ETV Bharat / state

ನವೀಕರಿಸಬಹುದಾದ ಇಂಧನ ಉತ್ಪಾದನೆಗೆ ಕರಾವಳಿಯಲ್ಲಿ ಬೃಹತ್ ಪ್ರಮಾಣದ ಹೂಡಿಕೆ: ಸಿಎಂ ಬೊಮ್ಮಾಯಿ - ಬೊಮ್ಮಾಯಿ ಮಂಗಳೂರು ಭೇಟಿ

ಹೈಡ್ರೋಜನ್ ಹಾಗೂ ಅಮೋನಿಯಾ ಉತ್ಪಾದನೆಯ ಎರಡು ಪ್ರಮುಖ ಯೋಜನೆಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬರಲಿದ್ದು, ಗಲ್ಫ್ ದೇಶದಲ್ಲಿ ಮತ್ತು ಮಂಗಳೂರಿನಲ್ಲಿ ಇವು ತಲೆ ಎತ್ತಲಿವೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.

Kn_Mng
ಬಸವರಾಜ ಬೊಮ್ಮಾಯಿ
author img

By

Published : Nov 19, 2022, 5:15 PM IST

ಮಂಗಳೂರು: ಬಂಡವಾಳ ಹೂಡಿಕೆದಾರರ ಸಮಾವೇಶದಿಂದ ದೊಡ್ಡ ಪ್ರಮಾಣದ ಹೂಡಿಕೆ ಕರಾವಳಿಯಲ್ಲಿ ಆಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಇಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ನವೀಕರಿಸಬಹುದಾದ ಇಂಧನ, ಹೈಡ್ರೋಜನ್ ಇಂಧನ ಮತ್ತು ಕಡಲನೀರಿನಿಂದ ಅಮೋನಿಯ ಉತ್ಪಾದನೆಗೆ ಸುಮಾರು ಎರಡು ಲಕ್ಷ ಕೋಟಿ ಬಂಡವಾಳ ಹೂಡಿಕೆಯ ನಿರೀಕ್ಷೆ ಇದೆ. ಹಸಿರು ಯೋಜನೆ ಉತ್ಪಾದನೆಗೆ ಅಗತ್ಯವಿರುವ ಮೂಲ ಸೌಕರ್ಯಗಳನ್ನು ಕಲ್ಪಿಸಲು ತಯಾರಿ ನಡೆಸಲಾಗುತ್ತಿದೆ. ಈಗಾಗಲೇ 3 ನವೀಕರಿಸಬಹುದಾದ ಇಂಧನ ಕಂಪನಿಗಳೊಂದಿಗೆ ರಾಜ್ಯ ಉನ್ನತ ಮಟ್ಟದ ಅನುಮೋದನಾ ಸಮಿತಿಯಲ್ಲಿ ಅನುಮೋದನೆ ನೀಡಲಾಗಿದೆ ಎಂದರು.

ಬಹಳ ವೇಗದಲ್ಲಿ ಕೆಲಸಗಳಾಗುತ್ತಿದ್ದು, ಮಾರ್ಚ್, ಏಪ್ರಿಲ್ ವೇಳೆಗೆ ಕೆಲಸ ಪ್ರಾರಂಭ ಮಾಡುವುದಾಗಿ 2-3 ಕಂಪನಿಗಳು ತಿಳಿಸಿವೆ. ನವೀಕರಿಸಬಹುದಾದ ಇಂಧನ ಉತ್ಪಾದನೆಯಲ್ಲಿ ಕರಾವಳಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಮುಖ ಪಾತ್ರ ವಹಿಸಿದೆ. ಹೈಡ್ರೋಜನ್ ಹಾಗೂ ಅಮೋನಿಯಾ ಉತ್ಪಾದನೆಯ ಎರಡು ಪ್ರಮುಖ ಯೋಜನೆಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬರಲಿದೆ. ಗಲ್ಫ್ ದೇಶದಲ್ಲಿ ಮತ್ತು ಮಂಗಳೂರಿನಲ್ಲಿ ಇದು ತಲೆ ಎತ್ತಲಿದೆ.

ಮಂಗಳೂರಿನ ಆಸುಪಾಸಿನಲ್ಲಿ ಕಡಲ ನೀರಿನಿಂದ ಅಮೋನಿಯಾ ತಯಾರು ಮಾಡುವ ಪ್ರಮುಖ ಯೋಜನೆ ಬರಲಿದೆ. ನವೀಕರಿಸಬಹುದಾದ ಇಂಧನ ಘಟಕಕ್ಕೆ ಅಗತ್ಯ ವಿರುವ ಇಂಧನವನ್ನೂ, ನವೀಕರಿಸಬಹುದಾದ ಇಂಧನ ಮೂಲಗಳಾದ ಸೋಲಾರ್, ವಿಂಡ್ ಮಿಲ್​ಗಳಿಂದಲೇ ಪಡೆಯಲಾಗುವುದು.

ಇದು ಸಂಪೂರ್ಣವಾಗಿ ಹಸಿರು ಯೋಜನೆಯಾಗಲಿದೆ. ನೇರ ಹಾಗೂ ಪರೋಕ್ಷವಾಗಿ ದೊಡ್ಡ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿಯಾಗಿ ಈ ಭಾಗದ ಯುವಕರಿಗೆ ಅವಕಾಶಗಳ ಬಾಗಿಲು ತೆರೆಯಲಿದೆ ಎಂದರು.

ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ದುರಸ್ತಿ ಕಾಮಗಾರಿಯು ನಿರಂತರವಾಗಿ ಮಳೆ ಬಂದಿದ್ದರಿಂದ ವಿಳಂಬವಾಗಿದೆ. ಮುಂದಿನ ವಾರ ನಾನು ದೆಹಲಿಗೆ ತೆರಳಲಿದ್ದು ಆ ಸಂದರ್ಭದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗುತ್ತೇನೆ. ಈ ವಾರದಲ್ಲಿ ಅದಕ್ಕೆ ಪೂರಕವಾಗಿ ಇಡೀ ರಾಜ್ಯದ ರಾಷ್ಟ್ರೀಯ ಹೆದ್ದಾರಿಗಳ ಸಭೆಯನ್ನು ಕರೆಯಲಾಗುವುದು. ಆದ್ಯತೆ ಮೇರೆಗೆ ಮಂಗಳೂರು ಬೆಂಗಳೂರು ಹೆದ್ದಾರಿ ದುರಸ್ತಿ ಕೆಲಸಗಳಾದ ಸುರಂಗ ಮಾರ್ಗ, ವೈಟ್​ ಟಾಪಿಂಗ್ ಮುಂತಾದ ಕೆಲಸ ಕೈಗೆತ್ತಿಕೊಳ್ಳುತ್ತೇವೆ.

ಅಲ್ಪಾವಧಿ ಕಾಮಗಾರಿಯಲ್ಲಿ ರಸ್ತೆಯನ್ನು ಬಳಕೆಗೆ ಯೋಗ್ಯವಾಗಿಸುವುದು ಹಾಗೂ ದೀರ್ಘಾವಧಿ ಕಾಮಗಾರಿಗಳಲ್ಲಿ ಸುರಂಗ ಮಾರ್ಗ ನಿರ್ಮಾಣ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆ ಅನಾವರಣಗೊಳಿಸಿದ ಸಿಎಂ ಬೊಮ್ಮಾಯಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.