ಮಂಗಳೂರು; ಮಂಗಳೂರಿನ ಸೋಮೇಶ್ವರದ ಸೋಮನಾಥ ದೇವಸ್ಥಾನದಲ್ಲಿ ಕೊರೊನಾ ನಿಯಮಾವಳಿ ಮೀರಿ ಜಾತ್ರೆ ಮಾಡಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ. ವಿ. ಸೂಚಿಸಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಅವರು ಸೋಮೇಶ್ವರ ಸೋಮನಾಥ ದೇವಸ್ಥಾನದ ಬ್ರಹ್ಮಕಲಶೋತ್ಸವದಲ್ಲಿ ಕೊರೊನಾ ನಿಯಮಾವಳಿಗಳನ್ನು ಮೀರಿ ಜಾತ್ರೆಗಳನ್ನು ಮಾಡಿರುವ ಬಗ್ಗೆ ದೂರುಗಳು ಬಂದಿದೆ. ಎಸಿಪಿ ಮತ್ತು ಎಸಿಯವರು ದೇವಸ್ಥಾನಕ್ಕೆ ಭೇಟಿ ನೀಡಿ ಎಚ್ಚರಿಕೆ ಕೊಟ್ಟಿದ್ದರು. ಮೊದಲ ದಿನವೇ ಎಫ್ಐಆರ್ ಹಾಕಲಾಗಿತ್ತು. ನಿನ್ನೆ ರಾತ್ರಿಯೂ ಬ್ರಹ್ಮರಥೋತ್ಸವ ನಡೆದಿದ್ದು ಸಾರ್ವಜನಿಕರಿಗೆ ಜಾತ್ರೆಯಲ್ಲಿ ಭಾಗವಹಿಸಲು ಅವಕಾಶ ಮಾಡಿಕೊಟ್ಟಿದ್ದರು. ದೇವಸ್ಥಾನದ ಕಾರ್ಯನಿರ್ವಹಣಾ ಅಧಿಕಾರಿಗೆ ಮುಜರಾಯಿ ಇಲಾಖೆಯಿಂದ ನೋಟಿಸ್ ನೀಡಲಾಗಿದೆ. ದೇವಸ್ಥಾನದ ಆಡಳಿತ ಮಂಡಳಿಯ ವಿರುದ್ದವೂ ಶಿಸ್ತು ಕ್ರಮ ಮಾಡುವ ಬಗ್ಗೆ ನೋಟಿಸ್ ನೀಡಲಾಗಿದೆ. ಈ ಘಟನೆಯ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಲು ಸೂಚಿಸಲಾಗಿದೆ ಎಂದರು.