ETV Bharat / state

ಪ್ರವೀಣ್ ನೆಟ್ಟಾರು ಮನೆಗೆ ಸಿಎಂ ಭೇಟಿ.. ಕುಟುಂಬಕ್ಕೆ ರೂ 25 ಲಕ್ಷ ಪರಿಹಾರದ ಚೆಕ್ ಹಸ್ತಾಂತರ

ಪ್ರವೀಣ್ ಕುಟುಂಬದವರಿಗೆ ಪಕ್ಷ ಮತ್ತು ಸರ್ಕಾರದ ವತಿಯಿಂದ ಎಲ್ಲ ರೀತಿಯ ಸಹಕಾರ ನೀಡಲಾಗುವುದು. ಅವರ ಜೀವನದ ಮುಂದಿನ ಭವಿಷ್ಯಕ್ಕೆ ಸಹಕಾರ ನೀಡಲಾಗುವುದು. ಪ್ರವೀಣ್ ಆತ್ಮಕ್ಕೆ ಕೊಲೆ ಮಾಡಿದವರಿಗೆ ಶಿಕ್ಷೆಯಾದಾಗ ಮಾತ್ರ ಶಾಂತಿ ದೊರಕಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಪ್ರವೀಣ್ ನೆಟ್ಟಾರು ಮನೆಗೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ

author img

By

Published : Jul 28, 2022, 8:47 PM IST

Updated : Jul 28, 2022, 9:19 PM IST

ಸುಳ್ಯ: ಬೆಳ್ಳಾರೆಯಲ್ಲಿ ಕೊಲೆಯಾದ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಸರ್ಕಾರದಿಂದ 25 ಲಕ್ಷ ಪರಿಹಾರದ ಚೆಕ್ ಹಸ್ತಾಂತರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೊಲೆ ಪ್ರಕರಣವನ್ನು ಭೇದಿಸುವವರೆಗೆ ಅಕ್ಷರಶಃ ದಣಿವಿಲ್ಲದೇ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು. ಅವರು ಇಂದು ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಅವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿರುವುದು

ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರವೀಣ್ ತಮ್ಮ ಕುಟುಂಬಕ್ಕೆ ಆಧಾರವಾಗಿದ್ದು, ಚಿಕನ್​ ಅಂಗಡಿಯೇ ಆದಾಯದ ಮೂಲವಾಗಿತ್ತು. ಸರ್ಕಾರದ ವತಿಯಿಂದ ಪರಿಹಾರ ನಿಧಿಯಿಂದ 25 ಲಕ್ಷ ಪರಿಹಾರ ಹಾಗೂ ಭಾರತೀಯ ಜನತಾ ಪಕ್ಷದ ವತಿಯಿಂದ 25 ಲಕ್ಷಗಳನ್ನು ಪರಿಹಾರವಾಗಿ ನೀಡಲಾಗಿದೆ.

ಪ್ರವೀಣ್ ಕುಟುಂಬದವರಿಗೆ ಪಕ್ಷ ಮತ್ತು ಸರ್ಕಾರದ ವತಿಯಿಂದ ಎಲ್ಲ ರೀತಿಯ ಸಹಕಾರ ನೀಡಲಾಗುವುದು. ಅವರ ಜೀವನದ ಮುಂದಿನ ಭವಿಷ್ಯಕ್ಕೆ ಸಹಕಾರ ನೀಡಲಾಗುವುದು. ಪ್ರವೀಣ್ ಆತ್ಮಕ್ಕೆ ಕೊಲೆ ಮಾಡಿದವರಿಗೆ ಶಿಕ್ಷೆಯಾದಾಗ ಮಾತ್ರ ಶಾಂತಿ ದೊರಕಲಿದೆ ಎಂದರು.

ಪ್ರವೀಣ್ ಕುಟುಂಬದವರು ಇದೇ ಮಾತನ್ನು ಹೇಳಿದ್ದಾರೆ. ಇನ್ನೆಂದೂ ಈ ರೀತಿ ಯಾರಿಗೂ ಆಗಬಾರದು. ಇದರ ಹಿಂದಿರುವ ಸಂಘಟನೆಗಳ ವಿರುದ್ಧವೂ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡಿದ್ದಾರೆ. ಕಟುಕರಿಗೆ ಶಿಕ್ಷೆ ಆಗುವ ಕೆಲಸವನ್ನು ಕಟ್ಟುನಿಟ್ಟಾಗಿ ಮಾಡಲಾಗುವುದು ಎಂದು ಭರವಸೆ ನೀಡಿದರು.

ಭಯೋತ್ಪಾದಕ ಕೃತ್ಯ ಎಂದು ಪರಿಗಣಿಸಿದೆ: ಇದೊಂದು ಪೂರ್ವಯೋಜಿತ ಕೃತ್ಯ ಎಂದು ಮೇಲ್ನೋಟಕ್ಕೆ ತಿಳಿಯುತ್ತದೆ. ಮೊನ್ನೆ ನಡೆದ ಪ್ರವೀಣ್ ಹತ್ಯೆ ಪ್ರಕರಣ ಖಂಡನೀಯ. ಕಳೆದ ಹತ್ತು ವರ್ಷಗಳಲ್ಲಿ ಈ ಭಾಗದಲ್ಲಿ ಇಂತಹ ಚಟುವಟಿಕೆಗಳು ನಡೆಯುತ್ತಿದೆ. ಸಮಾಜಘಾತುಕ ಶಕ್ತಿಗಳು ಬೆಂಬಲ ನೀಡಿರುವುದರಿಂದ ನಿರ್ಬಿಡೆಯಿಂದ ಈ ಘಟನೆಯನ್ನು ನಡೆಸಲಾಗಿದೆ. ಇದನ್ನು ನಾವು ಕೊಲೆ ಪ್ರಕರಣವಾಗಿ ನೋಡುತ್ತಿಲ್ಲ. ದೇಶವನ್ನು ಛಿದ್ರ ಮಾಡುವ ಯೋಜನಾ ಬದ್ಧವಾದ ಭಯೋತ್ಪಾದಕ ಕೃತ್ಯ ಎಂದು ಪರಿಗಣಿಸಲಾಗಿದೆ. ತನಿಖೆ ಪ್ರಾರಂಭವಾಗಿದೆ ಎಂದರು.

ಆರೋಪಿಗಳು ರಾಜ್ಯದ ಗಡಿ ದಾಟಿರಬಹುದು. ಈ ಎಲ್ಲ ಆಯಾಮದಲ್ಲಿ ತನಿಖೆ ಮಾಡಲಾಗುತ್ತಿದೆ. ಕೆಲವರನ್ನು ವಶಕ್ಕೆ ತೆಗೆದುಕೊಂಡು, ಅವರಿಂದ ಪಡೆದ ಮಾಹಿತಿಯಿಂದ ತನಿಖೆ ಮುಂದುವರೆಯಲಿದೆ. ಅತಿ ಶೀಘ್ರದಲ್ಲಿ ಆರೋಪಿಗಳನ್ನು ಬಂಧಿಸಲಾಗುವುದು ಎಂಬ ವಿಶ್ವಾಸವಿದೆ. ಎಡಿಜಿಪಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಕಳೆದ ಹಲವಾರು ವರ್ಷಗಳಿಂದ ಅಕ್ರಮಗಳಲ್ಲಿ ತೊಡಗಿಕೊಂಡಿರುವ ಸಮಾಜಘಾತುಕ ಶಕ್ತಿಗಳ ಜಾಡು ಹಿಡಿದು, ಈ ದಿಸೆಯಲ್ಲಿಯೂ ತನಿಖೆ ಕೈಗೊಂಡು ಹಿಂದಿರುವ ಸಂಘಟನೆಗಳನ್ನು ಗಮನಿಸುತ್ತಿದ್ದೇವೆ ಎಂದು ತಿಳಿಸಿದರು.

ಕರ್ನಾಟಕಕ್ಕೆ ಎನ್​ಐಎ ಅಗತ್ಯವಿದೆ: ರಾಜ್ಯಕ್ಕೆ ರಾಷ್ಟ್ರೀಯ ತನಿಖಾ ದಳವನ್ನು ಒದಗಿಸಲು ಕೋರಲಾಗಿದೆ. ವಿಶೇಷವಾಗಿ ಮಂಗಳೂರು ಭಾಗಕ್ಕೆ ಎನ್ ಐ ಎ ಯ ಅವಶ್ಯಕತೆ ಇದೆ ಎಂದು ಕೇಂದ್ರ ಸರ್ಕಾರಕ್ಕೆ ಆಗ್ರಹಿಸಲಾಗಿದೆ. ಪ್ರಾಥಮಿಕ ತನಿಖಾ ವರದಿಯ ಆಧಾರವಾಗಿ ಹೆಚ್ಚುವರಿ ತನಿಖೆಯ ಅವಶ್ಯಕತೆ ಇದ್ದಲ್ಲಿ ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಲಾಗುವುದು.

ಈ ಘಟನೆಗೆ ಬೆಂಬಲ ನೀಡಿರುವ ಬಗ್ಗೆಯೂ ತನಿಖೆ ನಡೆಸಿ ಈ ಕುಕೃತ್ಯದಲ್ಲಿ ಭಾಗಿಯಾಗಿರುವ ಎಲ್ಲ ಜಾಲವನ್ನು ಭೇದಿಸಲಾಗುವುದು. ಪಿಎಫ್‍ಐ ಬ್ಯಾನ್ ಮಾಡಲು ಕ್ರಮಗಳು ಪ್ರಾರಂಭವಾಗಿದೆ. ಈ ರೀತಿಯ ದುಷ್ಟಕೃತ್ಯಗಳು ಭಾರತದ ವಿವಿಧ ರಾಜ್ಯಗಳಲ್ಲಿ ನಡೆದಿದ್ದು, ದೇಶದ ಮಟ್ಟದಲ್ಲಿ ಸರಿಯಾದ ಕ್ರಮವನ್ನು ಕೇಂದ್ರ ಸರ್ಕಾರ ತೆಗೆದುಕೊಳ್ಳಲಿದೆ ಎಂಬ ವಿಶ್ವಾಸವಿದೆ ಎಂದು ತಿಳಿಸಿದರು.

ಮಸೂದ್ ಹತ್ಯೆಗೂ ಹಾಗೂ ಪ್ರವೀಣ್ ಹತ್ಯೆಗೂ ಸಂಬಂಧವಿದೆಯೇ ಎಂಬ ಬಗ್ಗೆ ತನಿಖೆಯಿಂದ ತಿಳಿಯಲಿದೆ. ಪೊಲೀಸ್ ಅಧಿಕಾರಿಗಳ ಕರ್ತವ್ಯ ವೈಫಲ್ಯವಾಗಿದ್ದರೆ ಅದನ್ನೂ ತನಿಖೆಗೆ ಒಳಪಡಿಸಲಾಗುವುದು. ನೆರೆದ ಸಾರ್ವಜನಿಕರು ನಳಿನ್ ಕುಮಾರ್ ವಿರುದ್ಧ ಹಾಗೂ ಸಚಿವರ, ಶಾಸಕರ ವಿರುದ್ಧ ಘೋಷಣೆ ಕೂಗಿದರು.

ಓದಿ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಪ್ರಮೋದ್ ಮುತಾಲಿಕ್​ಗೆ ದ.ಕ ಜಿಲ್ಲಾ ಪ್ರವೇಶ ನಿಷೇಧ

Last Updated : Jul 28, 2022, 9:19 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.