ETV Bharat / state

ಮೈಸೂರು ವಿಭಾಗೀಯ ಸಮಾವೇಶಕ್ಕೆ ಕಾಂಗ್ರೆಸ್ ಪೂರ್ವ ಸಿದ್ಧತಾ ಸಭೆ - ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್

ಪಾಣೆಮಂಗಳೂರು ಹಳೇ ಟೋಲ್ ಗೇಟ್ ಪಕ್ಕದ ಆಡಿಟೋರಿಯಂನಲ್ಲಿ ಮೈಸೂರು ವಿಭಾಗೀಯ ಸಮಾವೇಶ ನಡೆಯಲಿದ್ದು, ಇದರ ಪೂರ್ವಸಿದ್ಧತಾ ಸಭೆ ನಡೆಸಲಾಗಿದೆ.

Congress preparatory meeting for Mysore Divisional Conference In Bantwal
ಮೈಸೂರು ವಿಭಾಗೀಯ ಸಮಾವೇಶಕ್ಕೆ ಕಾಂಗ್ರೆಸ್ ಪೂರ್ವ ಸಿದ್ಧತಾ ಸಭೆ.
author img

By

Published : Jan 2, 2021, 5:05 PM IST

ಬಂಟ್ವಾಳ (ದ.ಕ): ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ನಿರ್ದೇಶನದಂತೆ ಜನವರಿ 6ರಂದು ಪಾಣೆಮಂಗಳೂರು ಹಳೇ ಟೋಲ್ ಗೇಟ್ ಪಕ್ಕದ ಆಡಿಟೋರಿಯಂನಲ್ಲಿ ಮೈಸೂರು ವಿಭಾಗೀಯ ಸಮಾವೇಶ ನಡೆಯಲಿದ್ದು, ಇದರ ಪೂರ್ವಸಿದ್ಧತಾ ಸಭೆ ಬಂಟ್ವಾಳದಲ್ಲಿ ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್ ನೇತೃತ್ವದಲ್ಲಿ ನಡೆಯಿತು.

ಈ ಸಂದರ್ಭ ಮಾತನಾಡಿದ ವಿಧಾನಪರಿಷತ್​​ ಸದಸ್ಯ, ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್, ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್​ನ ಕಾರ್ಯಕರ್ತರು, ನಾಯಕರು ಕಾರ್ಯಕ್ರಮದಲ್ಲಿ ಯಾವುದೇ ಲೋಪವಾಗದಂತೆ ಸಕಲ ಸಿದ್ಧತೆಗಳನ್ನು ಏರ್ಪಡಿಸುವಂತೆ ಸಲಹೆ ನೀಡಿದರು.

ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ, ಇದೇ ಮೊದಲ ಬಾರಿ ಪಕ್ಷದ ಮೈಸೂರು ವಿಭಾಗೀಯ ಮಟ್ಟದ ಸಮಾವೇಶ ನಡೆಸಲು ಕೆಪಿಸಿಸಿ ಅವಕಾಶ ನೀಡಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಹಿತ ರಾಜ್ಯದ ವಿವಿಧ ಜಿಲ್ಲೆಗಳ ನಾಯಕರು ಭಾಗವಹಿಸುವವರಿದ್ದಾರೆ. ಬಂಟ್ವಾಳಕ್ಕೆ ಇದೊಂದು ಉತ್ತಮ ಅವಕಾಶವಾಗಿದ್ದು, ಕಾಂಗ್ರೆಸ್ ಬಲವರ್ಧನೆಗೂ ಇದು ಸಹಕಾರಿಯಾಗಲಿದೆ ಎಂದು ವಿವರಿಸಿದರು.

ಈ ವೇಳೆ ಜಿ.ಪಂ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಪದ್ಮಶೇಖರ ಜೈನ್, ಎಂ.ಎಸ್.ಮಹಮ್ಮದ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೋ, ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್, ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕುಲಾಲ್, ಎಪಿಎಂಸಿ ಮಾಜಿ ಅಧ್ಯಕ್ಷ ಪದ್ಮನಾಭ ರೈ ಮೊದಲಾದವರಿದ್ದರು.

ಓದಿ: ಗ್ರಾಪಂ ಚುನಾವಣೆಯಲ್ಲಿ ಕೈ ಬೆಂಬಲಿತ ಅಭ್ಯರ್ಥಿಗಳಿಗೆ ಕಿರುಕುಳ, ಬೆದರಿಕೆ ಹಾಕಿದ ಬಿಜೆಪಿ : ಹರೀಶ್‌ಕುಮಾರ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.