ETV Bharat / state

ಬಂಟ್ವಾಳ: ಅಪಘಾತ ತಪ್ಪಿಸಲು ಹೋಗಿ ಮನೆಗೆ ನುಗ್ಗಿದ ಪಿಕಪ್ ವಾಹನ - ಬಂಟ್ವಾಳ ಅಪಘಾತ ಸುದ್ದಿ

ಚಾಲಕನ ನಿಯಂತ್ರಣ ತಪ್ಪಿ ವಿರುದ್ಧ ದಿಕ್ಕಿನಲ್ಲಿ ಬಂದ ಕಾರು ಪಿಕಪ್​​ಗೆ ಡಿಕ್ಕಿ ಹೊಡೆದಿದೆ. ಬಂಟ್ವಾಳ ತಾಲೂಕಿನ ಮಣಿಹಳ್ಳದಲ್ಲಿ ಘಟನೆ ನಡೆದಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

car pickup accident in Bantwal
ಮನೆಗೆ ನುಗ್ಗಿದ ಪಿಕಪ್ ವಾಹನ
author img

By

Published : Nov 27, 2022, 8:54 AM IST

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ವಿರುದ್ಧ ದಿಕ್ಕಿನಲ್ಲಿ ಬಂದ ಕಾರೊಂದು ಪಿಕಪ್ ವಾಹನಕ್ಕೆ ಡಿಕ್ಕಿ ಹೊಡೆದಿದ್ದು, ಪಿಕಪ್‌ ವಾಹನ ರಸ್ತೆ ಬದಿಯಲ್ಲಿರುವ ಮನೆಗೆ ನುಗ್ಗಿದೆ. ಬಂಟ್ವಾಳ ತಾಲೂಕಿನ ಮಣಿಹಳ್ಳದಲ್ಲಿ ಶನಿವಾರ ತಡರಾತ್ರಿ ಘಟನೆ ನಡೆಯಿತು.

ಪುಂಜಾಲಕಟ್ಟೆಯಿಂದ ಬರುತ್ತಿದ್ದ ಕಾರು ಮೆಸ್ಕಾಂ ಇಲಾಖೆಗೆ ಸೇರಿದ ಪಿಕಪ್​​ಗೆ ಗುದ್ದಿದೆ. ಅಪಘಾತದಿಂದ ತಪ್ಪಿಸಲು ಪ್ರಯತ್ನಿಸಿದ ಚಾಲಕ ಪಿಕಪ್‌ ವಾಹನವನ್ನು ಮನೆಗೆ ಡಿಕ್ಕಿ ಹೊಡೆಸಿದ್ದಾನೆ. ಮನೆಯ ಗೋಡೆ ಜರಿದುಬಿದ್ದಿದೆ. ಮಣಿಹಳ್ಳ ನಿವಾಸಿ ಲಕ್ಷ್ಮಣ್ ಎಂಬುವವರಿಗೆ ಸೇರಿದ ಮನೆ ಇದಾಗಿದೆ.

ಇದನ್ನೂ ಓದಿ: ಟ್ರಾಕ್ಟರ್ ಟ್ರ್ಯಾಲಿ ಚಕ್ರದಡಿ ಸಿಲುಕಿ ಪಾದಚಾರಿ ಸಾವು: ಸಿಸಿಟಿವಿಯಲ್ಲಿ ಘಟನೆ ಸೆರೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.