ಮಂಗಳೂರು: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟ ವ್ಯಕ್ತಿಯ ಚಲನವಲನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಟೋಪಿ ಧರಿಸಿದ್ದ ವ್ಯಕ್ತಿಯೊಬ್ಬ ವಿಮಾನ ನಿಲ್ದಾಣದ ಪ್ರಯಾಣಿಕರು ಹೊರಭಾಗದಲ್ಲಿ ಕೂರುವ ಆಸನದಲ್ಲಿ ಬಾಂಬ್ ಇಟ್ಟು ತೆರಳಿದ್ದಾನೆ. ಆತ ವಾಪಸ್ ತೆರಳುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಈತ ಪಾರ್ಕಿಂಗ್ ಸ್ಥಳದಲ್ಲಿ ನಡೆದುಕೊಂಡು ಹೋಗುವ ದೃಶ್ಯ ಕೂಡ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಎಲ್ಲಿ ತನ್ನ ಚಹರೆ ಸಿಸಿಟಿವಿಯಲ್ಲಿ ಸೆರೆಯಾಗುತ್ತೋ ಎಂದು ತಲೆಯನ್ನು ಮೇಲೆತ್ತದೆ ತಲೆ ತಗ್ಗಿಸಿಕೊಂಡೇ ನಡೆದಾಡಿದ್ದಾನೆ.