ಕಡಬ (ದಕ್ಷಿಣ ಕನ್ನಡ) : ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಏಪ್ರಿಲ್ 8 ಮತ್ತು 9ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಏಪ್ರಿಲ್ 8ರಂದು ಸಂಜೆ 4:15ಕ್ಕೆ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ತಲುಪುವ ಮುಖ್ಯಮಂತ್ರಿಗಳು ಮಂಗಳೂರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಂಜೆ 6:30ಕ್ಕೆ ಪ್ರಧಾನಿ ನೇತೃತ್ವದಲ್ಲಿ ಕೋವಿಡ್ ಸಂಬಂಧ ವಿಡಿಯೋ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಬಳಿಕ ರಾತ್ರಿ 9:15ಕ್ಕೆ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಮೂಲಮನೆ ಬೆಳ್ಳಾರೆ ಸಮೀಪದ ಕುಂಜಾಡಿಯಲ್ಲಿ ಧರ್ಮನೇಮೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ಮಂಗಳೂರಿಗೆ ತೆರಳುವ ಮುಖ್ಯಮಂತ್ರಿಗಳು ಅಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಏಪ್ರಿಲ್ 9ರಂದು ಬೆಳಗ್ಗೆ 8:25ರ ವೇಳೆಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ. ಈ ಮೊದಲು ಮುಖ್ಯಮಂತ್ರಿಗಳ ನಿಗದಿಯಾದ ಬಂಟ್ವಾಳ, ಪುತ್ತೂರು, ಕಡಬದ ರಾಮಕುಂಜದಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಮುಖ್ಯಮಂತ್ರಿಗಳು ಭಾಗವಹಿಸುವುದಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.