ETV Bharat / state

ನೋಡಲ್​ ಅಧಿಕಾರಿ ವಿರುದ್ಧ ದೂರು ದಾಖಲು : ಡಾ.ರತ್ನಾಕರ್ ಪೊಲೀಸ್​​ ವಶಕ್ಕೆ

ಮಹಿಳಾ ಪರ ಸಂಘಟನೆಯಲ್ಲಿ ತೊಡಗಿಸಿಕೊಂಡಿರುವ ಮಹಿಳೆಯೋರ್ವರು, ದ.ಕ.ಜಿಲ್ಲೆಯ ಕುಷ್ಠರೋಗ ನಿವಾರಣಾಧಿಕಾರಿ ಡಾ.ರತ್ನಾಕರ್ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಲೈಂಗಿಕ ಕಿರುಕುಳ ಆರೋಪದ ದೂರು ದಾಖಲಾಸಿದ್ದಾರೆ..

ಪೊಲೀಸ್ ಆಯುಕ್ತ ಶಶಿಕುಮಾರ್ ಎನ್ ಹೇಳಿಕೆ
ಪೊಲೀಸ್ ಆಯುಕ್ತ ಶಶಿಕುಮಾರ್ ಎನ್ ಹೇಳಿಕೆ
author img

By

Published : Nov 26, 2021, 8:13 PM IST

ಮಂಗಳೂರು : ದ.ಕ. ಜಿಲ್ಲೆಯ ಕುಷ್ಠರೋಗ ನಿವಾರಣಾಧಿಕಾರಿ ಡಾ.ರತ್ನಾಕರ್ ಮೇಲೆ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಲೈಂಗಿಕ ಕಿರುಕುಳ ಆರೋಪದ ದೂರು ದಾಖಲಾಗಿದೆ.

ದೂರಿನ ಕುರಿತಂತೆ ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಎನ್ ಮಾಹಿತಿ ನೀಡಿರುವುದು..

ಮಹಿಳಾ ಪರ ಸಂಘಟನೆಯಲ್ಲಿ ತೊಡಗಿಸಿಕೊಂಡಿರುವ ಮಹಿಳೆಯೋರ್ವರು ಈ ಬಗ್ಗೆ ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಎನ್. ಅವರಿಗೆ ದೂರು ದಾಖಲಿಸಿದ್ದಾರೆ‌.

ಡಾ.ರತ್ನಾಕರ್ ತಮ್ಮ ಕಚೇರಿಯ ಮಹಿಳಾ ಸಿಬ್ಬಂದಿಯೊಂದಿಗೆ ಚೆಲ್ಲಾಟವಾಡಿರುವ ವಿಡಿಯೋ, ಫೋಟೋ ಸಹಿತ ಇಂದು ಮಾಧ್ಯಮಗಳಲ್ಲಿ ಸುದ್ದಿ ಬಿತ್ತರವಾಗಿದೆ. ಈ ಹಿನ್ನೆಲೆಯಲ್ಲಿ ಮಹಿಳಾ ಸಿಬ್ಬಂದಿಗೆ ಆತ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ದೂರು ದಾಖಲಾಗಿದೆ.

ಇದನ್ನೂ ಓದಿ : ಮಹಿಳಾ ಸಿಬ್ಬಂದಿಯೊಂದಿಗೆ ಸರ್ಕಾರಿ ಕಚೇರಿಯಲ್ಲೇ ನೋಡಲ್​ ಅಧಿಕಾರಿಯ ಚೆಲ್ಲಾಟ ಆರೋಪ: ಫೋಟೋ, ವಿಡಿಯೋ ವೈರಲ್

ಈ ಬಗ್ಗೆ ಮಹಿಳಾ ಠಾಣೆಯ ಪೊಲೀಸರು ಸಂಪರ್ಕಕ್ಕೆ ಸಿಕ್ಕ ಮಹಿಳಾ ಸಿಬ್ಬಂದಿಯನ್ನು ವಿಚಾರಣೆ ನಡೆಸಿದ್ದಾರೆ‌. ಆದರೆ, ಅವರಲ್ಲಿ ಯಾರೂ ದೂರು ನೀಡಲು ಮುಂದೆ ಬರುತ್ತಿಲ್ಲ.

ಆದರೆ, ತನಿಖೆಗೆ ಸಹಕಾರ ನೀಡುತ್ತೇವೆ ಎಂದು ಹೇಳಿದ್ದಾರೆ. ಇದೀಗ ಡಾ.ರತ್ನಾಕರ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದೇವೆ ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ಎನ್ ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.