ಮಂಗಳೂರು: ನಗರ ಸೇರಿದಂತೆ ಎಲ್ಲಾ ಆಯಾಕಟ್ಟಿನ ಸ್ಥಳಗಳಲ್ಲಿ ಭದ್ರತಾ ವ್ಯವಸ್ಥೆಯನ್ನು ಬಿಗಿಗೊಳಿಸುವಂತೆ ನಗರ ಪೊಲೀಸ್ ಆಯುಕ್ತ ಡಾ.ಪಿ.ಎಸ್.ಹರ್ಷ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಜನನಿಬಿಡ ಪ್ರದೇಶಗಳಲ್ಲಿ ಭಯೋತ್ಪಾದನಾ ದಾಳಿ ನಡೆಯುವ ಸಾಧ್ಯತೆ ಇದೆ ಎಂಬ ಗುಪ್ತಚರ ಇಲಾಖೆಯ ವರದಿಯ ಆಧಾರದಂತೆ ಈ ಕಟ್ಟೆಚ್ಚರ ವಹಿಸಲಾಗಿದೆ. ಎನ್ಎಂಪಿಟಿ, ಎಂಆರ್ಪಿಎಲ್, ಎನ್ಐಟಿಕೆ, ಕೆಐಒಸಿಎಲ್, ವಾಣಿಜ್ಯ ಸಂಕೀರ್ಣಗಳು, ಮಾಲ್ಗಳು, ಆಸ್ಪತ್ರೆಗಳಲ್ಲಿ ಪೊಲೀಸರು ತೀವ್ರ ನಿಗಾ ವಹಿಸಬೇಕೆಂದು ಅವರು ಹೇಳಿದರು.
ಕರಾವಳಿಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದ್ದು, ಸಮುದ್ರದಲ್ಲಿಯೂ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ವಿದೇಶಿ ಅಥವಾ ಸಂಶಯಾಸ್ಪದ ದೋಣಿಗಳು ಕಂಡು ಬಂದಲ್ಲಿ ಮೀನುಗಾರರು ಈ ಬಗ್ಗೆ ತಕ್ಷಣ ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡಬೇಕೆಂದು ಆಯುಕ್ತರು ತಿಳಿಸಿದರು.