ಮಂಗಳೂರು: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಜ. 27 ರಂದು ನಗರಕ್ಕೆ ಆಗಮಿಸಲಿದ್ದಾರೆ.
ಜ.27 ರಂದು ದ.ಕ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಪರ ಮಂಗಳೂರಿನ ಕೂಳೂರು ಗೋಲ್ಡ್ ಪಿಂಚ್ ಸಿಟಿ ಮೈದಾನದಲ್ಲಿ ಜನಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಈ ಸಭೆಯಲ್ಲಿ ಪೌರತ್ವ ಕಾಯ್ದೆ ಪ್ರಯೋಜನಗಳ ಬಗ್ಗೆ ರಕ್ಷಣಾ ಸಚಿವರು ಭಾಷಣ ಮಾಡಲಿದ್ದಾರೆ.
ಜ.27 ರಂದು ಮಧ್ಯಾಹ್ನ 3.40 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಕೇಂದ್ರ ಸಚಿವರು ಸಂಜೆ 4 ಗಂಟೆಗೆ ಕೂಳೂರಿನಲ್ಲಿ ನಡೆಯಲಿರುವ ಜನಜಾಗರಣ ಅಭಿಯಾನದಲ್ಲಿ ಭಾಗವಹಿಸಲಿದ್ದಾರೆ. ಸಂಜೆ 5 ಗಂಟೆಗೆ ಅಲ್ಲಿಂದ ನಿರ್ಗಮಿಸುವ ಅವರು 5.15 ಗಂಟೆಗೆ ವಿಮಾನದ ಮೂಲಕ ದೆಹಲಿಗೆ ತೆರಳಲಿದ್ದಾರೆ.