ETV Bharat / state

ರಾಜಕೀಯದಲ್ಲಿ ಸಕ್ರಿಯನಾಗಿರುತ್ತೇನೆ.. ನಿವೃತ್ತಿಯಾಗಲ್ಲ: ರಮಾನಾಥ ರೈ ಸ್ಪಷ್ಟನೆ

ಮಂಗಳೂರಿನಲ್ಲಿ ನಾನು ರಾಜಕೀಯ ನಿವೃತ್ತಿ ಆಗುತ್ತೇನೆ ಎಂದು ಹೇಳಿಲ್ಲ. ಕಾಂಗ್ರೆಸ್ ಹೈಕಮಾಂಡ್ ಏನನ್ನು ಸೂಚಿಸುತ್ತದೆಯೋ ಅದನ್ನೇ ಮಾಡುತ್ತೇನೆ. ಪಕ್ಷ ನೀಡುವ ಜವಾಬ್ದಾರಿಗಳನ್ನು ಸ್ವೀಕರಿಸುತ್ತೇನೆ, ನನಗೆ ವಯಸ್ಸಾಗಿಲ್ಲ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದ್ದಾರೆ.

Former minister Ramanatha Rai spoke at the press conference.
ಮಾಜಿ ಸಚಿವ ರಮಾನಾಥ ರೈ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
author img

By

Published : May 19, 2023, 6:13 PM IST

ಬಂಟ್ವಾಳ: ಕಾಂಗ್ರೆಸ್ ಪಕ್ಷ ನೀಡುವ ಜವಾಬ್ದಾರಿಗೆ ಬದ್ಧ, ಸಕ್ರಿಯ ರಾಜಕಾರಣದಲ್ಲಿರುತ್ತೇನೆ, ಲೋಕಸಭಾ ಚುನಾವಣೆಗೆ ಈಗಿಂದಲೇ ತಯಾರಿ ಆರಂಭಿಸಲಾಗುವುದು ಎಂದು ಬಂಟ್ವಾಳದಲ್ಲಿ ಮಾಜಿ ಸಚಿವ ರಮಾನಾಥ ರೈ ಹೇಳಿದ್ದಾರೆ.

ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2024ರ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಪಕ್ಷವನ್ನು ಸಂಘಟನಾತ್ಮಕ ಮಟ್ಟದಲ್ಲಿ ಬೆಳೆಸುವ ಕಾರ್ಯವನ್ನು ಮಾಡುತ್ತೇನೆ. ಪಕ್ಷದ ವರಿಷ್ಠರು ನೀಡುವ ಸೂಚನೆ ಪಾಲಿಸುತ್ತೇನೆ.

ಪಕ್ಷದ ಹಿತದೃಷ್ಟಿಯಿಂದ ಮತ್ತು ಪಕ್ಷಕ್ಕೆ ನನ್ನಿಂದ ಸಹಾಯ ಆಗುತ್ತದೆ ಎನ್ನುವುದಾದರೆ, ನಾನು ಪಕ್ಷಕ್ಕೆ ಶಕ್ತಿ ತುಂಬುವ ಕೆಲಸ ಮಾಡುತ್ತೇನೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ನಿರೀಕ್ಷಿತ ಸ್ಥಾನ ಪಡೆಯಲು ಸಾಧ್ಯವಾಗಿಲ್ಲ. ಪ್ರತಿಕೂಲ ಪರಿಸ್ಥಿತಿಯಲ್ಲಿ ಗೆದ್ದ ಅಭ್ಯರ್ಥಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಅಭಿಪ್ರಾಯ ತಿಳಿಸಿದರು.

ತನಗೆ ವಯಸ್ಸಾಯಿತು ಎಂದು ಕೆಲವರು ಅಪಪ್ರಚಾರ ಮಾಡಿದರು. ನಾನು ಗೆದ್ದರೆ, ಅಕ್ರಮ ಮರಳುಗಾರಿಕೆಗೆ ಕಡಿವಾಣ ಹಾಕುತ್ತೇನೆ ಎಂಬ ಭೀತಿಯಿಂದ ದೊಡ್ಡ ಪ್ರಮಾಣದಲ್ಲಿ ಅಕ್ರಮ ಮರಳು ದಂಧೆಕೋರರು ನನ್ನ ಸೋಲಿಗೆ ಶ್ರಮಿಸಿದ್ದಾರೆ ಎಂದ ಅವರು, ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಸೋಲಿನ ಪರಾಮರ್ಶೆಯನ್ನು ಮಾಡುತ್ತೇನೆ. ಅವರೊಂದಿಗೆ ನನ್ನ ಮನದಾಳದ ಮಾತನ್ನು ಬಿಚ್ಚಿಡುತ್ತೇನೆ ಎಂದು ಸ್ಪಷ್ಟಪಡಿಸಿದರು.

ನನಗೆ ಪೂರ್ವಜರಿಂದ ಬಂದ ಬಳುವಳಿಯಿಂದ ಸಣ್ಣ ಮಟ್ಟಿನ ಕೃಷಿ ಮಾಡುತ್ತಿದ್ದೇನೆ. ನಾನು ಎಲ್ಲಿಂದಲೋ ಬಂದು ಚುನಾವಣೆಗೆ ನಿಂತಿಲ್ಲ . ಈಗ ನಮ್ಮದೇ ಸರಕಾರ ಇದ್ದು, ಬಂಟ್ವಾಳ ಕ್ಷೇತ್ರದಲ್ಲಿ ಅರ್ಧಕ್ಕೆ ನಿಂತಿರುವ ಕಾಮಗಾರಿಗಳನ್ನು ಪೂರ್ತಿ ಮಾಡಲು ಪ್ರಯತ್ನ ಮಾಡುತ್ತೇನೆ ಎಂದು ವಿವರಿಸಿದರು.

ಮಂಗಳೂರಿನಲ್ಲಿ ನಾನು ರಾಜಕೀಯ ನಿವೃತ್ತಿ ಆಗುತ್ತೇನೆ ಎಂದು ಹೇಳಿಲ್ಲ. ಹೈಕಮಾಂಡ್ ಏನನ್ನು ಸೂಚಿಸುತ್ತದೆಯೋ ಅದನ್ನೇ ಪಾಲಿಸುತ್ತೇನೆ. ನಾನು ವ್ಯಾಪಾರಿಯಲ್ಲ, ಹೊರಗಿನಿಂದ ಕ್ಷೇತ್ರಕ್ಕೆ ಬಂದಿಲ್ಲ. ಮಂಗಳೂರಲ್ಲೂ ಮನೆ ಮಾಡಿಲ್ಲ. ಪಕ್ಷದ ಹೈಕಮಾಂಡ್ ಏನನ್ನು ಸೂಚಿಸುತ್ತದೆಯೋ ಅದನ್ನೇ ಮಾಡುತ್ತೇನೆ. ಪಕ್ಷ ನೀಡುವ ಜವಾಬ್ದಾರಿಗಳನ್ನು ಸ್ವೀಕರಿಸುತ್ತೇನೆ, ನನಗೆ ವಯಸ್ಸಾಗಿಲ್ಲ ಎಂದು ಹೇಳಿದರು.

ನಮ್ಮ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ,ಹಾಗೂ ಡಿ ಸಿ ಎಂ ಆಗಿ ಡಿ ಕೆ ಶಿವಕುಮಾರ್ ಅವರು ಆಯ್ಕೆಯಾಗಿದ್ದು ಅವರಿಗೆ ಬಂಟ್ವಾಳ ಕ್ಷೇತ್ರದ ಸಮಸ್ತ ಜನರ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದರು.

ಕಮೀಷನ್ ವ್ಯವಹಾರ ದಂಧೆ ಮಾಡಿಲ್ಲ: ಕಮೀಷನ್ ವ್ಯವಹಾರದಲ್ಲಿ ನಾನು ತೊಡಗಿಲ್ಲ. ಇಷ್ಟು ವರ್ಷದ ರಾಜಕಾರಣದಲ್ಲಿ ಶುದ್ಧ ಹಸ್ತದ ರಾಜಕೀಯ ಮಾಡಿದ್ದೇನೆ. ಕ್ಷೇತ್ರದ ಜನತೆ ಗೌರವ ತರುವ ಕೆಲಸ ಮಾಡಿದ್ದೇನೆ ಎಂದು ಅವರು ತಿಳಿಸಿದರು.

ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಎಂ.ಎಸ್ ಮಹಮ್ಮದ್, ಪದ್ಮಶೇಖರ್ ಜೈನ್, ಸುದರ್ಶನ ಜೈನ್ ಪಂಜಿಕಲ್ಲು, ಮಾಯಿಲಪ್ಪ ಸಾಲ್ಯಾನ್ ಉಪಸ್ಥಿತರಿದ್ದರು.

ಇದನ್ನೂಓದಿ:ಬಿ.ಕೆ.ಹರಿಪ್ರಸಾದ್​ಗೆ ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಕೊಡಿ: ಕಾಂಗ್ರೆಸ್ ಹೈಕಮಾಂಡ್​ಗೆ ಅಭಯಚಂದ್ರ ಜೈನ್ ಒತ್ತಾಯ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.