ಸುಳ್ಯ: ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸುಳ್ಯದಲ್ಲಿ ಶನಿವಾರ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯಲ್ಲಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಜಯಪ್ರಕಾಶ್ ರೈ, ಪೌರತ್ವ ತಿದ್ದುಪಡಿ ಮಸೂದೆ ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿಯು ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಯಾಗಿದ್ದು ಇದನ್ನು ತೀವ್ರವಾಗಿ ಖಂಡಿಸುವುದಾಗಿ ಹೇಳಿದರು.
ಕಾಂಗ್ರೆಸ್ ಜಿಲ್ಲಾ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಧನಂಜಯ ಅಡ್ಪಂಗಾಯ ಮಾತನಾಡುತ್ತಾ ಈ ನ್ಯೂ ಇಂಡಿಯಾ ಕಲ್ಪನೆಯಲ್ಲಿ ಯುವಕರಿಗೆ ಉದ್ಯೋಗ ನಷ್ಟ, ಕೂಲಿ ಕಾರ್ಮಿಕರಿಗೆ ಕೆಲಸ ಇಲ್ಲ. ಜಿಡಿಪಿ ಕುಸಿತ, ಆರ್ಥಿಕ ಸ್ಥಿತಿ ಕುಸಿತ ಸೇರಿದಂತೆ ಜನಸಾಮಾನ್ಯರಿಗೆ ಈಗಾಗಲೇ ಬದುಕಲು ಕಷ್ಟವಾಗಿದೆ. ಅದರ ಮಧ್ಯೆ ಇನ್ನೊಂದು ಕಾನೂನು ತಂದು ಜನರನ್ನು ಸಂಕಷ್ಟಕ್ಕೆ ಸಿಲುಕಿಸುವ ಯತ್ನ ನಡೆಯುತ್ತಿದೆ ಎಂದು ಆಕ್ರೋಶ ವ್ಯಕ್ತ ಪಡಿಸಿದರು.
ಪ್ರತಿಭಟನೆಯಲ್ಲಿ ನೂರಾರು ಮಂದಿ ಪಾಲ್ಗೊಂಡಿದ್ದು ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗುವ ಮೂಲಕ ಆಕ್ರೋಶ ವ್ಯಕ್ತ ಪಡಿಸಿದರು.