ETV Bharat / state

ಉಳ್ಳಾಲ: ತಪಾಸಣೆ ವೇಳೆ ಕಾನ್ಸ್​ಟೇಬಲ್​ಗೆ ಡಿಕ್ಕಿ ಹೊಡೆದು ಕಾರು ಪರಾರಿ - ಕಾನ್ಸ್​ಟೇಬಲ್​ಗೆ ಡಿಕ್ಕಿ ಹೊಡೆದು ಕಾರು ಪರಾರಿ

ವಾಹನ ತಪಾಸಣೆ ನಡೆಸುತ್ತಿದ್ದ ಮಂಗಳೂರು ದಕ್ಷಿಣ ಸಂಚಾರಿ ಕಾನ್ಸ್​ಟೇಬಲ್​ಗೆ ಅಪರಿಚಿತ ಕಾರು ಡಿಕ್ಕಿ ಹೊಡೆದಿದೆ.

Hit and run  case in Dakshina Kannada
ಉಳ್ಳಾಲ ವಾಹನ ತಪಾಸಣೆಗೈಯ್ಯುತ್ತಿದ್ದ ಸಂಚಾರಿ ಪೇದೆಗೆ ಕಾರು ಢಿಕ್ಕಿ ಹೊಡೆದು ಪರಾರಿ
author img

By

Published : Oct 2, 2022, 11:06 PM IST

Updated : Oct 3, 2022, 6:29 AM IST

ಉಳ್ಳಾಲ(ದಕ್ಷಿಣ ಕನ್ನಡ): ವಾಹನಗಳನ್ನು ತಪಾಸಣೆ ನಡೆಸುತ್ತಿದ್ದ ಮಂಗಳೂರು ದಕ್ಷಿಣ ಸಂಚಾರಿ ಕಾನ್ಸ್​ಟೇಬಲ್​ಗೆ ಅಪರಿಚಿತ ಕಾರು ಡಿಕ್ಕಿ ಹೊಡೆದು, ಅವರು ತಲೆಗೆ ಗಾಯಗೊಂಡಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಉಳ್ಳಾಲಬೈಲ್ ರಸ್ತೆಯಲ್ಲಿ ಇಂದು ಸಂಜೆ ಸಂಭವಿಸಿದೆ.

ಶಿವಮೊಗ್ಗ ನಿವಾಸಿ ಲೋಕೇಶ್ (35) ಗಾಯಾಳು ಕಾನ್ಸ್​ಟೇಬಲ್. ಮಂಗಳೂರು ದಕ್ಷಿಣ ಸಂಚಾರಿ ಠಾಣೆಯ ಹೈವೇ ಪ್ಯಾಟ್ರಲ್ ವಾಹನದಲ್ಲಿ ಚಾಲಕನಾಗಿದ್ದ ಇವರು ಉಳ್ಳಾಲಬೈಲ್ ಬಳಿ ತಪಾಸಣೆಗೈಯ್ಯುತ್ತಿದ್ದ ವೇಳೆ ಘಟನೆ ನಡೆದಿದೆ.

ತೊಕ್ಕೊಟ್ಟು ಕಡೆಯಿಂದ ಉಳ್ಳಾಲ ಕಡೆಗೆ ಬರುತ್ತಿದ್ದ ಬಿಳಿ ಬಣ್ಣದ ಸ್ವಿಫ್ಟ್ ಕಾರನ್ನು ತಡೆಯಲು ಯತ್ನಿಸಿದಾಗ, ಚಾಲಕ ಕಾರನ್ನು ನಿಲ್ಲಿಸದೇ ಕಾನ್ಸ್​ಟೇಬಲ್ ಲೋಕೇಶ್​ಗೆ ಗುದ್ದಿ ಪರಾರಿಯಾಗಿದ್ದಾನೆ. ಡಿಕ್ಕಿ ಹೊಡೆದ ರಭಸಕ್ಕೆ ಲೋಕೇಶ್ ಅವರ ತಲೆ ರಸ್ತೆಯ ವಿಭಜಕಕ್ಕೆ ಬಡಿದು ರಕ್ತಸ್ರಾವ ಉಂಟಾಗಿದೆ. ತಕ್ಷಣ ಅವರನ್ನು ಮಂಗಳೂರಿನ ಎ.ಜೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಹಿಟ್ ಆ್ಯಂಡ್ ರನ್ ಪ್ರಕರಣ ದಾಖಲಾಗಿದೆ. ಘಟನೆ ನಡೆದ ಭಾಗದ ಸಿಸಿಟಿವಿಗಳನ್ನು ಪರಿಶೀಲಿಸಲಾಗುತ್ತಿದೆ. ಶೇ.90ರಷ್ಟು ಅಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದು ತಲೆಗೆ ಗಾಯವಾಗಿರುವುದರಿಂದ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ವೀಕ್ಷಣೆಯಲ್ಲಿ ಇರಿಸಲಾಗಿದೆ ಎಂದು ಠಾಣಾಧಿಕಾರಿ ರಮೇಶ್ ಹಾನಾಪುರ್ ತಿಳಿಸಿದ್ದಾರೆ.

ಇದನ್ನೂ ಓದಿ : ಬಳ್ಳಾರಿ ಕೊಲೆ ಪ್ರಕರಣ : 7 ಜನರ ಬಂಧನ, ಮೂವರಿಗಾಗಿ ಶೋಧ

Last Updated : Oct 3, 2022, 6:29 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.