ಮಂಗಳೂರು: ಕುಡಿಯುವ ನೀರು, ಕೃಷಿ ಚಟುವಟಿಕೆ ಹಾಗೂ ಅಂತರ್ಜಲ ಅಭಿವೃದ್ಧಿಗೆ ಪೂರಕವಾಗಿ ಅಂದಾಜು 174 ಕೋಟಿ ರೂ. ವೆಚ್ಚದಲ್ಲಿ ನೇತ್ರಾವತಿ ನದಿಗೆ ಸೇತುವೆ ಸಹಿತ ಉಪ್ಪು ನೀರು ತಡೆ ಅಣೆಕಟ್ಟು ನಿರ್ಮಾಣವಾಗಲಿದೆ ಎಂದು ಸಣ್ಣ ನೀರಾವರಿ ಸಚಿವರು ಜೆ.ಸಿ. ಮಾಧುಸ್ವಾಮಿ ಹೇಳಿದರು.
ನಗರದ ಹರೇಕಳ ಸಮೀಪದಲ್ಲಿ ನೇತ್ರಾವತಿ ನದಿಗೆ ಸೇತುವೆ ಸಹಿತ ಉಪ್ಪು ನೀರು ತಡೆ ಅಣೆಕಟ್ಟು ನಿರ್ಮಾಣ ಕಾಮಗಾರಿಯ ಪರಿವೀಕ್ಷಣೆ ಮಾಡಿ ಮಾತನಾಡಿದ ಅವರು, ಉಪ್ಪುನೀರು ತಡೆ ಅಣೆಕಟ್ಟು ಸಹಿತ ಸಂಪರ್ಕ ಸೇತುವೆ ನಿರ್ಮಿಸುವುದು ಈ ಭಾಗದ ಜನರ ಬಹುದಿನದ ಬೇಡಿಕೆಯಾಗಿದ್ದು, ಅದರಂತೆ ಹರೇಕಳದ ಎಡ ದಂಡೆಯಿಂದ ಅಡ್ಯಾರು-ಕಣ್ಣೂರಿನ ಬಲದಂಡೆಯವರೆಗೆ ನೇತ್ರಾವತಿ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಿಸಲಾಗುತ್ತದೆ. ಈ ಕಾಮಗಾರಿ ಪ್ರಗತಿಯಲ್ಲಿದ್ದು, ಶೀಘ್ರದಲ್ಲಿ ಪೂರ್ಣಗೊಳ್ಳಲಿದೆ ಎಂದು ಹೇಳಿದರು.
ನೇತ್ರಾವತಿ ನದಿಗೆ 174 ಕೋಟಿ ರೂ. ವೆಚ್ಚದಲ್ಲಿ ಸೇತುವೆ, ಉಪ್ಪು ನೀರು ತಡೆ ಅಣೆಕಟ್ಟು ನಿರ್ಮಾಣ: ಮಾಧುಸ್ವಾಮಿ
ಬಹುಪಯೋಗಿ ಯೋಜನೆಯಾಗಿದ್ದು, ಇದರಿಂದ ಸಿಹಿ ನೀರನ್ನು ಸಂಗ್ರಹಿಸಲಾಗುತ್ತದೆ. ಸಂಗ್ರಹಗೊಂಡ ನೀರನ್ನು ಶುದ್ಧೀಕರಿಸಿ, ಗ್ರಾಮಗಳಿಗೆ ಶಾಶ್ವತವಾದ ಕುಡಿಯುವ ನೀರನ್ನು ಪೂರೈಸಲು ಸಾಧ್ಯವಾಗುತ್ತದೆ. ಜತೆಗೆ ಕೃಷಿ ಚಟುವಟಿಕೆಗಳಿಗೆ ಉಪಯೋಗಿಸಲು ಅನುಕೂಲವಾಗುತ್ತದೆ. ಇದರಿಂದಾಗಿ ಅಂತರ್ಜಲ ಮಟ್ಟವು ವೃದ್ಧಿಯಾಗುತ್ತದೆ. ಈ ಸಂಪರ್ಕ ಸೇತುವೆಯಿಂದ ನದಿಯ ಎರಡೂ ಭಾಗದಲ್ಲಿ ವಾಸಿಸುವ ಜನರಿಗೆ ಸಾಮಾಜಿಕ ಹಾಗೂ ಆರ್ಥಿಕ ಸ್ಥಿತಿಯನ್ನು ಉತ್ತಮಗೊಳಿಸಿಲು ಸಹಕಾರಿಯಾಗಲಿದೆ ಎಂದು ಮಾಧುಸ್ವಾಮಿ ಹೇಳಿದರು.