ಬಂಟ್ವಾಳ(ದಕ್ಷಿಣ ಕನ್ನಡ): ಸದ್ಯ ಪಕ್ಷದ ವರಿಷ್ಠರೊಂದಿಗೆ ಮುನಿಸಿಕೊಂಡಿದ್ದಾರೆ ಎಂದು ಹೇಳಲಾದ ಸಿ.ಎಂ.ಇಬ್ರಾಹಿಂ ಕಾಂಗ್ರೆಸ್ ತ್ಯಜಿಸುತ್ತಾರೆ ಎಂಬ ಮಾತು ಕೇಳಿ ಬರುತ್ತಿವೆ. ಈ ನಡುವೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಉಪ ನಾಯಕ ಯು.ಟಿ.ಖಾದರ್, ಇಬ್ರಾಹಿಂ ಅವರು ಪಕ್ಷದಲ್ಲಿ ಉಳಿಯುತ್ತಾರೆ. ಪಕ್ಷ ಬಲಪಡಿಸಲು ಹಾಗೂ ಬಿಜೆಪಿ ಕಿತ್ತೊಗೆಯಲು ಸಹಕಾರ ನೀಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ
ಇಂದು ಬಂಟ್ವಾಳದಲ್ಲಿ ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಅವರ ಮನೆಗೆ ಭೇಟಿ ನೀಡಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಯು.ಟಿ.ಖಾದರ್, ಸಿ.ಎಂ.ಇಬ್ರಾಹಿಂ ಅವರು ಪಕ್ಷದ ಹಿರಿಯ ನಾಯಕರಾಗಿದ್ದಾರೆ. ಅವರು ಪಕ್ಷದಲ್ಲೇ ಇರುತ್ತಾರೆ ಎಂಬ ವಿಶ್ವಾಸ ನನಗಿದೆ ಎಂದರು.
ಇಬ್ರಾಹಿಂ ಕಾಂಗ್ರೆಸ್ ಪಕ್ಷಕ್ಕೆ ಬಹಳಷ್ಟು ಸಹಕಾರ ನೀಡಿದ್ದಾರೆ. ಪಕ್ಷಕ್ಕೆ ಅವರ ಸೇವೆ ಅಗತ್ಯವಾಗಿದೆ. ನಮ್ಮೆಲ್ಲರ ಉದ್ದೇಶವೇನೆಂದರೆ, ಸಮಾಜಕ್ಕೆ ಮಾರಕವಾದ ಬಿಜೆಪಿ ಸರ್ಕಾರವನ್ನು ಕಿತ್ತೆಗೆಯುವುದು ಒಂದಂಶದ ಯೋಜನೆ ಎಂದರು.
ಇದನ್ನೂ ಓದಿ: ಸಿಎಂ ಇಬ್ರಾಹಿಂ ನಿವಾಸಕ್ಕೆ ಹೆಚ್ ಡಿ ಕುಮಾರಸ್ವಾಮಿ ಭೇಟಿ.. ಕುತೂಹಲ ಮೂಡಿಸಿದ ನಾಯಕರ ಚರ್ಚೆ