ETV Bharat / state

ಹಕ್ಕುಪತ್ರ ವಿತರಣೆಯಲ್ಲಿರುವ ತೊಡಕು ನಿವಾರಣೆಗೆ ಜಂಟಿ ಸರ್ವೇ: ತಹಶೀಲ್ದಾರ್​ ಅಭಯ

ತಹಶೀಲ್ದಾರ್ ರಶ್ಮಿ ಎಸ್.ಆರ್ ಅವರು ತಾಲೂಕು ಪಂಚಾಯಿತಿ ಸದಸ್ಯರ ಜೊತೆ ಸಾಮಾನ್ಯ ಸಭೆ ನಡೆಸಿದರು. ಈ ವೇಳೆ ವಿವಿಧ ಇಲಾಖಾ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದರು.

Taluk panchayath meeting
Taluk panchayath meeting
author img

By

Published : Sep 23, 2020, 5:36 PM IST

ಬಂಟ್ವಾಳ : 94ಸಿ ಜಾಗದ ಹಕ್ಕುಪತ್ರ ವಿತರಣೆಯಲ್ಲಿರುವ ತೊಡಕು ನಿವಾರಿಸಲು ಅರಣ್ಯ, ಕಂದಾಯ ಇಲಾಖೆ ಜಂಟಿ ಸರ್ವೇ ನಡೆಸುವುದಾಗಿ ತಹಶೀಲ್ದಾರ್ ರಶ್ಮಿ ಎಸ್.ಆರ್. ಹೇಳಿದರು.

ಇಂದು ಅಧ್ಯಕ್ಷ ಚಂದ್ರಹಾಸ ಕರ್ಕೇರ ಅಧ್ಯಕ್ಷತೆಯಲ್ಲಿ ತಾಲೂಕು ಪಂಚಾಯಿತಿ ಸಾಮಾನ್ಯ ಸಭೆ ನಡೆಯಿತು. ಈ ವೇಳೆ, ಅರಣ್ಯ ಮತ್ತು ಕಂದಾಯ ಇಲಾಖೆಯ ಜಂಟಿ ಸರ್ವೇ ಮೂಲಕ 94ಸಿ ಜಾಗ ಒದಗಿಸುವ ಕುರಿತು ಇರುವ ತೊಡಕು ನಿವಾರಿಸಬೇಕು. ಕೊರೊನಾ ಸೋಂಕಿನಿಂದ ಸೀಲ್​​ಡೌನ್ ಆಗುವ ಮನೆಗಳಿಗೆ ಗ್ರಾಪಂನಿಂದಲೇ ರೇಷನ್ ಒದಗಿಸಬೇಕು. ನನೆಗುದಿಗೆ ಬಿದ್ದ ಕಾರ್ಯಗಳ ವಿಲೇವಾರಿಗೆ ಅಧಿಕಾರಿಗಳು ಚುರುಕಾಗಿ ಕಾರ್ಯ ಪ್ರವೃತ್ತರಾಗಬೇಕು ಎಂದು ಈ ಚುನಾಯಿತ ಜನಪ್ರತಿನಿಧಿಗಳು ಒತ್ತಾಯಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ತಹಶೀಲ್ದಾರ್ ಅವರು, ಕಂದಾಯ ಇಲಾಖೆ ಮಂಜೂರು ಮಾಡುವಾಗ ನಿರ್ದಿಷ್ಟ ಮಾನದಂಡಗಳನ್ನು ನೋಡಲಾಗುತ್ತದೆ. 94ಸಿ ಹಕ್ಕುಪತ್ರ ಮಂಜೂರು ಮಾಡುವ ವೇಳೆ ಡೀಮ್ಡ್ ಫಾರೆಸ್ಟ್ ನಂತಹ ತೊಡಕುಗಳಿದ್ದರೆ ಕಂದಾಯ ಮತ್ತು ಅರಣ್ಯ ಇಲಾಖೆಯ ಜಂಟಿ ಸರ್ವೆ ಮಾಡಲಾಗುವುದು ಎಂದು ತಿಳಿಸಿದರು.

ಕೊರೊನಾ ಕುರಿತು ಮಾಹಿತಿ :

ಇದೇ ವೇಳೆ ತಾಲೂಕಿನಲ್ಲಿರುವ ಕೊರೊನಾ ಪ್ರಕರಣಗಳ ಕುರಿತು ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಾ ಪ್ರಭು ಅವರು ಮಾಹಿತಿ ನೀಡಿದರು.

ತಾಲೂಕಿನಲ್ಲಿ 2,708 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. 66 ಮಂದಿ ಸಾವನ್ನಪ್ಪಿದ್ದಾರೆ. ಇನ್ನು 788 ಸಕ್ರಿಯ ಪ್ರಕರಣಗಳಿವೆ. ಇವರ ಪೈಕಿ 698 ಮಂದಿ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ. ಉಳಿದವರು ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದರು‌.

ಸಭೆಯಲ್ಲಿ ಜಿಪಂ ಸದಸ್ಯ ರವೀಂದ್ರ ಕಂಬಳಿ, ಕಮಲಾಕ್ಷಿ ಪೂಜಾರಿ, ತುಂಗಪ್ಪ ಬಂಗೇರ, ತಾಪಂ ಸದಸ್ಯರಾದ ಎ.ಆರ್.ಹೈದರ್ ಕೈರಂಗಳ, ಸಂಜೀವ ಪೂಜಾರಿ, ಉಸ್ಮಾನ್ ಕರೋಪಾಡಿ, ಪ್ರಭಾಕರ ಪ್ರಭು, ರಮೇಶ್ ಕುಡ್ಮೇರು, ಯಶವಂತ ಪೊಳಲಿ, ಆದಂ ಕುಂಞ, ನಾರಾಯಣ ಶೆಟ್ಟಿ, ಕವಿತಾ ನಾಯ್ಕ, ಮಹಾಬಲ ಆಳ್ವ, ಗೀತಾ ಚಂದ್ರಶೇಖರ್, ಪದ್ಮಾವತಿ ಬಿ ಮಾತನಾಡಿದರು. ತಾಪಂ ಉಪಾಧ್ಯಕ್ಷ ಬಿ.ಎಂ.ಅಬ್ಬಾಸ್ ಅಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಮಲ್ಲಿಕಾ ಶೆಟ್ಟಿ, ಕಾರ್ಯನಿರ್ವಹಣಾ ಅಧಿಕಾರಿ ರಾಜಣ್ಣ‌ ಮೊದಲಾದವರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.