ಮಂಗಳೂರು: ಎರಡು ದಿನಗಳ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಮುಕ್ತಾಯಗೊಂಡ ಬಳಿಕ ಇಂದು ಗಡಿನಾಡ ಕನ್ನಡಿಗರಿಗೆ ಕನ್ನಡ ಪರೀಕ್ಷೆ ನಡೆಯಿತು.
ಪರೀಕ್ಷೆ ಬರೆಯುವ ಗಡಿನಾಡ ಕನ್ನಡಿಗರು ಗಡಿನಾಡ, ಹೊರನಾಡ ಕೋಟದಲ್ಲಿ ಆಯ್ಕೆಯಾಗಲು ಕನ್ನಡ ಪರೀಕ್ಷೆ ಬರೆಯುವುದು ಕಡ್ಡಾಯವಾಗಿದೆ. ಪ್ರತಿವರ್ಷ ಈ ಪರೀಕ್ಷೆ ಬೆಂಗಳೂರಿನಲ್ಲಿ ಮಾತ್ರ ನಡೆಯುತ್ತಿತ್ತು. ಈ ಬಾರಿ ಕೊರೊನಾದಿಂದ ಕರ್ನಾಟಕ-ಕೇರಳ ಗಡಿಜಿಲ್ಲೆಯಾದ ಕಾಸರಗೋಡು ವಿದ್ಯಾರ್ಥಿಗಳಿಗೆ ಮಂಗಳೂರಿನಲ್ಲಿ ಆಯೋಜಿಸಲಾಗಿತ್ತು.
ನೆರೆಯ ಕಾಸರಗೋಡು ಜಿಲ್ಲೆಯಿಂದ 362 ವಿದ್ಯಾರ್ಥಿಗಳು ಸಿಇಟಿಗೆ ಹೆಸರು ನೊಂದಾಯಿಸಿದ್ದರು. ಇದರಲ್ಲಿ ಇಂದು 261 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 101 ವಿದ್ಯಾರ್ಥಿಗಳು ಗೈರಾಗಿದ್ದಾರೆ ಎಂದು ದ.ಕ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.