ETV Bharat / state

ವಿದ್ಯುತ್ ಬಿಲ್ ಕೇಳಲು ಬಂದ ಸಿಬ್ಬಂದಿ ಮೇಲೆ ಕಾಂಗ್ರೆಸ್ ಮುಖಂಡನಿಂದ ಹಲ್ಲೆ! - ಕಾಂಗ್ರೆಸ್ ಮುಖಂಡನಿಂದ ಗೂಂಡಾ ವರ್ತನೆ

ವಿದ್ಯುತ್ ಬಿಲ್ ಕೇಳಲು ಹೋದ ಇಬ್ಬರು ಮೆಸ್ಕಾಂ ಸಿಬ್ಬಂದಿ ಮೇಲೆ ಕಾಂಗ್ರೆಸ್ ಮುಖಂಡನೋರ್ವ ಹಲ್ಲೆ ನಡೆಸಿದ್ದು, ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

mescom officers beaten by congress party leader,ಕಾಂಗ್ರೆಸ್ ಮುಖಂಡನಿಂದ ಹಲ್ಲೆ
ವಿದ್ಯುತ್ ಬಿಲ್ ಕೇಳಲು ಬಂದ ಸಿಬ್ಬಂದಿ ಮೇಲೆ ಕಾಂಗ್ರೆಸ್ ಮುಖಂಡನಿಂದ ಹಲ್ಲೆ
author img

By

Published : Jan 29, 2020, 5:10 AM IST

ಮಂಗಳೂರು: ವಿದ್ಯುತ್ ಬಿಲ್ ಕೇಳಲು ಹೋದ ಇಬ್ಬರು ಮೆಸ್ಕಾಂ ಸಿಬ್ಬಂದಿ ಮೇಲೆ ಕಾಂಗ್ರೆಸ್ ಮುಖಂಡನೋರ್ವ ಹಲ್ಲೆ ನಡೆಸಿದ ಘಟನೆ ಉಳ್ಳಾಲದಲ್ಲಿ ನಡೆದಿದೆ.

ಕಾಂಗ್ರೆಸ್ ಮುಖಂಡ ಅಮೀರ್ ತುಂಬೆ ಎಂಬಾತ ಮೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾನೆ. ಪಾವತಿಯಾಗದ ವಿದ್ಯುತ್ ಬಿಲ್ ಬಗ್ಗೆ ಮಾಹಿತಿ ಪಡೆಯಲು ಬಂದ ಮೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಲ್ಲದೆ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ.

ವಿದ್ಯುತ್ ಬಿಲ್ ಕೇಳಲು ಬಂದ ಸಿಬ್ಬಂದಿ ಮೇಲೆ ಕಾಂಗ್ರೆಸ್ ಮುಖಂಡನಿಂದ ಹಲ್ಲೆ

ಇತ್ತೀಚೆಗೆ ಸಿಎಎ, ಎನ್ಆರ್​ಸಿ ಕಾಯ್ದೆಯ ನೆಪವೊಡ್ಡಿ ಸರ್ಕಾರಿ ನೌಕರರಿಗೆ, ಅಂಗನವಾಡಿ ಕಾರ್ಯಕರ್ತರಿಗೆ ಉಳ್ಳಾಲ ವ್ಯಪ್ತಿಯಲ್ಲಿ ಮಾಹಿತಿ ನೀಡುತ್ತಿಲ್ಲ ಎಂಬ ಮಾತಿದೆ. ಈ ಪ್ರಕರಣವೂ ಸಿಎಎ, ಎನ್ಆರ್​ಸಿ ಕಾಯ್ದೆಯ ನೆಪವೊಡ್ಡಿ ಸರ್ಕಾರಿ ನೌಕರರಿಗೆ ಬೆದರಿಕೆ ಹುಟ್ಟಿಸುವ ಕೃತ್ಯ ನಡೆಸಲಾಗಿದೆ ಎಂಬ ಆರೋಪ ಕೇಳಿ ಬರುತ್ತಿದೆ.

ಈ ಬಗ್ಗೆ ಮೆಸ್ಕಾಂ ಸಿಬ್ಬಂದಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸರ್ಕಾರಿ ನೌಕರರ ಮೇಲೆ ಹಲ್ಲೆ ಹಾಗೂ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ.

Intro:ಮಂಗಳೂರು: ಕಾಂಗ್ರೆಸ್ ಮುಖಂಡನೋರ್ವ
ಪಾವತಿಯಾಗದ ವಿದ್ಯುತ್ ಬಿಲ್ ಕೇಳಲು ಹೋದ ಇಬ್ಬರು ಮೆಸ್ಕಾಂ ಸಿಬ್ಬಂದಿಗೆ ಹಲ್ಲೆ ನಡೆಸಿದ ಘಟನೆ ಇಂದು ಉಳ್ಳಾಲದಲ್ಲಿ ನಡೆದಿದೆ.

ಕಾಂಗ್ರೆಸ್ ಮುಖಂಡ ಅಮೀರ್ ತುಂಬೆ ಎಂಬಾತ ಮೆಸ್ಕಾಂ ಸಿಬ್ಬಂದಿಗೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದಾತ.

Body:ಅಮೀರ್ ತುಂಬೆ ತನ್ನ ಮನೆಗೆ ಪಾವತಿಯಾಗದ ವಿದ್ಯುತ್ ಬಿಲ್ ಬಗ್ಗೆ ಮಾಹಿತಿ ಪಡೆಯಲು ಬಂದ ಮೆಸ್ಕಾಂ ಸಿಬ್ಬಂದಿಗಳಿಗೆ ಹಲ್ಲೆ ನಡೆಸಿದ್ದಲ್ಲದೆ, ತನ್ನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆಂದು ಸುಳ್ಳು ಆರೋಪ ಹೊರಿಸಿದ್ದಾನೆ. ಇತ್ತೀಚೆಗೆ ಸಿಎಎ, ಎನ್ಆರ್ ಸಿ ಕಾಯ್ದೆಯ ನೆಪವೊಡ್ಡಿ ಸರಕಾರಿ ನೌಕರರಿಗೆ, ಅಂಗನವಾಡಿ ಕಾರ್ಯಕರ್ತರಿಗೆ ಉಳ್ಳಾಲ ಪರಿಸರದಲ್ಲಿ ಮಾಹಿತಿ ನೀಡುತ್ತಿಲ್ಲ ಎಂಬ ಆರೋಪ ಕೇಳಿ ಬರುತ್ತಿದೆ. ಈ ಪ್ರಕರಣವೂ ಸಿಎಎ, ಎನ್ಆರ್ ಸಿ ಕಾಯ್ದೆಯ ನೆಪವೊಡ್ಡಿ ಸರಕಾರಿ ನೌಕರರಿಗೆ ಬೆದರಿಕೆ ಹುಟ್ಟಿಸುವ ಕೃತ್ಯ ನಡೆಸಲಾಗಿದೆ ಎಂಬ ಆರೋಪ ಕೇಳಿ ಬರುತ್ತಿದೆ

ಈ ಬಗ್ಗೆ ಮೆಸ್ಕಾಂ ಸಿಬ್ಬಂದಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈತನ ಮೇಲೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಸರಕಾರಿ ನೌಕರರಿಗೆ ಹಲ್ಲೆ ಹಾಗೂ ಕರ್ತವ್ಯಕ್ಕೆ ಅಡ್ಡಿಪಡಿಸಿದ ಮೇಲೆ ದೂರು ದಾಖಲಾಗಿದೆ.

Reporter_Vishwanath PanjimogaruConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.