ಮಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ನಿರೂಪಕಿ ಅನುಶ್ರೀ ವಿಚಾರಣೆ ನಡೆಸಿದ್ದ ಮಂಗಳೂರು ಸಿಸಿಬಿ ಇನ್ಸ್ಪೆಕ್ಟರ್ ಶಿವಪ್ರಕಾಶ್ ಅವರನ್ನು ವರ್ಗಾವಣೆ ಮಾಡಲಾಗಿದೆ.
ಡ್ರಗ್ಸ್ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಅವರನ್ನು ವರ್ಗಾವಣೆ ಮಾಡಿ ಆದೇಶ ನೀಡಲಾಗಿತ್ತು. ಅದು ವಿವಾದವಾದ ಬೆನ್ನಲ್ಲೇ ವರ್ಗಾವಣೆ ತಡೆ ಹಿಡಿಯಲಾಗಿತ್ತು. ಇದೀಗ ಮತ್ತೆ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಮಂಗಳೂರು ಸಿಸಿಬಿಗೆ ಇನ್ಸ್ಪೆಕ್ಟರ್ ಆಗಿ ಉಡುಪಿ ಜಿಲ್ಲೆಯ ಕಾಪು ಠಾಣೆಯ ಇನ್ಸ್ಪೆಕ್ಟರ್ ಮಹೇಶ್ ಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಸಿಸಿಬಿ ಸಬ್ಇನ್ಸ್ಪೆಕ್ಟರ್ ಕಬ್ಬಾಳ್ ರಾಜ್ ಅವರನ್ನು ವರ್ಗಾವಣೆ ಮಾಡಲಾಗಿದೆ.