ETV Bharat / state

ಹೆತ್ತ ತಾಯಿಯನ್ನೇ ಬೀದಿಗೆ ತಳ್ಳಿದ ಮಕ್ಕಳು: 112 ಸಹಾಯವಾಣಿ ಮೂಲಕ ರಕ್ಷಣೆ - Mother was rescued through 112 helpline

ಮಕ್ಕಳೇ ಹೆತ್ತ ತಾಯಿಯನ್ನು ರಸ್ತೆ ಬದಿ ಬಿಟ್ಟುಹೋಗಿರುವ ಅಮಾನವೀಯ ಘಟನೆ ಬೆಳ್ತಂಗಡಿಯ ಕಳಿಯ ಗ್ರಾಮದ ನಾಳ ಎಂಬಲ್ಲಿ ನಡೆದಿದೆ.

ns who pushed their mother to the street
ಹೆತ್ತ ತಾಯಿಯನ್ನೇ ಬೀದಿಗೆ ತಳ್ಳಿದ ಮಕ್ಕಳು
author img

By

Published : Feb 1, 2021, 9:05 PM IST

ಬೆಳ್ತಂಗಡಿ: ಕಳಿಯ ಗ್ರಾಮದ ನಾಳ ಎಂಬಲ್ಲಿ ವಯೋವೃದ್ಧೆಯನ್ನು ಅವರ ಮನೆಯವರೇ ರಸ್ತೆಬದಿ ಬಿಟ್ಟುಹೋಗಿರುವ ಅಮಾನವೀಯ‌ ಘಟನೆ ನಡೆದಿದೆ.

ಈ ವೃದ್ಧೆಗೆ‌ 5‌ ಮಕ್ಕಳಿದ್ದು, ಮೂವರು ಪುತ್ರರು ಹಾಗೂ ಇಬ್ಬರು ಪುತ್ರಿಯರಿದ್ದಾರೆ. ಒಬ್ಬ ಪುತ್ರ ಮಂಗಳೂರಿನಲ್ಲಿ ಪೊಲೀಸ್ ಆಗಿ ಕರ್ತವ್ಯ ‌ನಿರ್ವಹಿಸುತ್ತಿದ್ದಾರೆ. ಇನ್ನಿಬ್ಬರು ಪುತ್ರರು ಮೇಸ್ತ್ರಿ ಕೆಲಸ ಮಾಡುತ್ತಿದ್ದಾರೆ. ಪುತ್ರಿಯರಲ್ಲಿ ಒಬ್ಬರು ಗೃಹಿಣಿಯಾಗಿದ್ದು, ಮತ್ತೊಬ್ಬರು ಆಶಾ ಕಾರ್ಯಕರ್ತೆಯಾಗಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ. ವೃದ್ಧೆಯ ಮಕ್ಕಳ ಅಮಾನವೀಯ ‌ನಡೆಗೆ ಸಾರ್ವಜನಿಕರಿಂದ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

ಓದಿ: ಮಂಗಳೂರಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಆರೋಪಿ‌ ವಶಕ್ಕೆ

ವೃದ್ಧೆಯನ್ನು ಬಿಟ್ಟು ಹೋಗಿರುವ ಬಗ್ಗೆ ದ.ಕ ಜಿಲ್ಲಾ 112 ಸಹಾಯವಾಣಿಗೆ ಕರೆ ಬಂದಿದ್ದು, ತಕ್ಷಣ ತುರ್ತು ಸ್ಪಂದನ ವಾಹನ ಸ್ಥಳಕ್ಕೆ ತೆರಳಿ ವೃದ್ಧೆಯನ್ನು ರಕ್ಷಿಸಿದೆ. ಮನೆಯವರಿಗೆ ಸೂಕ್ತ ಮಾಹಿತಿ ನೀಡಿ ವೃದ್ಧೆಯನ್ನು ಅವರ ಪುತ್ರಿಯ ಮನೆಗೆ ಕಳುಹಿಸಲಾಗಿದೆ‌. ಮನೆಯವರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕಾಗಿ ಪ್ರಕರಣವನ್ನು ಬೆಳ್ತಂಗಡಿ ಠಾಣೆಗೆ ಹಸ್ತಾಂತರಿಸಲಾಗಿದೆ. ಈ ಬಗ್ಗೆ ಕ್ರಮ ಕೈಗೊಳ್ಳಲು ಮನೆಯವರನ್ನು ಸಂಪರ್ಕಿಸಿದ್ದು, ಮಾಹಿತಿ ಪಡೆದು ಅವರ ಮೇಲೆ ಕ್ರಮ ಜರುಗಿಸುವ ಮಾಹಿತಿ ಲಭ್ಯವಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.