ಮಂಗಳೂರು: ಇಲ್ಲಿನ ಯೆನಪೋಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಕಾಂಗ್ರೆಸ್ ನಾಯಕ, ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಅವರ ಆರೋಗ್ಯದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಆರಂಭವಾಗಿದ್ದು, ಇದು ಸುಳ್ಳು ಸುದ್ದಿ ಎಂದು ಮಂಗಳೂರು ಡಿಸಿಪಿ ಹರಿರಾಂ ಶಂಕರ್ ಸ್ಪಷ್ಟಪಡಿಸಿದ್ದಾರೆ.
ಆಸ್ಕರ್ ಫೆರ್ನಾಂಡಿಸ್ ಅವರು ವಿಧಿವಶರಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣ ಮತ್ತು ವೆಬ್ ಸೈಟ್ವೊಂದರಲ್ಲಿ ಸುಳ್ಳು ಸುದ್ದಿ ಪ್ರಸಾರವಾಗಿದ್ದು, ಇದರಿಂದ ಸಾಕಷ್ಟು ಮಂದಿ ಆತಂಕಗೊಳಗಾಗಿದ್ದರು. ಈ ಬಗ್ಗೆ ಆಸ್ಕರ್ ಫೆರ್ನಾಂಡಿಸ್ ಅವರ ಆಪ್ತ ಎಂ.ಎ.ಗಪೂರ್ ಈಟಿವಿ ಭಾರತ ಜೊತೆಗೆ ಮಾತನಾಡಿ, ಸಾಮಾಜಿಕ ಜಾಲತಾಣದಲ್ಲಿ ಬರುತ್ತಿರುವುದು ಸುಳ್ಳು ಸುದ್ದಿ, ಅವರ ಆರೋಗ್ಯಕ್ಕಾಗಿ ಪ್ರಾರ್ಥಿಸಿ ಎಂದು ಹೇಳಿದ್ದಾರೆ.
ಈ ಬಗ್ಗೆ ಮಂಗಳೂರು ಡಿಸಿಪಿ ಹರಿರಾಂ ಶಂಕರ್ ಸ್ಪಷ್ಟನೆ ನೀಡಿ, ಆಸ್ಕರ್ ಫೆರ್ನಾಂಡಿಸ್ ಅವರ ಆರೋಗ್ಯದ ಬಗ್ಗೆ ಹರಿದಾಡುತ್ತಿರುವ ಸುದ್ದಿ ಸುಳ್ಳು. ಅವರು ಯೆನಪೋಯ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಆಸ್ಕರ್ಗೆ ಡಯಾಲಿಸಿಸ್ ಶುರು: ಡಿಕೆಶಿ ಭೇಟಿ ಸಾಧ್ಯತೆ