ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇಗುಲದ ವತಿಯಿಂದ ನಡೆಯುತ್ತಿರುವ ಮಾಸ್ಟರ್ ಪ್ಲ್ಯಾನ್ ಕಾಮಗಾರಿಗಳ ಹಿನ್ನೆಲೆಯಲ್ಲಿ ರಥ ಬೀದಿಯಲ್ಲಿನ ಕಟ್ಟಡಗಳ ತೆರವು ಕಾರ್ಯಾಚರಣೆ ನಡೆಯಿತು.
ಇಂದು ದೇವಸ್ಥಾನದ ಆಡಳಿತಾಧಿಕಾರಿ ಎಂ.ಜೆ ರೂಪ ಹಾಗೂ ದೇವಸ್ಥಾನದ ಅಧಿಕಾರಿಗಳು ಮತ್ತು ಸುಬ್ರಹ್ಮಣ್ಯ ಪೊಲೀಸ್ ಅಧಿಕಾರಿಗಳ ಮುಂದಾಳತ್ವದಲ್ಲಿ ಇಲ್ಲಿನ ಕುಮಾರಕೃಪಾ ಕಟ್ಟಡ ಸೇರಿದಂತೆ ಮಾಸ್ಟರ್ ಪ್ಲ್ಯಾನ್ ಕಾಮಗಾರಿಗೆ ಅಡ್ಡಿಯಾಗುವಂತಹ ಕಟ್ಟಡಗಳನ್ನು ತೆರವುಗೊಳಿಸಲಾಯಿತು.
ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಭದ್ರತೆ ಒದಗಿಸಲಾಗಿತ್ತು. ಸ್ಥಳದಲ್ಲಿ ದೇವಸ್ಥಾನದ ಆಡಳಿತಾಧಿಕಾರಿಗಳು, ಕಾರ್ಯ ನಿರ್ವಹಣಾಧಿಕಾರಿಗಳು ಸೇರಿದಂತೆ ಸ್ಥಳೀಯ ಅಧಿಕಾರಿಗಳು, ಪೊಲೀಸರು ಉಪಸ್ಥಿತರಿದ್ದರು.