ETV Bharat / state

ಅರಣ್ಯಾಧಿಕಾರಿಗೆ ನಿಂದನೆ ಆರೋಪ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ಧ ಪ್ರಕರಣ

ಅರಣ್ಯ ಇಲಾಖೆಗೆ ಸೇರಿದ ಮೀಸಲು ಪ್ರದೇಶದಲ್ಲಿ ಲೋಲಾಕ್ಷ ಎನ್ನುವವರು ಅಕ್ರಮವಾಗಿ ಕಟ್ಟಿದ್ದ ಶೆಡ್​ ಅನ್ನು ತೆರವು ಮಾಡಲು ಬಂದಿದ್ದ ಅರಣ್ಯ ಇಲಾಖೆ ಅಧಿಕಾರಿಗಳನ್ನು ಶಾಸಕ ಹರೀಶ್ ಪೂಂಜ ತಡೆದಿದ್ದರು.

Case registered against Beltangady MLA Harish Poonja
ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ಧ ಪ್ರಕರಣ ದಾಖಲು
author img

By ETV Bharat Karnataka Team

Published : Oct 18, 2023, 12:25 PM IST

Updated : Oct 18, 2023, 12:37 PM IST

ಬೆಳ್ತಂಗಡಿ: ತಾಲೂಕಿನ ಕಳೆಂಜ ಗ್ರಾಮದ ಮೀಸಲು ಅರಣ್ಯ ಪ್ರದೇಶದ ಜಾಗದಲ್ಲಿ ವ್ಯಕ್ತಿಯೊಬ್ಬರು ಮನೆ ನಿರ್ಮಿಸುತ್ತಿರುವ ಸಂದರ್ಭ ಅರಣ್ಯ ಇಲಾಖೆಯ ಅಧಿಕಾರಿಗಳು ತಡೆ ಒಡ್ಡಿದ್ದಾರೆ. ಈ ವೇಳೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಮಧ್ಯ ಪ್ರವೇಶಿಸಿ ಅರಣ್ಯಾಧಿಕಾರಿಯನ್ನು ಏಕವಚನದಲ್ಲಿ ಮತ್ತು ಅವಾಚ್ಯವಾಗಿ ನಿಂದಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಅರಣ್ಯಾಧಿಕಾರಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಅಮ್ಮಿನಡ್ಕದಲ್ಲಿ ಅರಣ್ಯ ಇಲಾಖೆಗೆ ಸೇರಿದ ಮೀಸಲು ಅರಣ್ಯ ಪ್ರದೇಶದ ಜಾಗದಲ್ಲಿ ಲೋಲಾಕ್ಷ ಎಂಬವರು ಅಕ್ರಮವಾಗಿ ಮನೆ ನಿರ್ಮಿಸಲು ಫೌಂಡೇಷನ್ ಹಾಕಿದ್ದು, ಅದನ್ನು ಉಪ್ಪಿನಂಗಡಿ ಅರಣ್ಯ ಇಲಾಖೆ ಅಧಿಕಾರಿಗಳು ಅಕ್ಟೋಬರ್ 6 ರಂದು ಕಿತ್ತೆಸೆದಿದ್ದರು. ಈ ಬಗ್ಗೆ ಮಾಹಿತಿ ಪಡೆದ ಶಾಸಕ ಹರೀಶ್ ಪೂಂಜ ಸ್ಥಳಕ್ಕೆ ತೆರಳಿ ಸ್ಥಳೀಯರ ಸಹಕಾರದೊಂದಿಗೆ ತಾತ್ಕಾಲಿಕ ಶೆಡ್ ನಿರ್ಮಿಸಿ ಗೃಹಪ್ರವೇಶ ಮಾಡಿಹೋಗಿದ್ದರು.

ಆದರೆ ಅಕ್ಟೋಬರ್ 9 ರಂದು ಮತ್ತೆ ಅರಣ್ಯ ಇಲಾಖೆಯ ಅಧಿಕಾರಿಗಳು ಮನೆ ತೆರವು ಮಾಡಲು ಮುಂದಾದಾಗ, ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಬಿಜೆಪಿ ಶಾಸಕರು ಹಾಗು ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ, ಶಾಸಕ ಹರೀಶ್ ಪೂಂಜ ಮನೆ ತೆರವುಗೊಳಿಸದಂತೆ ತಡೆದಿದ್ದರು. ಈ ಸಂದರ್ಭದಲ್ಲಿ ಆಕ್ರೋಶಗೊಂಡ ಶಾಸಕ ಹರೀಶ್ ಪೂಂಜ ಉಪ್ಪಿನಂಗಡಿ ಅರಣ್ಯಾಧಿಕಾರಿ ಜಯಪ್ರಕಾಶ್ ಕೆ ಕೆ ಅವರನ್ನು ಉದ್ದೇಶಿಸಿ ಅಸಂಸದೀಯ ಪದವನ್ನು ಬಳಸಿ ನಿಂದಿಸಿದ್ದಾರೆ ಎಂದು ಆರೋಪ ಕೇಳಿಬಂದಿದೆ. ಈ ಕುರಿತಂತೆ ಉಪ್ಪಿನಂಗಡಿ ಅರಣ್ಯಾಧಿಕಾರಿ ಜಯಪ್ರಕಾಶ್ ಕೆ ಕೆ ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದು, ಪೊಲೀಸರು ಐಪಿಸಿ ಸೆಕ್ಷನ್ 143, 353, 504, 149 ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ : ಬೆಳಗಾವಿ ಅಬಕಾರಿ ಅಧಿಕಾರಿಗಳ ಭರ್ಜರಿ ಬೇಟೆ.. ಲಾರಿಯಲ್ಲಿ ಬಚ್ಚಿಟ್ಟು ಸಾಗಿಸುತ್ತಿದ್ದ 10 ಲಕ್ಷ ರೂ. ಮೌಲ್ಯದ ಗೋವಾ ಮದ್ಯ ಜಪ್ತಿ

Last Updated : Oct 18, 2023, 12:37 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.