ಮಂಗಳೂರು: ಸ್ವಾತಂತ್ರ್ಯ ಸಂಗ್ರಾಮದ ಮುಂಚೂಣಿ ನಾಯಕ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆಯನ್ನು ಮಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅನಾವರಣಗೊಳಿಸಿದರು.
ಮಂಗಳೂರಿನ ಬಾವುಟಗುಡ್ಡೆಯಲ್ಲಿ ಠಾಗೋರ್ ಪಾರ್ಕ್ ಬಳಿ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆಯನ್ನು ನಿರ್ಮಿಸಲಾಗಿದೆ. ಸ್ವಾತಂತ್ರ್ಯ ಹೋರಾಟದ 'ಅಮರ ಸುಳ್ಯ ಸ್ವಾತಂತ್ರ್ಯ ಸಂಗ್ರಾಮ'ದ ಮುಂಚೂಣಿ ನಾಯಕರಾಗಿದ್ದ ಕೆದಂಬಾಡಿ ರಾಮಯ್ಯಗೌಡರ ನೆನಪಿಗೆ ಈ ಪ್ರತಿಮೆಯನ್ನು ನಿರ್ಮಿಸಲಾಗಿದೆ.
ಬೆಂಗಳೂರಿನಲ್ಲಿ ಅನಾಮಧೇಯ ಸ್ವಾತಂತ್ರ್ಯ ಹೋರಾಟಗಾರರ ಸ್ಮಾರಕ: ಪ್ರತಿಮೆ ಲೋಕಾರ್ಪಣೆ ಬಳಿಕ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೆದಂಬಾಡಿ ರಾಮಯ್ಯ ಗೌಡರು ನಡೆಸಿದ ಸ್ವಾತಂತ್ರ್ಯ ಹೋರಾಟ ಸ್ಪೂರ್ತಿಯಾಗಿದ್ದು, ಬೆಂಗಳೂರಿನಲ್ಲಿ ಅನಾಮಧೇಯ ಸ್ವಾತಂತ್ರ್ಯ ಹೋರಾಟಗಾರರ ಸ್ಮಾರಕ ಮಾಡಲು ಊಹಿಸಿದ್ದೇನೆ. ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ ಸತ್ಯಕ್ಕೆ ನ್ಯಾಯ ಒದಗಿಸಬೇಕಾಗಿದೆ ಎಂದರು.
ಇದನ್ನೂ ಓದಿ: ಪ್ರಥಮ ಸ್ವಾತಂತ್ರ್ಯ ಸಂಗ್ರಾಮಕ್ಕೂ ಮೊದಲು ನಡೆದ ಅಮರ ಸುಳ್ಯ ದಂಗೆಯ ಕಥೆ ಹೇಳುವ ಸರ್ಕಾರಿ ಶಾಲೆ