ETV Bharat / state

ಲೈಂಗಿಕ ಕಿರುಕುಳ ಆರೋಪ: ಪುತ್ತೂರಲ್ಲಿ ವಕೀಲನ ವಿರುದ್ಧ ಕೇಸ್​ - manglure Sexual harassment case

ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆ ವಕೀಲ ಉಮ್ಮರ್ ಕೆ. ವಿರುದ್ಧ ಪುತ್ತೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Complaint against lawyer for Sexual harassment
ಲೈಂಗಿಕ ಕಿರುಕುಳ ಆರೋಪ
author img

By

Published : Aug 22, 2021, 12:46 PM IST

ಮಂಗಳೂರು: ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆ ವಕೀಲನೋರ್ವನ ವಿರುದ್ಧ ನಗರದಲ್ಲಿ ಪ್ರಕರಣ ದಾಖಲಾಗಿದೆ.

ವಿಟ್ಲದ ವಿ.ಹೆಚ್. ಕಾಂಪ್ಲೆಕ್ಸ್​ನಲ್ಲಿರುವ ವಕೀಲ ಉಮ್ಮರ್ ಕೆ. ವಿರುದ್ಧ ಲೈಂಗಿಕ ಕಿರುಕುಳ ಆರೋಪದಡಿ ದೂರು ದಾಖಲಾಗಿದೆ. ಕಳೆದ 9 ತಿಂಗಳಿಂದ ಸಂತ್ರಸ್ತ ಯುವತಿ ಉಮ್ಮರ್ ಕೆ. ಕಚೇರಿಯಲ್ಲಿ ಟೈಪಿಸ್ಟ್ ಆಗಿ ಕೆಲಸ ಮಾಡುತ್ತಿದ್ದರು. ಆ.16 ರಂದು ಸಂಜೆ ಕಚೇರಿಯಲ್ಲಿ ಯಾರು ಇಲ್ಲದ ವೇಳೆ ಸಂತ್ರಸ್ತೆಗೆ ಕಿರುಕುಳ ನೀಡಿದ್ದಾರೆ. ಜೊತೆಗೆ ಈ ವಿಚಾರವನ್ನು ಮನೆಯಲ್ಲಿ ಹೇಳಬೇಡ, ಹೇಳಿದ್ರೆ ನಿನ್ನ ಮರ್ಯಾದೆ ಹೋಗುತ್ತದೆ ಎಂದು ಹೆದರಿಸಿದ್ದಾರೆ ಅಂತಾ ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಈ ಬಗ್ಗೆ ಪುತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.