ಮಂಗಳೂರು : ಕೊರೊನಾ ಕಾಲಘಟ್ಟದಲ್ಲಿ 2020-21ರ ಅವಧಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ (ಎಸ್ಸಿಡಿಸಿಸಿ) ಬ್ಯಾಂಕ್ 33.65 ಕೋಟಿ ರೂ. ಲಾಭ ಗಳಿಸಿದೆ ಎಂದು ಬ್ಯಾಂಕ್ ಅಧ್ಯಕ್ಷ ಡಾ. ಎಂ ಎನ್ ರಾಜೇಂದ್ರ ಕುಮಾರ್ ತಿಳಿಸಿದರು.
ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್ಸಿಡಿಸಿಸಿ ಬ್ಯಾಂಕ್ನ ಇತಿಹಾಸದಲ್ಲಿ ಇಷ್ಟು ಲಾಭ ಗಳಿಸಿದ್ದು ಇದೇ ಮೊದಲು. ಕೊರೊನಾ ಸಂದರ್ಭದಲ್ಲಿಯೂ ಬ್ಯಾಂಕ್ ಸಿಬ್ಬಂದಿಯ ಪರಿಶ್ರಮ ಮತ್ತು ಗ್ರಾಹಕರ ಸಹಕಾರದಿಂದ ಇದು ಸಾಧ್ಯವಾಗಿದೆ ಎಂದರು.
ಈ ವರ್ಷದಲ್ಲಿ 10,100.30 ಕೋಟಿ ರೂ. ವ್ಯವಹಾರ ನಡೆದಿದೆ. ಮುಂದಿನ ಆರ್ಥಿಕ ವರ್ಷದಲ್ಲಿ 11,000 ಕೋಟಿ ರೂ. ವ್ಯವಹಾರದ ಗುರಿ ಹೊಂದಲಾಗಿದೆ ಎಂದು ತಿಳಿಸಿದರು. ಬ್ಯಾಂಕ್‌ನಿಂದ ನೀಡಲಾದ ಕೃಷಿ ಸಾಲ ಮರುಪಾವತಿ ಶೇ.100ರಷ್ಟು ಆಗಿದೆ.
ಸತತ 26 ವರ್ಷಗಳಿಂದ ಕೃಷಿ ಸಾಲ ಮರುಪಾವತಿಯಲ್ಲಿ ಬ್ಯಾಂಕ್ ಶೇ.100ರಷ್ಟು ಸಾಧನೆ ಮಾಡಿದೆ. ಈಗಾಗಲೇ ದಕ್ಷಿಣ ಕನ್ನಡದಲ್ಲಿ ಮೊಬೈಲ್ ಬ್ಯಾಂಕ್ ಇದ್ದು ಮುಂದಿನ ಆರ್ಥಿಕ ವರ್ಷದಲ್ಲಿ ಉಡುಪಿ ಜಿಲ್ಲೆಯಲ್ಲಿ ಆರಂಭಿಸಲಾಗುವುದು ಎಂದು ತಿಳಿಸಿದರು.
ಇದನ್ನೂ ಓದಿ.. ಜಾಗತಿಕ ತಾಪಮಾನ ಎಫೆಕ್ಟ್ : ಕರಗುತ್ತಿದೆ ಅಂಟಾರ್ಟಿಕಾದ ಹಿಮನದಿಗಳು