ಬಂಟ್ವಾಳ: ವಿಟ್ಲದಲ್ಲಿ ನಡೆದ ಹಿಂದೂ ಸಮಾವೇಶದಲ್ಲಿ ಅನ್ಯ ಧರ್ಮದ ವಿರುದ್ಧ ಅವಹೇಳನಕಾರಿಯಾಗಿ ನಿಂದಿಸಿದ್ದಾರೆ ಎಂದು ಆರೋಪಿಸಿ ಹಿಂದೂ ಜಾಗರಣ ವೇದಿಕೆ ಮುಖಂಡ ರಾಧಾಕೃಷ್ಣ ಅಡ್ಯಂತಾಯ ವಿರುದ್ಧ ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ವಿಟ್ಲದ ಸುನ್ನೀ ಕೋ ಆರ್ಡಿನೇಷನ್ ಸಮಿತಿ ವತಿಯಿಂದ ವಿಟ್ಲ ಎಸ್ ಐ ಮಂಜುನಾಥ ಅವರಿಗೆ ದೂರು ಸಲ್ಲಿಸಿದೆ. ಸೋಮವಾರ ವಿಟ್ಲದಲ್ಲಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ಮತ್ತು ಹಿಂದೂ ಜಾಗರಣ ವೇದಿಕೆ ವತಿಯಿಂದ ಆಯೋಜಿಸಲಾದ ಹಿಂದೂ ಜನಜಾಗೃತಿ ಸಮಾವೇಶದಲ್ಲಿ ರಾಧಾಕೃಷ್ಣ ಅಡ್ಯಂತಾಯ ಅನ್ಯ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ, ಧರ್ಮವನ್ನು ನಿಂದಿಸಿದ್ದರು ಎನ್ನಲಾಗ್ತಿದೆ.
ಅಡ್ಯಂತಾಯ ವಿರುದ್ಧ ಪೊಲೀಸ್ ಇಲಾಖೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸುವಂತೆ ಒತ್ತಾಯಿಸಲಾಗಿದೆ.