ಪುತ್ತೂರು : ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿದಂತೆ ಖಾಸಗಿ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕರೊಬ್ಬರು ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದರು. ಇದೀಗ ಪುತ್ತೂರು ನ್ಯಾಯಾಲಯ ಅವರಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.
ದೈಹಿಕ ಶಿಕ್ಷಣ ನಿರ್ದೇಶಕ ಕೊಂಬೆಟ್ಟು ನಿವಾಸಿ ಎಲ್ಯಾಸ್ ಪಿಂಟೋ ಬಂಧಿತ ಆರೋಪಿ. ವಿದ್ಯಾಸಂಸ್ಥೆಯ ವಸತಿ ನಿಲಯದಲ್ಲಿರುವ ಮಡಿಕೇರಿ ಮೂಲದ ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಅವರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿತ್ತು.
ಆರೋಪಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಆರೋಪಿ ಪರ ಖ್ಯಾತ ವಕೀಲರಾದ ಮಹೇಶ್ ಕಜೆ ವಾದಿಸಿದ್ದರು.
ಓದಿ: ಬಿಟ್‌ಕ್ವಾಯಿನ್ ಮಾಫಿಯಾದಲ್ಲಿ ಬಿಜೆಪಿಯವರ ಪಾತ್ರವಿದೆ.. ಮಾಜಿ ಸಿಎಂ ಸಿದ್ದರಾಮಯ್ಯ ಆರೋಪ