ಬೆಳ್ತಂಗಡಿ: ಮೇಲಂತ ಬೆಟ್ಟು ಗ್ರಾಮದ ಕಲ್ಲಗುಡ್ಡೆ ಬಳಿ ಬಾಡಿಗೆಗೆ ಪಡೆದುಕೊಂಡಿರುವ ಮನೆಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಆರೋಪದಲ್ಲಿ ಪೊಲೀಸರು ಬಾಡಿಗೆದಾರ ಹಾಗೂ ಇತರ ಇಬ್ಬರನ್ನು ವಶಕ್ಕೆ ಪಡೆದಿದ್ದು, ಇಬ್ಬರು ಯುವತಿಯರನ್ನು ರಕ್ಷಿಸಿದ್ದಾರೆ.
ರಾಮಚಂದ್ರ ದೇವಾಡಿಗ ಎಂಬವರು ತಮ್ಮ ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಮೇರೆಗೆ ಬೆಳ್ತಂಗಡಿ ಪೊಲೀಸರು ಡಿ. 14 ರಂದು ದಾಳಿ ನಡೆಸಿ, ವೇಶ್ಯಾವಾಟಿಕೆ ನಿರತರಾಗಿದ್ದ ಆರೋಪಿಗಳಾದ ಜನಾರ್ಧನ ಪೂಜಾರಿ, ಜನಾರ್ಧನ ಅವರನ್ನು ವಶಕ್ಕೆ ಪಡೆದಿದ್ದಾರೆ.
ಓದಿ :ಅಪಹಾಸ್ಯದ ವಿಡಿಯೋ ಶೇರ್: ಬಿಜೆಪಿ ಕಾರ್ಯಕರ್ತನ ಮೇಲೆ ಕೈ ಕಾರ್ಯಕರ್ತನಿಂದ ಹಲ್ಲೆ?
ವೇಶ್ಯಾವಾಟಿಕೆಗೆ ಅನುವು ಮಾಡಿಕೊಟ್ಟ ಆರೋಪದಲ್ಲಿ ರಾಮಚಂದ್ರ ದೇವಾಡಿಗ ಅವರನ್ನೂ ವಶಕ್ಕೆ ಪಡೆಯಲಾಗಿದೆ. ಈ ಸಂದರ್ಭ ಇಬ್ಬರು ಯುವತಿಯರನ್ನು ರಕ್ಷಿಸಲಾಗಿದೆ. ಈ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.