ETV Bharat / state

ಬೆಳ್ತಂಗಡಿ ಠಾಣೆ ಹೆಡ್​ ಕಾನ್ಸ್​ಟೇಬಲ್​ಗೆ ಈ ಬಾರಿಯ ಮುಖ್ಯಮಂತ್ರಿ ಪದಕ - Chief Minister's Medal

ಗಂಭೀರ ಅಪರಾಧ ಪ್ರಕರಣಗಳಲ್ಲಿ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗುವ ರೀತಿಯಲ್ಲಿ ಪ್ರಕರಣದ ತನಿಖಾ ಸಹಾಯಕರಾಗಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ್ದಕ್ಕಾಗಿ ಬೆಳ್ತಂಗಡಿ ವೃತ್ತ ನಿರೀಕ್ಷಕರ ಕಚೇರಿಯ ಹೆಡ್​ ಕಾನ್ಸ್​ಟೇಬಲ್​ ವೆಂಕಟೇಶ್ ನಾಯ್ಕ್ ಅವರಿಗೆ ಈ ಬಾರಿಯ ಮುಖ್ಯಮಂತ್ರಿ ಪದಕ ಲಭಿಸಿದೆ.

chief-ministers-medal-to-belthangady-station-head-constant-table
ಹೆಡ್​ ಕಾನ್ಸ್​ಟೇಬಲ್​ ವೆಂಕಟೇಶ್ ನಾಯ್ಕ್
author img

By

Published : Jan 2, 2021, 5:33 PM IST

ಬೆಳ್ತಂಗಡಿ (ದಕ್ಷಿಣಕನ್ನಡ): ಬೆಳ್ತಂಗಡಿ ವೃತ್ತ ನಿರೀಕ್ಷಕರ ಕಚೇರಿಯ ಹೆಡ್​ ಕಾನ್ಸ್​ಟೇಬಲ್​ ವೆಂಕಟೇಶ್ ನಾಯ್ಕ್ ಅವರಿಗೆ ಈ ಬಾರಿಯ ಮುಖ್ಯಮಂತ್ರಿ ಪದಕ ಲಭಿಸಿದೆ.

ಗಂಭೀರ ಅಪರಾಧ ಪ್ರಕರಣಗಳಲ್ಲಿ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗುವ ರೀತಿಯಲ್ಲಿ ಪ್ರಕರಣದ ತನಿಖಾ ಸಹಾಯಕರಾಗಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ್ದಕ್ಕಾಗಿ ಪದಕ ನೀಡಲಾಗುತ್ತಿದೆ. ಇವರು ಬೆಳ್ತಂಗಡಿ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಕಳೆದ 6 ವರ್ಷಗಳಿಂದ ಹೆಡ್​ ಕಾನ್ಸ್​ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಉಜಿರೆಯ ಎಸ್​ಆರ್​ ಬಾರ್ ಬಳಿ ಕೊಲೆ ಪ್ರಕರಣ, ಕೊಯ್ಯೂರು, ವೇಣೂರು, ಲಾಯಿಲದಲ್ಲಿ‌ ನಡೆದಿದ್ದ ಪೋಕ್ಸೊ ಪ್ರಕರಣ, ಮರೋಡಿ ಲೈಂಗಿಕ ದೌರ್ಜನ್ಯ ಪ್ರಕರಣ, ವಿಟ್ಲದಲ್ಲಿ ನಡೆದಿದ್ದ ಕೊಲೆ ಪ್ರಕರಣ, ಉಜಿರೆ ಅಪಘಾತದಲ್ಲಿ‌ ಶಿಕ್ಷಕಿ ಸಾವು ಪ್ರಕರಣ ಮೊದಲಾದ ಗಂಭೀರ ಅಪರಾಧ ಪ್ರಕರಣಗಳಲ್ಲಿ ತನಿಖಾ ಸಹಾಯಕರಾಗಿ ಆರೋಪಿಗಳಿಗೆ‌ ನ್ಯಾಯಾಲಯದಿಂದ ಶಿಕ್ಷೆಯಾಗುವಂತೆ ಕರ್ತವ್ಯ ಸಲ್ಲಿಸಿದ್ದನ್ನು ಪರಿಗಣಿಸಿ ಅವರನ್ನು ಈ‌ ಪದಕಕ್ಕೆ ಆಯ್ಕೆ ಮಾಡಲಾಗಿದೆ.

ಓದಿ: ಸಂಕ್ರಾಂತಿ ನಂತರ ಸಚಿವ ಸಂಪುಟ ವಿಸ್ತರಣೆ : ಸಚಿವ ರಮೇಶ್ ಜಾರಕಿಹೊಳಿ‌

ವೆಂಕಟೇಶ್ ನಾಯ್ಕ್ ಅವರ ಸೇವೆ ಪರಿಗಣಿಸಿ ಇಲಾಖೆಯಿಂದ 17 ಬಾರಿ ನಗದು ಪುರಸ್ಕಾರ, 10 ಬಾರಿ ಪ್ರಶಂಸನಾ ಪತ್ರ, ಉತ್ತಮ ತನಿಖಾ ಸಹಾಯಕ ಪ್ರಶಸ್ತಿ ಸೇರಿ ಹಲವು ಪ್ರಶಸ್ತಿಗಳು ಲಭಿಸಿವೆ. ಇವರು 1996ರಲ್ಲಿ ಪೊಲೀಸ್‌ ಇಲಾಖೆಗೆ ಸೇರ್ಪಡೆಗೊಂಡು ಉಡುಪಿ ಸಂಚಾರ ಠಾಣೆ, ಉಪ್ಪಿನಂಗಡಿ ಠಾಣೆ, ವಿಟ್ಲ ಠಾಣೆಯಲ್ಲಿ ಕರ್ತವ್ಯ ಸಲ್ಲಿಸಿ, 2014ರಲ್ಲಿ ಹೆಡ್​ ಕಾನ್ಸ್​ಟೇಬಲ್ ಆಗಿ ಪದೋನ್ನತಿ ಹೊಂದಿ ಬೆಳ್ತಂಗಡಿ ಠಾಣೆಯಲ್ಲಿ ಕರ್ತವ್ಯ ಸಲ್ಲಿಸುತ್ತಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.