ETV Bharat / state

ಕೊಡಗು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಹಾನಿ: ಸಿಎಂ ಭೇಟಿ - CM Basavaraja Bommai visits to rainfall area in sulya

ಜನರ ಸಮಸ್ಯೆ ಆಲಿಸಲು ಮುಖ್ಯಮಂತ್ರಿಗಳಿಗೆ ಸಮಯದ ಕೊರತೆ ಇದ್ದರೆ ವೈಮಾನಿಕ ಸಮೀಕ್ಷೆ ಮಾಡಬಹುದಿತ್ತು ಎಂದು ಸುಳ್ಯ ನಗರ ಪಂಚಾಯತ್ ವಿಪಕ್ಷ ಸದಸ್ಯ ವೆಂಕಪ್ಪಗೌಡ ಅವರು ಹೇಳಿದ್ದಾರೆ.

ಮಳೆಹಾನಿ ಸಮೀಕ್ಷೆಗೆ ಸಿಎಂ ಭೇಟಿ
ಮಳೆಹಾನಿ ಸಮೀಕ್ಷೆಗೆ ಸಿಎಂ ಭೇಟಿ
author img

By

Published : Jul 12, 2022, 7:48 PM IST

ಸುಳ್ಯ: ಮಳೆಹಾನಿ ವೀಕ್ಷಣೆಗಾಗಿ ಕೊಡಗು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಪ್ರವಾಸ ಕೈಗೊಂಡಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಜು. 12 ರಂದು ಸಾಯಂಕಾಲ 4:30ರ ಸಮಯದಲ್ಲಿ ಸುಳ್ಯ ನಿರೀಕ್ಷಣಾ ಮಂದಿರಕ್ಕೆ ಭೇಟಿ ನೀಡಿದರು.

ಸುಳ್ಯ ನಗರ ಪಂಚಾಯತ್ ವಿಪಕ್ಷ ಸದಸ್ಯ ವೆಂಕಪ್ಪಗೌಡ ಅವರು ಮಾತನಾಡಿರುವುದು

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಅವರು ಜಿಲ್ಲೆಯ ಸಚಿವರುಗಳು, ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಸುಳ್ಯ ತಾಲೂಕಿನಲ್ಲಿ ಉಂಟಾಗಿರುವ ಮಳೆ ಹಾನಿ ಮತ್ತು ಭೂಕಂಪನದ ಬಗ್ಗೆ ಸಚಿವ ಎಸ್. ಅಂಗಾರ ಅವರು ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ವಿವಿಧ ಬೇಡಿಕೆಗಳ ಮನವಿಯನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಯಿತು.

ಮುಖ್ಯಮಂತ್ರಿಗಳ ಭೇಟಿ ಸಾರ್ವಜನಿಕ ವಲಯದಲ್ಲಿ ಅಸಮಾಧಾನ: ಮುಖ್ಯಮಂತ್ರಿಗಳು ಕೊಡಗಿನ ಭೇಟಿ ಮುಗಿಸಿ ಸುಳ್ಯ ತಾಲೂಕಿಗೆ ಆಗಮಿಸಿದಾಗ ಜಿಲ್ಲಾಡಳಿತದಿಂದ ಸ್ವಾಗತ ನೀಡಲಾಯಿತು. ಸುಳ್ಯದ ಸಂಪಾಜೆಯಲ್ಲಿ ಮಳೆಹಾನಿ ಪ್ರದೇಶಕ್ಕೆ ಭೇಟಿ ನೀಡಿ ಸುಳ್ಯದ ನಿರೀಕ್ಷಣಾ ಮಂದಿರಕ್ಕೆ ಮುಖ್ಯಮಂತ್ರಿಗಳು ಭೇಟಿ ನೀಡಿದ ಸಂದರ್ಭದಲ್ಲಿ ಹಲವಾರು ಜನರು ಮನವಿ ಸಲ್ಲಿಸಲು ನೆರೆದಿದ್ದು, ಮುಖ್ಯಮಂತ್ರಿಗಳು ತುರ್ತಾಗಿ ನಿರ್ಗಮಿಸಿರುವುದು ಜನರ ಅಸಮಾಧಾನಕ್ಕೆ ಕಾರಣವಾಯಿತು.

ಮುಖ್ಯಮಂತ್ರಿಗಳ ಹೇಳಿಕೆ ಪಡೆಯಲು ನೆರೆದಿದ್ದ ಮಾಧ್ಯಮ ಪ್ರತಿನಿಧಿಗಳು ನಿರಾಶೆ ಪಡುವಂತಾಯಿತು. ಈ ಬಗ್ಗೆ ಸುಳ್ಯ ನಗರ ಪಂಚಾಯತ್ ವಿಪಕ್ಷ ಸದಸ್ಯ ವೆಂಕಪ್ಪ ಗೌಡ ಮಾತನಾಡಿ, ಮುಖ್ಯಮಂತ್ರಿಗಳ ಭೇಟಿ ಬಗ್ಗೆ ಜನರು ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ, ಆ ನಿರೀಕ್ಷೆ ಹುಸಿಯಾಗಿದೆ. ಜನರ ಸಮಸ್ಯೆ ಆಲಿಸಲು ಮುಖ್ಯಮಂತ್ರಿಗಳಿಗೆ ಸಮಯದ ಕೊರತೆ ಇದ್ದರೆ ವೈಮಾನಿಕ ಸಮೀಕ್ಷೆ ಮಾಡಬಹುದಿತ್ತು ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬಂದರು ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ, ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್, ಕಂದಾಯ ಸಚಿವ ಆರ್. ಅಶೋಕ್, ಲೋಕೋಪಯೋಗಿ ಸಚಿವ ಸಿ. ಸಿ ಪಾಟೀಲ್, ಸಂಸದ ನಳಿನ್‌ಕುಮಾರ್ ಕಟೀಲ್, ಜಿಲ್ಲಾಧಿಕಾರಿ ಡಾ. ಕೆ. ವಿ ರಾಜೇಂದ್ರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕುಮಾರ್, ಎಸ್‌. ಪಿ ಋಷಿಕೇಶ್ ಭಗವಾನ್ ಸೋನಾವಣೆ, ಪುತ್ತೂರು ಸಹಾಯಕ ಕಮಿಷನರ್​ ಗಿರೀಶ್ ನಂದನ್, ತಹಶೀಲ್ದಾರ್ ಅನಿತಾ ಲಕ್ಷ್ಮಿ, ತಾ. ಪಂ ಕಾರ್ಯನಿರ್ವಾಹಕ ಅಧಿಕಾರಿ ಎನ್. ಭವಾನಿಶಂಕರ ಉಪಸ್ಥಿತರಿದ್ದರು.

ಓದಿ: ಸರಳವಾಸ್ತು ಗುರೂಜಿ ಹಂತಕರು ಮತ್ತೆ 6 ದಿನ ಪೊಲೀಸ್ ಕಸ್ಟಡಿಗೆ

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.