ETV Bharat / state

ಮಕ್ಕಳ ಅಶ್ಲೀಲ ವಿಡಿಯೋ ಶೇರ್ ಮಾಡಿರುವ‌ ಮೂವರ ವಿರುದ್ಧ ಪ್ರಕರಣ

ಮಕ್ಕಳ ಅಶ್ಲೀಲ ವಿಡಿಯೋಗಳನ್ನು ಡೌನ್​​ಲೋಡ್ ಮಾಡಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಶೇರ್​ ಮಾಡಿದ ಸಂಬಂಧ ಮೂವರು ಆರೋಪಿಗಳ ವಿರುದ್ಧ ಮಂಗಳೂರಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.

case-against-three-accused-of-sharing-childrens-videos
ಮಕ್ಕಳ ಅಶ್ಲೀಲ ವಿಡಿಯೋ ಶೇರ್ ಮಾಡಿರುವ‌ ಮೂವರ ವಿರುದ್ಧ ಪ್ರಕರಣ
author img

By

Published : Jun 11, 2021, 3:03 AM IST

ಮಂಗಳೂರು: ಮಕ್ಕಳ ಅಶ್ಲೀಲ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡ ಆರೋಪದ ಮೇಲೆ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.

ಈ ಮೂರೂ ಪ್ರಕರಣಗಳಲ್ಲಿ ಮಂಗಳೂರಿಗೆ ಸಂಬಂಧಿಸಿದ ಈ ದೂರನ್ನು ಬೆಂಗಳೂರು ಸೈಬರ್ ಕ್ರೈಂ ವಿಭಾಗದ ಸಿಐಡಿ ಸ್ವೀಕರಿಸಿ ದೂರಿನ ಪ್ರಾಥಮಿಕ ವಿಚಾರಣೆಯನ್ನು ಕೈಗೊಂಡು ಮುಂದಿನ ತನಿಖೆಯ ಬಗ್ಗೆ ಮಂಗಳೂರಿನ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ಕಳುಹಿಸಿಕೊಟ್ಟಿದೆ‌.‌

ಜೂನ್ 24ರಂದು, ಮಗುವೊಂದರ ಅಶ್ಲೀಲ ವಿಡಿಯೋವನ್ನು ಪ್ರಶಾಂತ್ ಅಲಿಯಾಸ್ ಪಚ್ಚು ಎಂಬಾತ ಡೌನ್​​ಲೋಡ್ ಮಾಡಿಕೊಂಡು ದೇವಿಕಾ ನಾಯರ್ ಎಂಬುವವರಿಗೆ ಫೇಸ್​​ಬುಕ್ ಮೆಸೆಂಜರ್​ನಲ್ಲಿ ಶೇರ್ ಮಾಡಿದ್ದಾನೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಮಗುವಿನ ಅಶ್ಲೀಲತೆ ವಿಡಿಯೋ, ಆರೋಪಿಯ ಮೊಬೈಲ್ ನಂಬರ್, ಇಮೇಲ್ ಐಡಿ ಇತರೆ ಒಳಗೊಂಡಿರುವುದು ಕಂಡುಂದಿತ್ತು. ಸದ್ರಿ ದೂರಿನ ಬಗ್ಗೆ ಪ್ರಾಥಮಿಕ ವಿಚಾರಣೆ ಮಾಡಿ ಸಿಡಿಯಲ್ಲಿರುವ ಮಾಹಿತಿಯನ್ನು ದೃಢಪಡಿಸಿಕೊಂಡು ಆರೋಪಿಯ ವಿರುದ್ಧ ಕಲಂ 67(ಬಿ) ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.

ಅದೇ ರೀತಿ ಮತ್ತೊಂದು ಪ್ರಕರಣದಲ್ಲಿ ಮೇ 17ರಂದು, ನಾಗೇಶ್ ಸುವರ್ಣ ಎಂಬಾತ ಫೇಸ್​​ಬುಕ್ ಮೆಸೆಂಜರ್​ನಲ್ಲಿ ಮಗುವಿನ ಅಶ್ಲೀಲ ವಿಡಿಯೋ ಚಾಟ್ ಮಾಡಿರುವ ಹಾಗೂ ಅಪ್ ಲೋಡ್ ಮಾಡಿರುವ ಮಾಹಿತಿ ಇದೆ.‌‌ ಅದರಂತೆ ಆರೋಪಿ ವಿರುದ್ಧ ಕಲಂ 67(ಬಿ) ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.

ಜೂನ್ 25ರಂದು, ಪ್ರಜ್ವಲ್ ಕೋಟ್ಯಾನ್ ಅಲಿಯಾಸ್ ಪಜ್ಜು ಬಿರ್ವ ಎಂಬಾತ ಮಗುವೊಂದರ ವಿಡಿಯೋವನ್ನು ಡೌನ್​​ಲೋಡ್ ಮಾಡಿ ಕುಲಾಲ್ ಎಂಬ ಹೆಸರಿನ ಇನ್ಸ್ಟಾಗ್ರಾಂಗೆ ಶೇರ್ ಮಾಡಿರುವ ಮಾಹಿತಿ ಲಭ್ಯವಾಗಿದೆ‌‌. ಸದ್ರಿ ದೂರಿನ ಬಗ್ಗೆ ಪ್ರಾಥಮಿಕ ವಿಚಾರಣೆ ಮಾಡಿ ಸಿಡಿಯಲ್ಲಿರುವ ಮಾಹಿತಿಯನ್ನು ದೃಢಪಡಿಸಿಕೊಂಡು ಆರೋಪಿಯ ವಿರುದ್ದ ಕಲಂ 67(ಬಿ) ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿ ಸೈಬರ್ ಕ್ರೈಂ ಇಲಾಖೆ ತನಿಖೆ ನಡೆಸಲಾಗುತ್ತಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.