ETV Bharat / state

ವಾರದೊಳಗೆ ನೀರು ಪೂರೈಕೆಗೆ ಕ್ರಮ ಕೈಗೊಳ್ಳಿ: ಪೌರಾಯುಕ್ತರಿಗೆ  ನಗರಸಭೆ ಸದಸ್ಯರ ಎಚ್ಚರಿಕೆ - ಪುತ್ತೂರು ಕುಡಿಯುವ ನೀರಿನ ಸಮಸ್ಯೆ ಸುದ್ಧಿ

ಪುತ್ತೂರು ಪಟ್ಟಣಕ್ಕೆ ನೀರು ಸರಬರಾಜು ಮಾಡುತ್ತಿದ್ದ ನೆಕ್ಕಿಲಾಡಿ ಪಂಪ್ ಹೌಸ್‌ನಲ್ಲಿ ವಿದ್ಯುತ್ ಸಮಸ್ಯೆ ಆಗಿರುವ ಹಿನ್ನೆಲೆಯಲ್ಲಿ ಪುತ್ತೂರಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗುತ್ತಿದೆ, ಈ ಕುರಿತು ವಾರದೊಳಗೆ ಕ್ರಮ ಕೈಗೊಳ್ಳದಿದ್ದರೆ ನಗರಸಭೆ ಸದಸ್ಯರಿಂದ ಪುತ್ತೂರು ಮೆಸ್ಕಾಂ ಕಚೇರಿ ಎದುರು ಧರಣಿ ನಡೆಸಲಾಗುವುದು ಎಂದು ಪುತ್ತೂರು ನಗರಸಭೆ ಸದಸ್ಯರು ಪೌರಾಯುಕ್ತರಿಗೆ ಎಚ್ಚರಿಕೆ ನೀಡಿದ್ದಾರೆ.

ನಗರಸಭೆ ಸದಸ್ಯರಿಂದ ಪೌರಾಯುಕ್ತರಿಗೆ ಮನವಿ
author img

By

Published : Nov 5, 2019, 12:30 PM IST

ಪುತ್ತೂರು: ಪುತ್ತೂರು ಪಟ್ಟಣಕ್ಕೆ ನೀರು ಸರಬರಾಜು ಮಾಡುತ್ತಿದ್ದ ನೆಕ್ಕಿಲಾಡಿ ಪಂಪ್ ಹೌಸ್‌ನಲ್ಲಿ ವಿದ್ಯುತ್ ಸಮಸ್ಯೆ ಆಗಿರುವ ಹಿನ್ನೆಲೆಯಲ್ಲಿ ಪುತ್ತೂರಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗುತ್ತಿದೆ. ಈ ಕುರಿತು ವಾರದೊಳಗೆ ಕ್ರಮ ಕೈಗೊಳ್ಳದಿದ್ದರೆ ನಗರಸಭೆ ಸದಸ್ಯರಿಂದ ಪುತ್ತೂರು ಮೆಸ್ಕಾಂ ಕಚೇರಿ ಎದುರು ಧರಣಿ ನಡೆಸಲಾಗುವುದು ಎಂದು ಪುತ್ತೂರು ನಗರಸಭೆ ಸದಸ್ಯರು ಪೌರಾಯುಕ್ತರಿಗೆ ಎಚ್ಚರಿಕೆ ರವಾನಿಸಿದ್ದಾರೆ.

ನಗರಸಭೆ ಸದಸ್ಯರಿಂದ ಪೌರಾಯುಕ್ತರಿಗೆ ಮನವಿ

ಪೌರಾಯುಕ್ತೆ ರೂಪಾ ಶೆಟ್ಟಿಯವರಿಗೆ ಪಟ್ಟಣದಲ್ಲಿ ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ ತಿಳಿಸಲಾಗಿದ್ದು. ನಗರಸಭೆ ವ್ಯಾಪ್ತಿಗೆ ನೆಕ್ಕಿಲಾಡಿಯಿಂದ ಬರುತ್ತಿರುವ ಕುಡಿಯುವ ನೀರಿನ ಘಟಕದ ಮೂಲ ಸ್ಥಾವರಕ್ಕೆ ನಿರಂತರ ವಿದ್ಯುತ್ ನೀಡುವ ಸೌಲಭ್ಯವಿದ್ದರೂ, ಪ್ರತಿದಿನ ಆಗಾಗ ವಿದ್ಯುತ್ ತೆಗೆಯುವುದರಿಂದ ಪುತ್ತೂರು ಪಟ್ಟಣದ ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಈ ಸಂದರ್ಭದಲ್ಲಿ ಸದಸ್ಯರಾದ ಜೀವಂದರ್​ ಜೈನ್,​ ಭಾಮಿ ಅಶೋಕ್ ಶೆಣೈ, ಪಿ.ಜಿ.ಜಗನ್ನಿವಾಸ ರಾವ್, ಶಿವರಾಮ ಸಪಲ್ಯ ಸೇರಿದಂತೆ ಇತರ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Intro:Body:ಪುತ್ತೂರು: ಕಳೆದ ಒಂದು ವಾರದಿಂದ ಪುತ್ತೂರು ಪಟ್ಟಣಕ್ಕೆ ನೀರು ಸರಬರಾಜು ಆಗುತ್ತಿರುವ ನೆಕ್ಕಿಲಾಡಿ ಪಂಪ್ ಹೌಸ್‌ನಲ್ಲಿ ವಿದ್ಯುತ್ ಸಮಸ್ಯೆ ಆದ ಹಿನ್ನೆಲೆಯಲ್ಲಿ ಪುತ್ತೂರಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗುತ್ತಿದ್ದು, ಈ ಕುರಿತು ವಾರದೊಳಗೆ ಕ್ರಮ ಕೈಗೊಳ್ಳದಿದ್ದಲ್ಲಿ ನಗರಸಭೆ ಸದಸ್ಯರಿಂದ ಪುತ್ತೂರು ಮೆಸ್ಕಾಂ ಕಚೇರಿ ಎದುರು ಧರಣಿ ನಡೆಸಲಾಗುವುದು ಎಂದು ಪುತ್ತೂರು ನಗರಸಭೆ ಸದಸ್ಯರು ನಗರಸಭೆ ಪೌರಾಯುಕ್ತರಿಗೆ ನೀಡಿದ ಮನವಿಯಲ್ಲಿ ಎಚ್ಚರಿಕೆ ನೀಡಿದ್ದಾರೆ.
ನಗರಸಭಾ ಸದಸ್ಯರು ಪೌರಾಯುಕ್ತೆ ರೂಪಾ ಶೆಟ್ಟಿಯವರಿಗೆ ಪಟ್ಟಣದಲ್ಲಿ ಕುಡಿಯುವ ನೀರಿನ ಸಮಸ್ಯೆಯ ಕುರಿತು ಮನವಿ ಮಾಡಿದ್ದಾರೆ. ನಗರಸಭೆ ವ್ಯಾಪ್ತಿಗೆ ನೆಕ್ಕಿಲಾಡಿಯಿಂದ ಬರುತ್ತಿರುವ ಕುಡಿಯುವ ನೀರಿನ ಘಟಕದ ಮೂಲಸ್ಥಾವರಕ್ಕೆ ನಿರಂತರ ವಿದ್ಯುತ್ ನೀಡುವ ಸೌಲಭ್ಯವಿದ್ದರೂ ದಿನಪ್ರತಿ ಆಗಾಗ ವಿದ್ಯುತ್ ತೆಗೆಯುವುದರಿಂದ ಪುತ್ತೂರು ಪಟ್ಟಣದ ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಈ ಕುರಿತು ಹಲವಾರು ಬಾರಿ ಹಲವಾರು ಬಾರಿ ನಗರಸಭೆಗೆ ತಿಳಿಸಲಾಗಿದೆ. ಮುಂದೆ ನಗರಸಭೆ ಆಡಳಿತಾಧಿಕಾರಿಯಾಗಿರುವ ಜಿಲ್ಲಾಧಿಕಾರಿಗಳ ಗಮನಕ್ಕೆ ಇದನ್ನು ತರುವಂತೆ ಮತ್ತು ವಾರದೊಳಗೆ ಕುಡಿಯುವ ನೀರಿಗೆ ಸಮರ್ಪಕ ವ್ಯವಸ್ಥೆ ಮಾಡದೇ ಇದ್ದಲ್ಲಿ ಪುತ್ತೂರು ಮೆಸ್ಕಾಂ ಎದುರು ಧರಣಿ ಮಾಡಲಾಗುವುದು ಎಂದು ಮನವಿಯಲ್ಲಿ ತಿಳಿಸಲಾಗಿದೆ. ಸದಸ್ಯರಾದ ಭಾಮಿ ಅಶೋಕ್ ಶೆಣೈ, ಜೀವಂಧರ್ ಜೈನ್, ಪಿ.ಜಿ.ಜಗನ್ನಿವಾಸ ರಾವ್, ಶಿವರಾಮ ಸಪಲ್ಯ, ಸುಂದರ ಪೂಜಾರಿ ಬಡಾವು, ಪದ್ಮನಾಭ ನಾಯಕ್, ವಸಂತ ಕಾರೆಕ್ಕಾಡು, ವಿದ್ಯಾ ಗೌರಿ, ಗೌರಿ ಬನ್ನೂರು, ಪ್ರೇಮಲತಾ ನಂದಿಲ, ಮಮತಾ ರಂಜನ್, ಮೋಹಿನಿ ವಿಶ್ವನಾಥ ಗೌಡ, ಸಂತೋಷ್ ಬೊಳುವಾರು ಸಾರ್ವಜನಿಕರ ಪರವಾಗಿ ಮನವಿ ನೀಡಿದರು. ನಗರಸಭೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಅರುಣ್, ನೀರಿನ ವಿಭಾಗದ ವಸಂತ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.