ಉಳ್ಳಾಲ: ಕೊರೊನಾ ಎರಡನೇ ಅಲೆ ನಿಯಂತ್ರಿಸುವ ಸಲುವಾಗಿ ರಾಜ್ಯ ಸರ್ಕಾರ ಜಾರಿಗೊಳಿಸಿದ ಲಾಕ್‍ಡೌನ್ ನಿಯಮ ಉಲ್ಲಂಘನೆ ಮಾಡಿದ ತೊಕ್ಕೊಟ್ಟು ಸ್ಮಾರ್ಟ್ ಸಿಟಿ ವಾಣಿಜ್ಯ ಸಂಕೀರ್ಣದಲ್ಲಿದ್ದ ಐದು ಬಟ್ಟೆ ಅಂಗಡಿಗಳ ಮಾಲೀಕರ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಟ್ಟೆ ಅಂಗಡಿಗಳವರು ಅರ್ಧ ಶಟರ್ ಹಾಕಿ ಗ್ರಾಹಕರನ್ನು ಸೇರಿಸಿ ವ್ಯಾಪಾರ ಮಾಡುತ್ತಿದ್ದರೆನ್ನಲಾಗಿದೆ. ಈ ಕುರಿತು ಮಾಹಿತಿ ಪಡೆದ ಪೋಲೀಸರು ದಾಳಿ ನಡೆಸಿ ಅಂಗಡಿ ಬಂದ್ ಮಾಡುವಂತೆ ಸೂಚಿಸಿದರು. ಪೋಲೀಸರ ಸೂಚನೆ ಬಳಿಕ ಮಾಲೀಕರು ಅಂಗಡಿ ಬಂದ್ ಮಾಡಿದ್ದಾರೆ.
ಬಳಿಕ ಲಾಕ್ ಡೌನ್ ಉಲ್ಲಂಘನೆ ಮಾಡಿದ ಆರೋಪದ ಅಡಿಯಲ್ಲಿ ಐದು ಅಂಗಡಿಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಅಲ್ಲದೇ ಬೇಕಾಬಿಟ್ಟಿ ಓಡಾಡುತ್ತಿದ್ದ ಒಟ್ಟು ಐದು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.