ETV Bharat / state

ದ್ವೇಷ ಭಾಷಣ ಆರೋಪ: ಚೈತ್ರಾ ಕುಂದಾಪುರ ವಿರುದ್ಧ ಪ್ರಕರಣ ದಾಖಲು - chaitra kundapura

ಹಿಂದೂ ಸಂಘಟನೆಯ ಕಾರ್ಯಕರ್ತೆ ಚೈತ್ರಾ ಕುಂದಾಪುರ ವಿರುದ್ಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

complaint-filed-against-chaitra-kundapura
ದ್ವೇಷಪೂರಿತ ಭಾಷಣ ಆರೋಪ: ಚೈತ್ರಾ ಕುಂದಾಪುರ ವಿರುದ್ಧ ಪ್ರಕರಣ ದಾಖಲು
author img

By

Published : Oct 8, 2021, 11:21 AM IST

ಮಂಗಳೂರು: ದ್ವೇಷಪೂರಿತ ಭಾಷಣ ಮಾಡಿದ ಆರೋಪದ ಮೇಲೆ ಹಿಂದೂ ಸಂಘಟನೆಯ ಕಾರ್ಯಕರ್ತೆ ಚೈತ್ರಾ ಕುಂದಾಪುರ ವಿರುದ್ದ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಕ್ಟೋಬರ್ 4ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್​ನಲ್ಲಿ ಬಜರಂಗದಳ, ದುರ್ಗಾ ವಾಹಿನಿಯಿಂದ ಆಯೋಜಿಸಲಾಗಿದ್ದ ಬೃಹತ್ ಜನ ಜಾಗೃತಿ ಸಭೆಯಲ್ಲಿ ಚೈತ್ರಾ ಅವರು ದ್ವೇಷಪೂರಿತ ಭಾಷಣ ಮಾಡಿದ್ದಾರೆ. ಈ ಭಾಷಣದ ಬಗ್ಗೆ ಚೈತ್ರಾ ಕುಂದಾಪುರ ಮತ್ತು ಸಂಘಟಕರ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಬೊಂಡಾಲ ಚಿತ್ತರಂಜನ್ ಶೆಟ್ಟಿ ಅವರು ಸುರತ್ಕಲ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಆದರೆ ಈವರೆಗೆ ಪ್ರಕರಣ ದಾಖಲಿಸಲಾಗಿರಲಿಲ್ಲ. ಇದೀಗ ಕಾನೂನು ತಜ್ಞರ ಅಭಿಪ್ರಾಯ ಪಡೆದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ: ದೇಶಾದ್ಯಂತ 21,257 ಹೊಸ ಕೋವಿಡ್‌ ಕೇಸ್​ ಪತ್ತೆ, 318 ಮಂದಿ ಸಾವು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.