ಬಂಟ್ವಾಳ: ಕಾರಣೀಕ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಲಾಕ್‌ಡೌನ್ ಬಳಿಕ ಸ್ಥಗಿತಗೊಂಡಿದ್ದ ಕೋಲ ಸೇವೆಗಳು ಇಂದಿನಿಂದ ಪುನರಾರಂಭಗೊಂಡಿದೆ.
ಕೊರೊನಾ ಹಿನ್ನೆಲೆಯಲ್ಲಿ ಸರ್ಕಾರ ಧಾರ್ಮಿಕ ಕ್ಷೇತ್ರಗಳಲ್ಲಿ ಎಲ್ಲಾ ಸೇವೆಗಳನ್ನು ಸ್ಥಗಿತಗೊಳಿಸಿ ಆದೇಶ ಹೊರಡಿಸಿತ್ತು. ಹೀಗಾಗಿ ಪಣೋಲಿಬೈಲಿನಲ್ಲೂ ಎಲ್ಲಾ ಸೇವೆಗಳನ್ನು ರದ್ದುಪಡಿಸಲಾಗಿತ್ತು. ಆದರೆ ಇಂದಿನಿಂದ ಸರ್ಕಾರದ ಮಾರ್ಗಸೂಚಿಯಂತೆ ಕೋಲ ಸೇವೆ ಆರಂಭಗೊಂಡಿದೆ. ಆದರೆ ವಾರದಲ್ಲಿ ಮೂರು ದಿನ ನಡೆಯುತ್ತಿದ್ದ ಅಗೇಲು ಸೇವೆ ಇನ್ನೂ ಆರಂಭಗೊಂಡಿರುವುದಿಲ್ಲ ಎಂದು ಕ್ಷೇತ್ರದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.