ಮಂಗಳೂರು; ಕೊರೊನಾ ಸಂದರ್ಭದಲ್ಲಿ ಕೊರೊನಾ ಸೋಂಕಿತರ ಪರವಾಗಿ ಕಾರ್ಯನಿರ್ವಹಿಸುತ್ತಿದ್ದ ಕಾಂಗ್ರೆಸ್ ಮುಖಂಡ ಸುಹೈಲ್ ಕಂದಕ್ ಅವರನ್ನು ಆಸ್ಪತ್ರೆ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪದ ಮೇಲೆ ಮಂಗಳೂರು ಕಂಕನಾಡಿ ಪೊಲೀಸರು ಬಂಧಿಸಿದ್ದಾರೆ.
ಮಂಗಳೂರಿನ ಇಂಡಿಯಾನ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರಿಗೆ ವಿಪರೀತ ದರ ವಿಧಿಸಿದ ಬಗ್ಗೆ ಕಾಂಗ್ರೆಸ್ ಮುಖಂಡ ಸುಹೈಲ್ ಕಂದಕ್ ಇತ್ತೀಚೆಗೆ ಆಸ್ಪತ್ರೆ ಮುಂಭಾಗ ಧರಣಿ ನಡೆಸಿದ್ದರು. ಕೊರೊನಾ ಸೋಂಕಿತರ ಅಂತ್ಯಕ್ರಿಯೆ ಸೇರಿದಂತೆ ಸುಹೈಲ್ ಕಂದಕ್ ಅವರ ನೇತೃತ್ವದಲ್ಲಿ ಸಾಮಾಜಿಕ ಕಾರ್ಯಗಳು ನಡೆಯುತ್ತಿದ್ದವು. ಆದರೆ, ಸುಹೈಲ್ ಕಂದಕ್ , ಇಂಡಿಯಾನ ಆಸ್ಪತ್ರೆಯ ಐಸಿಯುಗೆ ನುಗ್ಗಿ ಮಹಿಳಾ ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿಪಡಿಸಿ, ಕರ್ತವ್ಯದಲ್ಲಿದ್ದ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ದೂರು ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಮಂಗಳೂರಿನ ಕಂಕನಾಡಿ ಪೊಲೀಸರು ಅವರನ್ನು ಬಂಧಿಸಿದ್ದಾರೆ.
ಸುಹೈಲ್ ಕಂದಕ್ ಬಂಧನ ವಿಚಾರ ತಿಳಿಯುತ್ತಿದ್ದಂತೆ ಕಾಂಗ್ರೆಸ್ ನಾಯಕರು, ಮುಖಂಡರು, ಕಂಕನಾಡಿ ನಗರ ಠಾಣೆ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.