ ವಶಕ್ಕೆ

Last Updated : Jul 31, 2022, 2:12 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.