ETV Bharat / state

ಕೊರೊನಾ ಭೀತಿ: ದ.ಕ ಜಿಲ್ಲೆಯಲ್ಲಿ ಲಾಕ್‌ಡೌನ್ ಜಾರಿ ಮಾಡುವಂತೆ ಒತ್ತಾಯ - Dakshina Kannada lockdown news

ಸಿಎಂ ಯಡಿಯೂರಪ್ಪ ಜೊತೆ ದಕ್ಷಿಣ ಕನ್ನಡ ಜಿಲ್ಲೆಯ ಕೊರೊನಾ ಸ್ಥಿತಿಗತಿ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್​ ಚರ್ಚೆ ನಡೆಸಿದರು.

Video conference
Video conference
author img

By

Published : Jul 13, 2020, 2:00 PM IST

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಕೇಸ್​​ಗಳು ಹೆಚ್ಚುತ್ತಿರುವ ಹಿನ್ನೆಲೆ ಒಂದು ವಾರ ಕಾಲ ಲಾಕ್‌ಡೌನ್ ಮಾಡುವಂತೆ ಸಿಎಂಗೆ ವಿಡಿಯೋ ಕಾನ್ಫರೆನ್ಸ್​​ನಲ್ಲಿ ಮನವಿ ಮಾಡಲಾಯಿತು.

ಯಡಿಯೂರಪ್ಪನವರ ಜೊತೆ ಜಿಲ್ಲೆಯ ಕೊರೊನಾ ಸ್ಥಿತಿಗತಿ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್​ ಚರ್ಚೆ ನಡೆಸಿದರು. ಒಂದು ವಾರ ಲಾಕ್‌ಡೌನ್ ಮಾಡುವಂತೆ ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ, ಈ ಕುರಿತು ಸಮಸ್ಯೆಗಳನ್ನು ಆಲಿಸಿ ಜಿಲ್ಲಾಡಳಿತವೇ ಸೂಕ್ತ ನಿರ್ಧಾರ ತೆಗೆದುಕೊಳ್ಳಲು ಸೂಚಿಸಿದ್ದಾರೆ‌. ವಿಡಿಯೋ ಕಾನ್ಫರೆನ್ಸ್ ಬಳಿಕ ಜಿಲ್ಲಾಧಿಕಾರಿ ಸಭೆ ನಡೆಸಲಿದ್ದು, ಅಧಿಕಾರಿಗಳು, ಜನಪ್ರತಿನಿಧಿಗಳ ಜೊತೆ ಚರ್ಚೆ ನಡೆಸಿ ಜಿಲ್ಲೆಯಲ್ಲಿ ಲಾಕ್​​ಡೌನ್ ಜಾರಿ ಮಾಡುವ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದಾರೆ.

ವಿಡಿಯೋ ಕಾನ್ಫರೆನ್ಸ್​​​ನಲ್ಲಿ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್, ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಸೇರಿದಂತೆ ಅಧಿಕಾರಿಗಳು ಭಾಗಿಯಾಗಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.