ETV Bharat / state

ಸೋಮಣ್ಣ ಮತ್ತು ಯಡಿಯೂರಪ್ಪ ಅವರದ್ದು ತಂದೆ-ಮಗನ ಸಂಬಂಧ: ಸಿಎಂ ಬೊಮ್ಮಾಯಿ - CM Basavaraja bommai statement

ಸೋಮಣ್ಣ ಮತ್ತು ಯಡಿಯೂರಪ್ಪ ಅವರದ್ದು ತಂದೆ ಮಗನ ಸಂಬಂಧ ಎಂದ ಬೊಮ್ಮಾಯಿ - ಸೋಮಣ್ಣ ಅವರಿಗೆ ಯಾರೊಂದಿಗೂ ಭಿನ್ನಾಭಿಪ್ರಾಯ ಇಲ್ಲ - ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ

cm-basavaraja-bommai-spoke-at-mangaluru
ಸೋಮಣ್ಣ ಮತ್ತು ಯಡಿಯೂರಪ್ಪ ಅವರದ್ದು ತಂದೆ-ಮಗನ ಸಂಬಂಧ: ಸಿಎಂ ಬೊಮ್ಮಾಯಿ
author img

By

Published : Mar 16, 2023, 2:01 PM IST

ಮಂಗಳೂರು : ಸೋಮಣ್ಣ ಮತ್ತು ಯಡಿಯೂರಪ್ಪ ಅವರದ್ದು ತಂದೆ ಮಗನ ಸಂಬಂಧ. ಸೋಮಣ್ಣ ಅವರು ದೆಹಲಿಗೆ ವೈಯಕ್ತಿಕ ಕಾರಣದಿಂದ ಹೋಗಿದ್ದರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಮಂಗಳೂರಿನಲ್ಲಿ ಆಯೋಜಿಸಲಾದ ಫಲಾನುಭವಿಗಳ ಸಭೆಗೆ ಆಗಮಿಸಿದ ವೇಳೆ ಮೇರಿಹಿಲ್ ಹೆಲಿಪ್ಯಾಡ್ ನಲ್ಲಿ ಮಾತನಾಡಿದ ಅವರು, ಸೋಮಣ್ಣ ಅವರಿಗೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಯಡಿಯೂರಪ್ಪ ಅವರು ಎಲ್ಲರಿಗಿಂತ ಉನ್ನತ ನಾಯಕ. ಸೋಮಣ್ಣ ಅವರಿಗೆ ಯಾರೊಂದಿಗೂ ಭಿನ್ನಾಭಿಪ್ರಾಯ ಇಲ್ಲ ಎಂದು ಸ್ಪಷ್ಟಪಡಿಸಿದರು.

ಬೇಸಿಗೆಯಲ್ಲಿ ನೀರಿಗಾಗಿ ಹಾಹಾಕಾರ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಬೊಮ್ಮಾಯಿ, ಕುಡಿಯುವ ನೀರಿನ ವಿಚಾರವಾಗಿ ಟಾಸ್ಕ್ ಫೋರ್ಸ್ ಮಾಡಲಾಗಿದೆ. ನೀರಿಗಾಗಿ ಕೆಲವು ಕಡೆ ತುಂಬಾ ಸಮಸ್ಯೆಗಳಿವೆ. ಕೆಲವು ಭಾಗದಲ್ಲಿ ಬೋರ್​ವೆಲ್ ಗಳು ಬತ್ತಿ ಹೋಗಿವೆ. ಈ ಬಗ್ಗೆ ವರದಿ ತರಿಸಿ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

ಮೈಸೂರು-ಬೆಂಗಳೂರು ಎಕ್ಸ್ ಪ್ರೆಸ್ ಹೈವೇ ವಿಚಾರದಲ್ಲಿ ಟೋಲ್ ಸಂಗ್ರಹಕ್ಕೆ ಕಾಂಗ್ರೆಸ್ ವಿರೋಧ ಮಾಡುತ್ತಿರುವ ಬಗ್ಗೆ ಮಾತನಾಡಿ, ಕಾಂಗ್ರೆಸ್​​ನವರು ಎಲ್ಲದರಲ್ಲೂ ರಾಜಕಾರಣ ಮಾಡುತ್ತಾರೆ. ಕಾಂಗ್ರೆಸ್ ಸರ್ಕಾರ ಇದ್ದಾಗ ಟೋಲ್ ಆಗಿಲ್ವಾ‌. ಕೆಟ್ಟ ಪರಂಪರೆ ಕಾಂಗ್ರೆಸ್​ನದ್ದು. ಸಮಸ್ಯೆ ಇದ್ದರೆ ಕುಳಿತು ಬಗೆಹರಿಸಿಕೊಳ್ಳಬಹುದು. ಕಾಂಗ್ರೆಸ್ ಸಭ್ಯತೆಯ ದಿವಾಳಿತನ ತೋರಿಸಿದೆ ಎಂದು ವಾಗ್ದಾಳಿ ನಡೆಸಿದರು.

ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್​ನಿಂದ ಗ್ಯಾರಂಟಿ ಕಾರ್ಡ್ ವಿತರಣೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಗ್ಯಾರಂಟಿ ಕಾರ್ಡ್ ಗಾಗಿ ಯಾಕೆ ಹತಾಶೆ ಆಗಬೇಕು. ಕಾಂಗ್ರೆಸ್ ಏನು ಎಂಬುದು ಇಡೀ ಜಗತ್ತಿಗೆ ಗೊತ್ತಿದೆ. ಜನರೇ ಈ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಇವರ ಮಾತಿಗೆ ಗ್ಯಾರಂಟಿ ಇಲ್ವಾ? ಗ್ಯಾರಂಟಿ ಕಾರ್ಡ್ ಯಾಕೆ ಕೊಡಬೇಕು. ಗ್ಯಾರಂಟಿ ಕಾರ್ಡ್ ಅದು ಜಸ್ಟ್ ವಿಸಿಟಿಂಗ್ ಕಾರ್ಡ್ ಎಂದು ಲೇವಡಿ ಮಾಡಿದರು.

ಹಿರಿಯರಿಗೆ ಬಿಜೆಪಿ ಟಿಕೆಟ್ ನೀಡುವ ವಿಚಾರದಲ್ಲಿ ಮಾತನಾಡಿ, ಟಿಕೆಟ್ ಹಂಚಿಕೆ ಬಗ್ಗೆ ಹಿರಿಯರು ನಿರ್ಧಾರ ಕೈಗೊಳ್ಳುತ್ತಾರೆ.ಕಾಂಗ್ರೆಸ್ ಅಭ್ಯರ್ಥಿ ಪಟ್ಟಿ ಬಿಡುಗಡೆ ಮಾಡುವುದು ಅವರ ಪಕ್ಷಕ್ಕೆ ಬಿಟ್ಟ ವಿಚಾರ. ನಮ್ಮ ಪಕ್ಷದ ಅಭ್ಯರ್ಥಿಗಳ ಪಟ್ಟಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ಚುನಾವಣೆಯನ್ನು ಗೆಲ್ಲುವ ನಿಟ್ಟಿನಲ್ಲಿ ಪಕ್ಷ ಗೆಲ್ಲುವ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿದರು.

ಪಶ್ಚಿಮ ಘಟ್ಟ ಭಾಗದಲ್ಲಿ ಕಾಡ್ಗಿಚ್ಚು ವಿಚಾರದಲ್ಲಿ ಪ್ರತಿಕ್ರಿಯೆ ನೀಡಿದ ಅವರು ಸಾಮಾನ್ಯವಾಗಿ ಬೇಸಿಗೆ ಕಾಲದಲ್ಲಿ ಅಲ್ಲಲ್ಲಿ ಬೆಂಕಿ ಬೀರುತ್ತದೆ.ಬೆಂಕಿ ನಂದಿಸುವ ಕ್ರಮ ಕೈಗೊಳ್ಳಲಾಗಿದೆ.ಬೆಂಕಿ ಬೀಳದಂತೆ ತಡೆಯಲು ಕ್ರಮ ಕೈಗೊಳ್ಳಲಾಗಿದೆ.ಈಗಾಗಲೇ ಡಿಸಿ ಜೊತೆ ಸಭೆಯನ್ನು ಮಾಡಿದ್ದೇವೆ. ಸಾಂಪ್ರದಾಯಿಕ ಕಾರಣದಿಂದ ಅಲ್ಲಲ್ಲಿ ಬೆಂಕಿ ಬೀಳುತ್ತಿದೆ. ಬೆಂಕಿ ನಂದಿಸುವ ಬದಲು ಬೆಂಕಿ ಬೀಳದಂತೆ ಕ್ರಮ ಕೈಗೊಳ್ಳಯತ್ತೇವೆ. ಅರಣ್ಯ ಇಲಾಖೆಗೆ ಬೆಂಕಿ‌ ನಂದಿಸಲು ಹೆಲಿಕಾಪ್ಟರ್ ಬಳಕೆ ಬಗ್ಗೆ ಇನ್ನೂ ನಿರ್ಧಾರ ಕೈಗೊಂಡಿಲ್ಲ ಎಂದು ತಿಳಿಸಿದರು.

ಸೋಮಣ್ಣ ವಿಚಾರಕ್ಕೆ ಯಡಿಯೂರಪ್ಪ ಸ್ಪಷ್ಟನೆ : ವಸತಿ ಸಚಿವ ಸೋಮಣ್ಣ ವಿಚಾರದಲ್ಲಿ ಪಕ್ಷದಲ್ಲಿ ಯಾವುದೇ ಗೊಂದಲಗಳಿಲ್ಲ. ಇಲ್ಲಿ ಯಾರನ್ನೂ ಕಡೆಗಣಿಸುವ ಪ್ರಶ್ನೆಯೇ ಇಲ್ಲ. ಎಲ್ಲರೂ ಅವರವರ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ.​

ಇದನ್ನೂ ಓದಿ :ಸೋಮಣ್ಣ ವಿಚಾರದಲ್ಲಿ ಗೊಂದಲವಿಲ್ಲ, ಯಾರನ್ನೂ ಕಡೆಗಣಿಸುವ ಪ್ರಶ್ನೆ ಇಲ್ಲ: ಯಡಿಯೂರಪ್ಪ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.