ETV Bharat / state

ಹಿಜಾಬ್ ಗಲಾಟೆ ವರದಿ ಮಾಡಲು ತೆರಳಿದ್ದ ಮಾಧ್ಯಮ ಪ್ರತಿನಿಧಿಗಳ ಮೇಲೆ ಪ್ರತಿ ದೂರು ದಾಖಲು - TTACK ON MEDIA PERSONS IN UPPINAGADI

ಹಿಜಾಬ್ ಹಾಗೂ ಕೇಸರಿ ವಿವಾದದ ಬಗ್ಗೆ ವರದಿ ಮಾಡಲು ಹೋದ ಮಾಧ್ಯಮ ಪ್ರತಿನಿಧಿಗಳ ಮೇಲೆ ಕೆಲ ವಿದ್ಯಾರ್ಥಿಗಳು ಹಲ್ಲೆಗೆ ಮುಂದಾಗಿ, ದಿಗ್ಬಂಧನ ವಿಧಿಸಿದ ಘಟನೆ ಉಪ್ಪಿನಂಗಡಿಯಲ್ಲಿ ಗುರುವಾರ ನಡೆದಿದೆ. ಇದಕ್ಕೆ ಸಂಬಂಧಿಸಿದಂತೆ ಪ್ರತಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮಾಧ್ಯಮ ಪ್ರತಿನಿಧಿಗಳ ಮೇಲೆ ಉಲ್ಟಾ ದೂರು ದಾಖಲು

author img

By

Published : Jun 4, 2022, 10:16 AM IST

ಉಪ್ಪಿನಂಗಡಿ: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಜಾಬ್ ಹಾಗೂ ಕೇಸರಿ ವಿವಾದ ಮತ್ತೆ ವಿಕೋಪಕ್ಕೆ ತಿರುಗಿದ್ದು, ಘಟನೆ ವರದಿ ಮಾಡಲು ಹೋದ ಮಾಧ್ಯಮ ಪ್ರತಿನಿಧಿಗಳ ಮೇಲೆ ಕೆಲ ವಿದ್ಯಾರ್ಥಿಗಳು ಹಲ್ಲೆಗೆ ಮುಂದಾಗಿದ್ದರು ಎಂದು ಆರೋಪಿಸಿ ಪತ್ರಕರ್ತರು ದೂರು ದಾಖಲಿಸಿದ್ದರು. ಇದಕ್ಕೆ ವಿರುದ್ಧವಾಗಿ ವಿದ್ಯಾರ್ಥಿಗಳು ಸಹ ಪ್ರತಿ ದೂರು ನೀಡಿದ್ದು, ಉಪ್ಪಿನಂಗಡಿ ಪೊಲೀಸರು ಮೂವರು ಪತ್ರಕರ್ತರ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸಿದ್ದಾರೆ.

ಗುರುವಾರ ಬೆಳಗ್ಗೆ ಹಿಜಾಬ್ ವಿಚಾರವಾಗಿ ಉಪ್ಪಿನಂಗಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು​ ಕ್ಯಾಂಪಸ್​ನಲ್ಲಿ ಪ್ರತಿಭಟನೆ ನಡೆಯುತ್ತಿತ್ತು. ಈ ಹಿನ್ನೆಲೆ ಕಾಲೇಜಿನ ಪ್ರಾಂಶುಪಾಲರಿಂದ ಮಾಹಿತಿ ಪಡೆಯುವ ಸಲುವಾಗಿ ಪತ್ರಕರ್ತರು ಸ್ಥಳಕ್ಕೆ ತೆರಳಿ ನಂತರ ಅವರ ಬೈಟ್ ಪಡೆದು ಹಿಂದಿರುಗುತ್ತಿದ್ದಾಗ ಇಬ್ಬರು ಕನ್ನಡ ದೃಶ್ಯ ಮಾಧ್ಯಮ ವರದಿಗಾರರನ್ನು ಕೆಲವು ವಿದ್ಯಾರ್ಥಿಗಳು ತಡೆದು, ಹಲ್ಲೆ ಮಾಡಿ ಅವರಿಗೆ ದಿಗ್ಬಂಧನ ವಿಧಿಸಿ, ಕ್ಯಾಮರಾ ಕಿತ್ತು ಅದರಲ್ಲಿದ್ದ ವಿಡಿಯೋ ಹಾಗೂ ಫೋಟೋಗಳನ್ನು ಡಿಲಿಟ್ ಮಾಡಿದ್ದರು.

25 ವಿದ್ಯಾರ್ಥಿಗಳ ಗುಂಪೊಂದು ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿರುವ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಮಾಧ್ಯಮ ಪ್ರತಿನಿಧಿಗಳು ಪ್ರಕರಣ ದಾಖಲಿಸಿದ್ದರು. ಆದರೆ, ಪತ್ರಕರ್ತರು ದೂರು ನೀಡಿದ ಸಂದರ್ಭದಲ್ಲಿ ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಲು ಮೀನಮೇಷ ಎಣಿಸಿದ್ದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಧ್ಯಪ್ರವೇಶದ ಬಳಿಕ ಈ ಬಗ್ಗೆ ದೂರು ದಾಖಲಾಗಿತ್ತು.

ಘಟನೆ ನಡೆದು ಬರೋಬ್ಬರಿ 30 ಗಂಟೆಗಳ ಬಳಿಕ ದ್ವಿತೀಯ ಪದವಿ ವಿದ್ಯಾರ್ಥಿನಿ ಈ ಕುರಿತು ಪ್ರತಿ ದೂರು ನೀಡಿದ್ದು, ಪೊಲೀಸರು ಮಾಧ್ಯಮ ಪ್ರತಿನಿಧಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಘಟನೆಯ ವರದಿಗೆ ತೆರಳಿದ ಇಬ್ಬರು ದೃಶ್ಯ ಮಾಧ್ಯಮ ವರದಿಗಾರರು ಹಾಗೂ ಅವರ ನೆರವಿಗೆ ಧಾವಿಸಿದ ಇನ್ನೋರ್ವ ಪತ್ರಿಕಾ ವರದಿಗಾರನ ವಿರುದ್ಧ ಐಪಿಸಿ ಕಲಂ 447,354,504, 506 ಜೊತೆ 34 ರಂತೆ ಪ್ರಕರಣ ದಾಖಲಾಗಿದೆ.

ಪೊಲೀಸರ ವಿರುದ್ಧ ಆಕ್ರೋಶ: ವರದಿಗಾರರ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸಿಕೊಂಡ ಹಿನ್ನೆಲೆ ಜಿಲ್ಲಾ ಪತ್ರಕರ್ತರು ಪೊಲೀಸ್ ಇಲಾಖೆ ವಿರುದ್ಧ ಸಿಡಿಮಿಡಿಗೊಂಡಿದ್ದಾರೆ. ಪೊಲೀಸರು ವಿದ್ಯಾರ್ಥಿನಿಯ ದೂರಿನ‌ ಬಗ್ಗೆ ಕೂಲಂಕಷವಾಗಿ ತನಿಖೆ ನಡೆಸದೇ ಯಾರಾದ್ದೋ ಒತ್ತಡಕ್ಕೆ ಮಣಿದು ಪ್ರಕರಣ ದಾಖಲಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಹಿಜಾಬ್ ಗಲಾಟೆ: ವರದಿಗೆ ತೆರಳಿದ್ದ ಮಾಧ್ಯಮದವರ ಮೇಲೆ ಹಲ್ಲೆ ಯತ್ನ, ರಕ್ಷಣೆಗೆ ಮನವಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.