ಮಂಗಳೂರು: ಬೈಕ್ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಮಹಿಳೆಯೋರ್ವರ ಚಿನ್ನದ ಸರವನ್ನು ಎಗರಿಸಿರುವ ಘಟನೆ ನಗರದ ಪಡವಿನಂಗಡಿ ಬಳಿ ನಡೆದಿದೆ.
ರಾಜೇಶ್ವರಿ ಎಂಬುವವರು ಚಿನ್ನದ ಸರ ಕಳೆದುಕೊಂಡ ಮಹಿಳೆ. ಮಗಳನ್ನು ಟ್ಯೂಷನ್ನಿಂದ ಕರೆದುಕೊಂಡು ಮನೆಗೆ ಮರಳುತ್ತಿದ್ದ ವೇಳೆ ಬೈಕ್ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು, ಏಕಾಏಕಿ ಕರಿಮಣಿ ಸರವನ್ನು ಕಸಿದುಕೊಂಡು ಸ್ಥಳದಿಂದ ಪರಾರಿಯಾಗಿದ್ದಾರೆ.
ಸ್ಥಳೀಯರು ದುಷ್ಕರ್ಮಿಗಳನ್ನು ತಡೆಯಲು ಯತ್ನಿಸಿದರೂ ತಪ್ಪಿಸಿಕೊಂಡಿದ್ದಾರೆ. ಇಬ್ಬರು ಖದೀಮರು ಹೆಲ್ಮೆಟ್ ಧರಿಸಿದ್ದು, ನಂಬರ್ ಪ್ಲೇಟ್ ಇಲ್ಲದ ಪಲ್ಸರ್ ಬೈಕ್ನಲ್ಲಿದ್ದರು ಎಂದು ಸ್ಥಳೀಯರು ದೂರಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು ತನಿಖೆ ನಡೆಸುತ್ತಿದ್ದಾರೆ.