ETV Bharat / state

Anti Communal Wing: ಮಂಗಳೂರಿನಲ್ಲಿ ಆ್ಯಂಟಿ ಕಮ್ಯೂನಲ್ ವಿಂಗ್ ಆರಂಭ.. ಪೊಲೀಸ್ ಕಮೀಷನರ್ ಕುಲದೀಪ್ ಕುಮಾರ್ ಜೈನ್

author img

By

Published : Jun 15, 2023, 2:00 PM IST

Updated : Jun 15, 2023, 3:58 PM IST

ಇತ್ತೀಚೆಗೆ ಗೃಹ ಸಚಿವ ಜಿ ಪರಮೇಶ್ವರ್​ ನೀಡಿದ್ದ ಸೂಚನೆಯಂತೆ ಮಂಗಳೂರಿನಲ್ಲಿ ಆ್ಯಂಟಿ ಕಮ್ಯೂನಲ್​ ವಿಂಗ್​ ಆರಂಭವಾಗಿದೆ.

Anti Communal Wing
ಮಂಗಳೂರಿನಲ್ಲಿ ಆ್ಯಂಟಿ ಕಮ್ಯೂನಲ್ ವಿಂಗ್
ಆ್ಯಂಟಿ ಕಮ್ಯೂನಲ್ ವಿಂಗ್ ಕುರಿತು ಪೊಲೀಸ್ ಕಮೀಷನರ್ ಕುಲದೀಪ್ ಕುಮಾರ್ ಜೈನ್ ಮಾಹಿತಿ

ಮಂಗಳೂರು: ಗೃಹ ಸಚಿವ ಡಾ ಜಿ ಪರಮೇಶ್ವರ್​ ಅವರು ಸೂಚಿಸಿದಂತೆ ಮಂಗಳೂರಿನಲ್ಲಿ ಆ್ಯಂಟಿ ಕಮ್ಯೂನಲ್ ವಿಂಗ್ ಅನ್ನು ಎರಡು ದಿನಗಳ ಹಿಂದೆ ರಚಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ತಿಳಿಸಿದ್ದಾರೆ.

ನಗರ ಪೊಲೀಸ್ ಕಮೀಷನರ್ ಕಚೇರಿಯಲ್ಲಿ ಇಂದು ಮಾಧ್ಯಮವರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ಗೃಹ ಸಚಿವರು ಮಂಗಳೂರಿಗೆ ಬಂದಾಗ ಆ್ಯಂಟಿ ಕಮ್ಯೂನಲ್ ವಿಂಗ್ ಘೋಷಣೆ ಮಾಡಿದ್ದರು. ಅವರ ಸೂಚನೆಯಂತೆ ನಗರದಲ್ಲಿ ಆ್ಯಂಟಿ ಕಮ್ಯೂನಲ್ ವಿಂಗ್ ಸ್ಥಾಪಿಸಲಾಗಿದೆ. ಸಿಟಿ ಸ್ಪೆಷಲ್ ಬ್ರಾಂಚ್ (ಸಿಎಸ್ ಬಿ) ಇನ್ಸ್ ಪೆಕ್ಟರ್ ಶರೀಫ್ ಅವರ ನೇತೃತ್ವದಲ್ಲಿ ಈ ತಂಡ ರಚಿಸಲಾಗಿದೆ. ಸಿಎಸ್ ಬಿ ಇನ್ಸ್ ಪೆಕ್ಟರ್ ಅವರು ಇದನ್ನು ಮುನ್ನಡೆಸಲಿದ್ದು, ಸಿಸಿಬಿ ಎಸಿಪಿ ಪಿ ಎ ಹೆಗ್ಡೆ ಇದರು ಮೇಲುಸ್ತುವಾರಿ ನೋಡಿಕೊಳ್ಳಲಿದ್ದಾರೆ. ಅವರು ನೇರವಾಗಿ ಪೊಲೀಸ್ ಕಮೀಷನರ್ ಅವರಿಗೆ ವರದಿ ಸಲ್ಲಿಸಲಿದ್ದಾರೆ ಎಂದರು.

ಆ್ಯಂಟಿ ಕಮ್ಯೂನಲ್ ವಿಂಗ್ ಎಲ್ಲಾ ರೀತಿಯ ಕೋಮು ಪ್ರಕರಣಗಳ ಬಗ್ಗೆ ನಿಗಾವಹಿಸಲಿದೆ. ಕೋಮು ಪ್ರಕರಣದ ಆರೋಪಿಗಳ ಮೇಲೆ ನಿಗಾ ವಹಿಸಲಿದ್ದು, ಅವರ ಕಾರ್ಯಾಚರಣೆ ಬಗ್ಗೆ ಗಮನಕೊಡಲಿದೆ. ಹಿಂದಿನ ಎಲ್ಲಾ ಪ್ರಕರಣಗಳ ಸಂಬಂಧ ನ್ಯಾಯಾಲಯದ ವಿಚಾರಣೆ ಗಳ ಬಗ್ಗೆ ನಿಗಾವಹಿಸಲಿದ್ದು, ಸಂತ್ರಸ್ತರಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳಲಿದೆ. ಕಳೆದ 10 ವರ್ಷಗಳಿಂದ ನಡೆದ ಸುಮಾರು 200 ಪ್ರಕರಣಗಳ ಬಗ್ಗೆ ಈ ತಂಡ ನಿಗಾವಹಿಸಲಿದೆ ಎಂದು ನಗರ ಪೊಲೀಸ್​ ಆಯುಕ್ತರು ತಿಳಿಸಿದರು.

ಕೋಮು ದ್ವೇಷ ಮೂಡುವಂತಹ ಯಾವುದೇ ವಿಚಾರಕ್ಕೆ ಸಂಬಂಧಿಸಿದಂತೆ ದ್ವೇಷ ಭಾಷಣ, ನೈತಿಕ ಪೊಲೀಸ್​ಗಿರಿ, ಸಾಮಾಜಿಕ ಜಾಲತಾಣದಲ್ಲಿ ದ್ವೇಷ ಹರಡುವುದು, ದನಗಳ್ಳತನ ಪ್ರಕರಣದ ಬಗ್ಗೆ ಈ ತಂಡ ನಿಗಾವಹಿಸಲಿದೆ. ಯಾವುದೇ ಘಟನೆ ನಡೆದಾಗ ಆಯಾ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿ ಆ ಬಳಿಕ ಆ್ಯಂಟಿ ಕಮ್ಯೂನಲ್ ವಿಂಗ್ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದರು.

ಗೃಹ ಸಚಿವ ಪರಮೇಶ್ವರ್ ಸೂಚನೆ; ಮಂಗಳೂರು ನಗರವು ಪುರಾತನ ಮತ್ತು ಪಾರಂಪರಿಕ ನಗರವಾಗಿದ್ದು, ಇಲ್ಲಿ ಐತಿಹಾಸಿಕ ಪ್ರೇಕ್ಷಣೀಯ ಸ್ಥಳಗಳರುವುದರಿಂದ ವಿದೇಶಿಯರು ಮತ್ತು ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿರುತ್ತಾರೆ, ನಗರ ಪ್ರದೇಶದಲ್ಲಿ ಅನೇಕ ವಿದ್ಯಾಸಂಸ್ಥೆಗಳದ್ದು ರಾಜ್ಯ, ಅಂತಾರಾಜ್ಯ ಮತ್ತು ವಿದೇಶಿ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುತ್ತಾರೆ. ಮಂಗಳೂರು ನಗರ ವ್ಯಕ್ತಿಯು ಕೋಮು ಸೌಹಾರ್ದತೆ ವಿಚಾರದಲ್ಲಿ ಅತಿ ಸೂಕ್ಷ್ಮ ಪ್ರದೇಶವಾಗಿದ್ದು, ಸಣ್ಣ ಪುಟ್ಟ ಮತೀಯ ಘಟನೆಗಳು ವಿಕೋಪಕ್ಕೆ ಹೋಗಿರುವ ಸನ್ನಿವೇಶಗಳು ಈ ಹಿಂದೆ ನಡೆದಿವೆ. ನಗರದಲ್ಲಿ ನೈತಿಕ ಪೊಲೀಸ್‌ಗಿರಿ ಪ್ರಕರಣಗಳು ವರದಿಯಾದ ಸಂದರ್ಭದಲ್ಲಿ ಹಾಗೂ ಕಾನೂನು ಸುವ್ಯವಸ್ಥೆಗೆ ತೊಂದರೆಯಾದ ಸಮಯದಲ್ಲಿ ಅಶಾಂತಿಯ ವಾತಾವರಣ ಉಂಟಾಗಿರುತ್ತದೆ. ಹೀಗಾಗಿ ನಗರದಲ್ಲಿ ನೈತಿಕ ಪೊಲೀಸ್‌ಗಿರಿ ಪ್ರಕರಣಗಳನ್ನು ತಡೆಗಟ್ಟುವ ಸಲುವಾಗಿ ಕ್ಷಿಪ್ರ ಕಾರ್ಯಾಚರಣಿಯನ್ನು ನಡೆಸಿ ಪರಿಸ್ಥಿತಿಯನ್ನು ನಿರ್ವಹಣಿ ಮಾಡಲು "Anti Communal Wing" ನ್ನು ರಚಿಸುವ ಅವಶ್ಯಕತೆ ಬಗ್ಗೆ ಜೂನ್ 5 ರಂದು ಗೃಹ ಸಚಿವ ಪರಮೇಶ್ವರ್ ಮಂಗಳೂರು ನಗರದ ಪೊಲೀಸ್ ಅಧಿಕಾರಿಗಳ ಪರಿಶೀಲನಾ ಸಭೆಯಲ್ಲಿ ಪ್ರಸ್ತಾಪಿಸಿದ್ದರು. ಕೋಮು ಸೌಹಾರ್ದತೆಯನ್ನು ಕದಡುವ ಹಾಗೂ ನೈತಿಕ ಪೊಲೀಸ್‌ಗಿರಿ ಪ್ರಕರಣಗಳನ್ನು ತಡೆಯುವ ನಿಟ್ಟಿನಲ್ಲಿ ರಚನೆ ಮಾಡಲು ಉದ್ದೇಶಿಸಿರುವ "Anti Communal Wing" ತಂಡದ ಸ್ಥಾಪನೆ ಆಡಳಿತಾತ್ಮಕ ವಿಚಾರವಾಗಿದ್ದು, ಮಂಗಳೂರು ನಗರ ಪೊಲೀಸ್ ಆಯುಕ್ತರು ಈ ಬಗ್ಗೆ ಆದೇಶ ಮಾಡಲು ಸೂಚಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಈಗ ಮಂಗಳೂರು ನಗರದಲ್ಲಿ ಕಾರ್ಯಾಚರಿಸುತ್ತಿರುವ ಸಿಸಿಬಿ ಘಟಕದ ಸಹಾಯಕ ಪೊಲೀಸ್ ಆಯುಕ್ತರ ಉಸ್ತುವಾರಿಯ "Anti Communal Wing ತಂಡವನ್ನು ರಚಿಸಲಾಗಿದೆ.

"Anti Communal Wing' ತಂಡವು ನಗರದಲ್ಲಿ ನಡೆಯಬಹುದಾದ ನೈತಿಕ ಪೊಲೀಸ್ ಗಿರಿ ಸಮಸ್ಯೆಯನ್ನು ನಿಭಾಯಿಸುವುದು, ನಗರದಲ್ಲಿ ಈ ಹಿಂದೆ ವರದಿಯಾಗಿರುವ ಕೋಮು ವಿಚಾರಕ್ಕೆ ಸಂಬಂಧಿಸಿದ ಎಲ್ಲಾ ಕೊಲೆ, ಕೊಲೆ ಪ್ರಯತ್ನ, ದೊಂಬಿ ಪ್ರಕರಣಗಳು ಸೇರಿದಂತೆ ನೈತಿಕ ಪೊಲೀಸ್‌ ಗಿರಿ ಮತ್ತು ಗೋವುಗಳ ಕಳ್ಳತನ, ಅಕ್ರಮ ಗೋ-ಸಾಗಣೆ, ಗೋವಧೆ ಮುಂತಾದ ಪ್ರಕರಣಗಳನ್ನು ಪರಿಶೀಲಿಸಿ, ಆರೋಪಿತರುಗಳ ಚಲನವಲನಗಳ ಬಗ್ಗೆ ಪ್ರತಿನಿತ್ಯ ನಿಗಾವಹಿಸಲಾಗುವುದು. ಆರೋಪಿಗಳ ವಿರುದ್ಧ ಭದ್ರತಾ ಕಾಯ್ದೆಯಡಿ ಮುಚ್ಚಳಿಕೆ ಪಡೆದುಕೊಳ್ಳುವುದರ ಬಗ್ಗೆ ಕರ್ತವ್ಯ ನಿರ್ವಹಿಸುವುದು ಮತ್ತು ಮಾಹಿತಿ ಸಂಗ್ರಹಿಸಿ ನಿಗಾವಹಿಸುವುದನ್ನು ಮಾಡಬೇಕಾಗಿದೆ‌ ಎಂದು ಪೊಲೀಸ್​ ಆಯುಕ್ತರು ಮಾಹಿತಿ ನೀಡಿದರು.

ಮಂಗಳೂರು ನಗರದ ವಿಶೇಷ ಘಟಕದ (ಸಿ.ಎಸ್‌.ಬಿ) ಪೊಲೀಸ್ ನಿರೀಕ್ಷಕರು ಹಾಗೂ ಸಿಬ್ಬಂದಿಗಳು "Anti Communal Wing" ನ ಸದಸ್ಯರಾಗಿರುತ್ತಾರೆ. ಅವರುಗಳು ನಗರದಲ್ಲಿ ದಾಖಲಾಗಿರುವ ಹಾಗೂ ದಾಖಲಾಗುವ ಎಲ್ಲಾ ಕೋಮು ಸೌಹಾರ್ದಕ್ಕೆ ದಕ್ಕೆ ಉಂಟು ಮಾಡುವ ಪ್ರಕರಣಗಳ ಕುರಿತು ಕಾಲಕಾಲಕ್ಕೆ ಆರೋಪಿಗಳ ಮೇಲೆ ನಿಗಾ ಇಡುತ್ತಾರೆ. ನಗರದ ಅಪರಾಧ ವಿಭಾಗದ (ಸಿಸಿಐ) ಸಹಾಯಕ ಪೊಲೀಸ್‌ ಆಯುಕ್ತರು ಈ ತಂಡದ ಉಸ್ತುವಾರಿಯನ್ನು ವಹಿಸಿ ನಗರ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಕೋಮು ಗಲಭೆಗಳು ನಡೆಯದಂತೆ ಹಾಗೂ ಕೋಮು ಸೌಹಾರ್ದತೆಗೆ ತೊಂದರೆಯಾಗಬಹುದಾದ ವಿಚಾರಗಳ ಕುರಿತು ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಈ ಬಗ್ಗೆ ಮುಂಚಿತವಾಗಿ ಮಾಹಿತಿಯನ್ನು ಪಡೆದುಕೊಂಡು ಸಮಸ್ಯೆ ಬಂದಾಗ, ಕ್ಷಿಪ್ತ ಕಾರ್ಯಾಚರಣೆಯನ್ನು ನಡೆಸಿ `ಪರಿಸ್ಥಿತಿಯನ್ನು ನಿರ್ವಹಣೆ ಮಾಡಿ, ನಿಭಾಯಿಸುವ ಕ್ರಮಗಳನ್ನು ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ "Anti Communal Wing" ತಂಡವನ್ನು ರಚಿಸಿ ಮಂಗಳೂರು ನಗರ ಪೊಲೀಸ್ ‌ಕಮೀಷನರ್ ಕುಲದೀಪ್ ಕುಮಾರ್ ಆರ್ ಜೈನ್ ಆದೇಶಿಸಿದ್ದಾರೆ.

Last Updated : Jun 15, 2023, 3:58 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.