ಮಂಗಳೂರು: ಫೆ.14ರಂದು ಪ್ರೇಮಿಗಳ ದಿನಾಚರಣೆ ಬದಲು ಪುಲ್ವಾಮ ಹುತಾತ್ಮ ದಿನ ಆಚರಣೆ ಮಾಡುವಂತೆ ವಿಶ್ವಹಿಂದೂ ಪರಿಷತ್ ಭಜರಂಗ ದಳ ಕರೆ ನೀಡಿದೆ.
ಈ ಬಗ್ಗೆ ಸುದ್ದಿಗಾರರನ್ನು ಉದ್ದೇಶಿಸಿ ಕರ್ನಾಟಕ ದಕ್ಷಿಣ ಪ್ರಾಂತ ಸಂಯೋಜಕ ಸುನೀಲ್ ಕೆ.ಆರ್ ಮಾತನಾಡಿ, ಪ್ರೇಮಿಗಳ ದಿನದ ಬದಲು ಪುಲ್ವಾಮ ಹುತಾತ್ಮರ ದಿನವನ್ನು ಆಚರಿಸಬೇಕೆಂದು ನಿರ್ಧರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಿ ವರ್ಷ ಫೆಬ್ರವರಿ 14ರಂದು ಪುಲ್ವಾಮ ಹುತಾತ್ಮ ದಿನವನ್ನಾಗಿ ಆಚರಿಸಲು ಕೇಂದ್ರ ಸರಕಾರಕ್ಕೆ ಭಜರಂಗದಳ ಆಗ್ರಹಿಸುತ್ತಿದೆ. ಈ ಬಗ್ಗೆ ಗೃಹ ಸಚಿವರಿಗೆ ಮನವಿ ಸಲ್ಲಿಸಲಾಗಿದೆ ಎಂದರು.
ಫೆ.14ರಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ರಾಷ್ಟ್ರ ಪ್ರೇಮಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಹುತಾತ್ಮ ಸೈನಿಕರಿಗೆ ಶ್ರದ್ದಾಂಜಲಿ ಸಲ್ಲಿಸಲು ಅವರು ಮನವಿ ಮಾಡಿದರು.